ಆಡಿಲೇಡ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2022ರ ಟಿ20 ವಿಶ್ವಕಪ್‍ನಲ್ಲಿ (T20 World Cup) ಐರ್ಲೆಂಡ್ (Ireland) ಬೌಲರ್ ಜೋಶುವಾ ಲಿಟಲ್ (Joshua Little) ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಜೋಶುವಾ ಲಿಟಲ್ ಹ್ಯಾಟ್ರಿಕ್ ವಿಕೆಟ್ ಪಡೆದು 2022ರ ಟಿ20 ವಿಶ್ವಕಪ್‍ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಈ ಮೊದಲು ಅರ್ಹತಾ ಸುತ್ತಿನಲ್ಲಿ ಯುಎಇಯ ಕಾರ್ತಿಕ್ ಮಯ್ಯಪ್ಪನ್ ಹ್ಯಾಟ್ರಿಕ್ ಪಡೆದಿದ್ದರು. ಇದನ್ನೂ ಓದಿ: ಆಫ್ರಿಕಾಗೆ ಸೋಲು – ಚಿಗುರಿಕೊಂಡ ಪಾಕಿಸ್ತಾನದ ಸೆಮಿಫೈನಲ್ ಕನಸು
ಕಿವೀಸ್ ವಿರುದ್ಧ 19ನೇ ಎಸೆದ ಜೋಶುವಾ ಲಿಟಲ್ ಮೊದಲು ಕೇನ್ ವಿಲಿಯಮ್ಸನ್ ವಿಕೆಟ್ ಪಡೆದರೆ ಮುಂದಿನ ಎರಡು ಎಸೆತಗಳಲ್ಲಿ ಜೆಮ್ಮಿ ನಿಶಾಮ್ ಮತ್ತು ಮಿಚೆಲ್ ಸ್ಯಾಂಟ್ನರ್ ವಿಕೆಟ್ ಪಡೆದು ಹ್ಯಾಟ್ರಿಕ್ ಸಾಧನೆ ಮಾಡಿದರು. ಇದನ್ನೂ ಓದಿ: ಬಾಂಗ್ಲಾ ಸೋತ ಬಳಿಕ ಕೊಹ್ಲಿ ವಿರುದ್ಧ ಫೇಕ್ ಫೀಲ್ಡಿಂಗ್ ಆರೋಪ
View this post on Instagram
ಈ ಪಂದ್ಯದಲ್ಲಿ ಐರ್ಲೆಂಡ್ ಸೋಲುನುಭವಿಸಿದೆ. ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 185 ರನ್ ಬಾರಿಸಿತು. 186 ರನ್‍ಗಳ ಟಾರ್ಗೆಟ್ ಬೆನ್ನಟ್ಟಿದ ಐರ್ಲೆಂಡ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 150 ರನ್ ಗಲಿಸಲಷ್ಟೇ ಶಕ್ತವಾಯಿತು. ಈ ಮೂಲಕ 35 ರನ್‍ಗಳ ಭರ್ಜರಿ ಜಯದೊಂದಿಗೆ ಕಿವೀಸ್ ಸೆಮಿಫೈನಲ್ ಹಾದಿ ಮತ್ತಷ್ಟು ಸುಗಮಗೊಂಡಿದೆ.