ಬೆಂಗಳೂರು: ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮೇಕ್ ಇನ್ ಇಂಡಿಯಾ, ಸ್ಟ್ಯಾಂಡ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಮತ್ತು ಡಿಜಿಟಲ್ ಇಂಡಿಯಾವನ್ನು ಉತ್ತೇಜಿಸುವ ಮೂಲಕ ಸ್ವಾವಲಂಬಿ ಭಾರತವನ್ನು ಕಟ್ಟಲು ಭಾರತೀಯರು ಮುಂದಾಗಬೇಕು ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ.
Advertisement
ಭಾರತದ ಸ್ವಾತಂತ್ರ‍್ಯದ 75 ವರ್ಷಗಳ ಸ್ಮರಣಾರ್ಥ `ಆಜಾದಿ ಕಾ ಅಮೃತ್ ಮಹೋತ್ಸವ’ದ ವಿಶೇಷ ಅಂಚೆ ಕವರ್ ಅನ್ನು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಗಣೇಶೋತ್ಸವಕ್ಕೆ ಡಬಲ್ ಸೌಂಡ್ ಹಚ್ಚಿ ಮೆರವಣಿಗೆ ಮಾಡಿ, ಏನ್ ಮಾಡ್ತಾರೆ ನೋಡೋಣ: ಪ್ರಮೋದ್ ಮುತಾಲಿಕ್
Advertisement
ಅಮೃತ ಮಹೋತ್ಸವ ಹಬ್ಬವನ್ನು ಭಾರತದ ಜನತೆಗೆ ಸಮರ್ಪಿಸಲಾಗಿದೆ. ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಎಫ್‌ಕೆಸಿಸಿಐ ಮತ್ತು ಅಂಚೆ ಇಲಾಖೆಯಿಂದ ವಿಶೇಷ ಅಂಚೆ ಕವರ್ ಬಿಡುಗಡೆ ಮಾಡಿರುವುದು ಸಂತಸದ ವಿಷಯ ಎಂದು ಹೇಳಿದ್ದಾರೆ.
Advertisement
Advertisement
ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರು ಸ್ಥಾಪಿಸಿದ ಎಫ್‌ಕೆಸಿಸಿಐ ಸಂಸ್ಥೆಗೆ 106 ವರ್ಷ. ಎಫ್‌ಕೆಸಿಸಿಐ ಕರ್ನಾಟಕ ರಾಜ್ಯದಲ್ಲಿ ಉದ್ಯಮ, ವ್ಯಾಪಾರ ಮತ್ತು ಸೇವಾ ವಲಯದಲ್ಲಿ ಸಕ್ರಿಯ ಮತ್ತು ಸಕಾರಾತ್ಮಕ ಪಾತ್ರವನ್ನು ವಹಿಸುತ್ತಿದೆ. ಭಾರತಕ್ಕೆ ಸ್ವಾತಂತ್ರ‍್ಯ ಬಂದು 75 ವರ್ಷಗಳಾದ ಸಂದರ್ಭದಲ್ಲಿ ಎಫ್‌ಕೆಸಿಸಿಐ ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಅಡಿಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ದೇಶದ ಏಕತೆ ಮತ್ತು ಸಮಗ್ರತೆಗಾಗಿ ಶ್ರಮಿಸುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಕನ್ನಡದ ಹಿರಿಯ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ: ವಾಣಿಜ್ಯ ಮಂಡಳಿಯಿಂದ ಅಭಿನಂದನಾ ಕಾರ್ಯಕ್ರಮ
ಸ್ವಾತಂತ್ರ‍್ಯ ಚಳವಳಿಯ ಇತಿಹಾಸದಂತೆ, 75 ವರ್ಷಗಳ ಪ್ರಯಾಣವು ಭಾರತೀಯರ ಕಠಿಣ ಪರಿಶ್ರಮ, ನಾವೀನ್ಯತೆ, ಉದ್ಯಮಶೀಲತೆಯ ಪ್ರತಿಬಿಂಬವಾಗಿದೆ. ಇಂದು ಭಾರತದ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಯು ವಿಶ್ವದ ಆಕರ್ಷಣೆಯ ಕೇಂದ್ರವಾಗಿದೆ. ಭಾರತದ ಸಾಮರ್ಥ್ಯ ಮತ್ತು ಭಾರತದ ಪ್ರತಿಭೆ ಪ್ರಪಂಚದ ಪ್ರತಿಯೊಂದು ಹಂತದಲ್ಲೂ ಪ್ರತಿಧ್ವನಿಸುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಆದಾಯ, ವಸತಿ ಮತ್ತು ನೀರು, ಆರೋಗ್ಯ ಸೌಲಭ್ಯಗಳು ಇತ್ಯಾದಿಗಳಿಗೆ ವಿವಿಧ ವಿನೂತನ ಮತ್ತು ಅಂತರ್ಗತ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿವೆ ಮತ್ತು ದೇಶದ ಸರ್ವತೋಮುಖ ಅಭಿವೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಉದ್ದೇಶದಿಂದ ಮೂಲ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯವು ದೇಶದ ಜಿಡಿಪಿಗೆ ಶೇ.8.8 ರಷ್ಟು ಕೊಡುಗೆ ನೀಡುವ ಮೂಲಕ ಭಾರತದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುತ್ತಿದೆ. ಕೈಗಾರಿಕೆ, ಸೇವಾ ಮತ್ತು ಕೃಷಿ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡುತ್ತಿದೆ. ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕವು ದೇಶದ 2ನೇ ಅತಿದೊಡ್ಡ ರಾಜ್ಯವಾಗಿದೆ. 2024ರ ವೇಳೆಗೆ ದೇಶವು 5 ಟ್ರಿಲಿಯನ್ ಆರ್ಥಿಕತೆಯ ಗುರಿ ಸಾಧಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಮಗೆ ಸ್ವಾತಂತ್ರ‍್ಯ ನೀಡಿದ ಎಲ್ಲ ಮಹಾಪುರುಷರಿಗೆ ನನ್ನ ನಮನ. ಈ ವಿಶೇಷ ಸಂದರ್ಭದಲ್ಲಿ ನಾವು ಒಂದು ಸಂಕಲ್ಪವನ್ನು ತೆಗೆದುಕೊಳ್ಳಬೇಕು. ಸ್ವಾತಂತ್ರ‍್ಯವನ್ನು ಅಖಂಡವಾಗಿ ಉಳಿಸಿಕೊಳ್ಳಲು ಮತ್ತು ದೇಶಭಕ್ತಿಯ ವಾತಾವರಣ ಸೃಷ್ಟಿಸಲು ಒಗ್ಗೂಡಿ ಮುನ್ನಡೆಯಬೇಕಾಗಿದೆ ಎಂದು ಹೇಳಿದ್ದಾರೆ.
ಎಫ್‌ಕೆಸಿಸಿಐ ಅಧ್ಯಕ್ಷ ಡಾ.ಸಿ.ಎ.ಐ.ಎಸ್ ಪ್ರಸಾದ್ ಹಾಗೂ ಅಂಚೆ ಇಲಾಖೆಯ ಮುಖ್ಯ ಪೋಸ್ಟ್ಮಾಸ್ಟರ್ ಜನರಲ್ ರಾಜೇಂದ್ರ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.