ಲಂಡನ್: ಟೆಸ್ಟ್ ಸರಣಿಗಳಲ್ಲಿ ಸತತ ಸೋಲು ಕಂಡ ಬಳಿಕ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕತ್ವದಿಂದ ಜೋ ರೂಟ್ ಕೆಳಗಿಳಿಯಲು ನಿರ್ಧರಿಸಿದ್ದಾರೆ.
Advertisement
ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್ ಮತ್ತು ಆಶಸ್ ಟೆಸ್ಟ್ ಸರಣಿಯಲ್ಲಿ ಸತತ ಸೋಲು ಕಂಡ ಬಳಿಕ ಜೋ ರೂಟ್ ಟೆಸ್ಟ್ ನಾಯಕತ್ವ ತ್ಯಜಿಸಿದ್ದಾರೆ. ನಾನು ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದು, ಇಂಗ್ಲೆಂಡ್ ತಂಡದ ನಾಯಕತ್ವ ತ್ಯಜಿಸುತ್ತಿದ್ದೇನೆ. ಪ್ರಸ್ತುತ ನಾಯಕತ್ವದಿಂದ ಕೆಳಗಿಳಿಯಲು ಸರಿಯಾದ ಸಮಯವೆಂದು ಭಾವಿಸಿದ್ದೇನೆ ಎಂಬುದಾಗಿ ಜೋ ರೂಟ್ ತಿಳಿಸಿದ್ದಾರೆ ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಹೇಳಿಕೆ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಪಾಂಡ್ಯ ಆಲ್‍ರೌಂಡರ್ ಆಟ ರಾಜಸ್ಥಾನ ಪರದಾಟ – ಮುಂದುವರಿದ ಗುಜರಾತ್ ಗೆಲುವಿನ ಓಟ
Advertisement
Advertisement
2027ರಲ್ಲಿ ಅಲೆಸ್ಟರ್ ಕುಕ್ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ನೀಡಿದ ಬಳಿಕ ಜೋ ರೂಟ್ ಇಂಗ್ಲೆಂಡ್ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಆ ಬಳಿಕ ಭಾರತ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್ ಸರಣಿಯನ್ನು 4-1 ಅಂತರದಲ್ಲಿ ಗೆದ್ದು ಸಂಭ್ರಮಿಸಿದ್ದರು. 2020ರಲ್ಲಿ ಸೌತ್ ಆಫ್ರಿಕಾ ವಿರುದ್ಧ 3-1 ಅಂತರದಲ್ಲಿ ಸರಣಿ ಗೆದ್ದು ನಾಯಕತ್ವದ ಉತ್ತುಂಗದಲ್ಲಿದ್ದರು. ಆ ಬಳಿಕ ಸತತ ಸೋಲುಗಳನ್ನು ಕಂಡ ಇಂಗ್ಲೆಂಡ್ ತಂಡ ಪ್ರತಿಷ್ಠಿತ ಸರಣಿಗಳನ್ನು ಕೈಚೆಲ್ಲಿ ಮಂಕಾಗಿತ್ತು. ನಂತರ ರೂಟ್ ನಾಯಕತ್ವ ತ್ಯಜಿಸಬೇಕೆಂಬ ಕೂಗು ಕೇಳಿ ಬರುತ್ತಿತ್ತು. ಇದೀಗ ಸ್ವತಃ ರೂಟ್ ನಾಯಕತ್ವಕ್ಕೆ ಗುಡ್ ಬೈ ಹೇಳಿದ್ದಾರೆ. ಇದನ್ನೂ ಓದಿ: ಧೋನಿಯೇ ಮುಖ್ಯವಾದ್ರೆ ಉಳಿದ ಆಟಗಾರರು ಲಸ್ಸಿ ಕುಡಿಯಲು ಹೋಗಿದ್ರಾ: ಭಜ್ಜಿ ಪ್ರಶ್ನೆ
Advertisement
Thank You, @root66 ❤️
— England Cricket (@englandcricket) April 15, 2022
ರೂಟ್ ಈವರೆಗೆ ನಾಯಕನಾಗಿ ಇಂಗ್ಲೆಂಡ್ ತಂಡವನ್ನು 64 ಪಂದ್ಯಗಳಲ್ಲಿ ಮುನ್ನಡೆಸಿದ್ದು, 27 ಪಂದ್ಯಗಳಲ್ಲಿ ಜಯ, 26 ಪಂದ್ಯಗಳಲ್ಲಿ ಸೋಲು ಕಂಡಿದ್ದಾರೆ. 14 ಶತಕ, 26 ಅರ್ಧಶತಕ ಸಹಿತ 5,295 ರನ್ ಸಿಡಿಸಿದ್ದಾರೆ.