Bengaluru CityDistrictsKarnatakaLatestMain Post

PFI ಸೇರಿ ಪೋಸ್ಟರ್ – ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗದಲ್ಲಿ (Shivamogga) ಪಿಎಫ್‌ಐ ಸೇರಿ (Join PFI) ಎಂಬ ಪೋಸ್ಟರ್‌ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿಎಫ್‌ಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ಕಿಡಿಕಾರಿದರು.

PFI ಸೇರಿ ಪೋಸ್ಟರ್ - ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಬೊಮ್ಮಾಯಿ

ಮಹಾರಾಷ್ಟ್ರದ ಮಂತ್ರಿಗಳು ಬೆಳಗಾವಿಗೆ ಬರುವುದು ಸೂಕ್ತವಲ್ಲ ಎಂದು ಲಿಖಿತವಾಗಿ ಸೂಚಿಸಿದ್ದರೂ ಬರುತ್ತಿರುವುದು ಸರಿ ಎನಿಸುತ್ತಿಲ್ಲ. ಯಾರು ಎಲ್ಲಿ ಬೇಕಾದರೂ ಓಡಾಡುವ ಸ್ವಾತಂತ್ರ‍್ಯವಿದೆ ಎಂಬುದು ನಮಗೂ ತಿಳಿದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಂಬಂಧಪಟ್ಟ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ನಮ್ಮ ಸರ್ಕಾರ ಕೆಲವು ಕ್ರಮಕೈಗೊಳ್ಳಲು ಸೂಚನೆ ನೀಡಿದೆ ಎಂದರು. ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ವಿವಾದ- ಮುನಿಯಪ್ಪ, ರಮೇಶ್ ಕುಮಾರ್ ವಿರುದ್ಧ ಆಕ್ರೋಶ

PFI ಸೇರಿ ಪೋಸ್ಟರ್ - ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಬೊಮ್ಮಾಯಿ

ಗಡಿ ವಿವಾದ ಬಗೆಹರಿದಿದ್ದರೂ ಸುಪ್ರೀಂ ಕೋರ್ಟ್‌ನಲ್ಲಿ ವ್ಯಾಜ್ಯ ಹೂಡಿದ್ದಾರೆ. ಕಾನೂನಾತ್ಮಕವಾಗಿ ಇಬ್ಬರೂ ಹೋರಾಡುತ್ತೇವೆ. ಆದರೆ ಎರಡೂ ರಾಜ್ಯದ ಜನರು ಸಾಮರಸ್ಯದಿಂದಿದ್ದು, ಇಲ್ಲಿ ಕಾನೂನು ಸುವ್ಯವಸ್ಥೆ ಕದಡುವ ಯಾವುದೇ ಕೆಲಸ ಮಾಡಬಾರದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುವುದಾಗಿ ತಿಳಿಸಿದರು. ಇದನ್ನೂ ಓದಿ: ದಕ್ಷಿಣ ಭಾರತದ ಅತಿದೊಡ್ಡ ಅಗ್ನಿಪಥ ರ‍್ಯಾಲಿ ಇಂದಿನಿಂದ ಬೀದರ್‌ನಲ್ಲಿ ಆರಂಭ

Live Tv

Leave a Reply

Your email address will not be published. Required fields are marked *

Back to top button