CricketLatestMain PostSports

ಶತಕ ಸಿಡಿಸಿ ಸಚಿನ್, ಕೊಹ್ಲಿ, ಸ್ಮಿತ್ ಜೊತೆ ಸ್ಥಾನ ಪಡೆದ ರೂಟ್

Advertisements

ಲಂಡನ್: ಲಾರ್ಡ್ಸ್ ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಪ್ರಮುಖ ಬ್ಯಾಟ್ಸ್‌ಮ್ಯಾನ್ ಜೋ ರೂಟ್ ತಂಡದ ಗೆಲುವಿನ ಶತಕ ಗಳಿಸುವುದರೊಂದಿಗೆ ಟೆಸ್ಟ್‌ನಲ್ಲಿ 10 ಸಾವಿರ ರನ್‍ಗಳ ಗಡಿಯನ್ನು ದಾಟಿದ್ದಾರೆ.

ಎರಡನೇ ಇನ್ನಿಂಗ್ಸ್‌ನಲ್ಲಿ ಔಟಾಗದೇ 115 ರನ್(170 ಎಸೆತ, 12 ಬೌಂಡರಿ) ಹೊಡೆದರು. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 1-0 ಮುನ್ನಡೆ ಸಾಧಿಸಿದೆ.

ಟೆಸ್ಟ್ ಕ್ರಿಕೆಟ್‍ನಲ್ಲಿ ಮೈಲುಗಲ್ಲನ್ನ ತಲುಪಿದ ವಿಶ್ವದ 14ನೇ ಕ್ರಿಕೆಟಿಗರಾಗಿದ್ದಾರೆ. ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ತಂಡದ ಸ್ಟೀವ್ ಸ್ಮಿತ್, ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಈ ಹಿಂದೆ 10 ಸಾವಿರ ರನ್ ಹೊಡೆದಿದ್ದರು. ಈಗ ಈ ದಿಗ್ಗಜರ ಪಟ್ಟಿಗೆ ರೂಟ್ ಈಗ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಮೈದಾನದಲ್ಲೇ ಬ್ಯಾಟ್‍ನಲ್ಲಿ ಮ್ಯಾಜಿಕ್ ಮಾಡಿದ ರೂಟ್

ಟೆಸ್ಟ್ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ರನ್ ಹೊಡೆದ ಆಟಗಾರರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದಾರೆ. 20 ಟೆಸ್ಟ್ ಆಡಿರುವ ಸಚಿನ್ 329 ಇನ್ನಿಂಗ್ಸ್‌ನಿಂದ 15,921 ರನ್ ಹೊಡೆದಿದ್ದಾರೆ.

ಇಂಗ್ಲೆಂಡ್ ಪರ 10 ಸಾವಿರ ರನ್ ಹೊಡೆದ ಎರಡನೇ ಆಟಗಾರನಾಗಿ ಜೋ ರೂಟ್ ಹೊರ ಹೊಮ್ಮಿದ್ದಾರೆ. ಈ ಹಿಂದೆ ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಅಲಸ್ಟೈರ್ ಕುಕ್ ಟೆಸ್ಟ್‌ನಲ್ಲಿ 161 ಪಂದ್ಯಗಳನ್ನು ಆಡಿ 12,472 ರನ್ ಹೊಡೆದಿದ್ದಾರೆ. ಇದನ್ನೂ ಓದಿ: 22ನೇ ಗ್ರ್ಯಾನ್ ಸ್ಲಾಂನ ಕಿರೀಟ ಮುಡಿಗೇರಿಸಿಕೊಂಡ ನಡಾಲ್ – ನಾರ್ವೆಯ ಕಾಸ್ಪರ್ ರೂಡ್‍ಗೆ ನಿರಾಸೆ

31 ವರ್ಷದ ಜೋ ರೂಟ್ 118 ಪಂದ್ಯಗಳ 218 ಇನ್ನಿಂಗ್ಸ್‌ಗಳಿಂದ 10,015 ರನ್ ಹೊಡೆದಿದ್ದಾರೆ. ಇಲ್ಲಿಯವರೆಗೆ ಒಟ್ಟು 26 ಶತಕ, 53 ಅರ್ಧಶತಕ ಹೊಡೆದಿದ್ದಾರೆ.

Leave a Reply

Your email address will not be published.

Back to top button