Wednesday, 15th August 2018

Recent News

ಹುಳು ತುಂಬಿದ ನೀರನ್ನೇ ಕುಡಿಯುವ ದುಸ್ಥಿತಿ ಯಾದಗಿರಿಯ ಜೋಗಂಡಭಾವಿ ಗ್ರಾಮಸ್ಥರದ್ದು!

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಜೋಗಂಡಭಾವಿ ಗ್ರಾಮಸ್ಥರಿಗೆ ಹುಳುಗಳಿಂದಲೇ ಆವೃತವಾಗಿರುವ ನೀರಿನ್ನೇ ಕುಡಿಯುವಂತಹ ದುಸ್ಥಿತಿ ಎದುರಾಗಿದೆ.

ಈ ಗ್ರಾಮದಲ್ಲಿರುವುದು ಒಂದೇ ಬಾವಿ. ಈ ಬಾವಿಯಿಂದ ನೀರಿನ ಟ್ಯಾಂಕ್ ಮೂಲಕ ನೀರು ಪೂರೈಸಲಾಗುತ್ತೆ. ಸರ್ಕಾರ ಕೋಟಿ ಕೋಟಿ ರೂಪಾಯಿ ಕುಡಿಯುವ ನೀರು ಯೋಜನೆಗೆ ಅನುದಾನ ಬಿಡುಗಡೆ ಮಾಡಿದ್ರೂ ಕಿಂಚಿತ್ತು ಪ್ರಯೋಜನವಾಗಿಲ್ಲ.

 

ಜೋಗಂಡಭಾವಿ ಗ್ರಾಮದಲ್ಲಿ ಹಲವು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆಯಿದೆ. ಆದ್ರೂ ಜಿಲ್ಲಾಪಂಚಾಯತ್ ಹಾಗೂ ಸಂಬಂಧಪಟ್ಟ ಅಧಿಕಾರಿಳು ಶುದ್ಧ ಕುಡಿಯುವ ನೀರು ಪೂರೈಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ.

ಇನ್ನು ಈ ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಕೊಳವೆ ಬಾವಿ ಮಂಜೂರಾದ್ರೂ ಕಾರ್ಯರೂಪಕ್ಕೆ ಬಂದಿಲ್ಲ. ಕುಡಿಯುವ ನೀರಿನ ಸಮಸ್ಯೆ ಎದರಿಸುವ ಗ್ರಾಮಸ್ಥರು ಗ್ರಾಮಪಂಚಾಯತ್ ಮುಂದೆ ಪ್ರತಿಭಟಿಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಗೊಂಡು ಜೋಗಂಡಭಾವಿ ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಪೂರೈಸುವ ಕೆಲಸ ಮಾಡಬೇಕಾಗಿದೆ.

Leave a Reply

Your email address will not be published. Required fields are marked *