Connect with us

Districts

ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ – ಪತ್ರಕರ್ತ ಸಂತೋಷ್ ತಮ್ಮಯ್ಯ ಅರೆಸ್ಟ್

Published

on

ಮಡಿಕೇರಿ: ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪತ್ರಕರ್ತ ಸಂತೋಷ್ ತಮ್ಮಯ್ಯ ಅವರನ್ನು ಕೊಡಗು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನವಂಬರ್ 5 ರಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪದಲ್ಲಿ ನಡೆದ ಟಿಪ್ಪು ಕರಾಳ ಮುಖಗಳ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂತೋಷ್ ತಮ್ಮಯ್ಯ ಪ್ರವಾದಿಗಳನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕೊಡಗಿನ ಸಿದ್ದಾಪುರದ ಆಸಿಫ್ ಎಂಬವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂತೋಷ್ ಸೇರಿದಂತೆ ಐವರ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ತುಮಕೂರಿನ ಮಧುಗಿರಿಯಲ್ಲಿದ್ದ ಸಂತೋಷ್ ತಮ್ಮಯ್ಯ ಅವರನ್ನು ಗೋಣಿಕೊಪ್ಪ ಪೊಲೀಸರು ಬಂಧಿಸಿ ಕರೆತಂದಿದ್ದಾರೆ.

ಸಂತೋಷ್ ಬಂಧನಕ್ಕೆ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಗೋಣಿಕೊಪ್ಪದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸದ್ಯ ಸಂತೋಷ್ ತಮ್ಮಯ್ಯ ನನ್ನು ಗೋಣಿಕೊಪ್ಪ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜಾಮೀನು ಸಿಗುವ ಸಾಧ್ಯತೆ ಇದೆ.

ಈ ಪ್ರಕರಣದಲ್ಲಿ ಎಫ್‍ಐಆರ್ ದಾಖಲಾಗಿರುವ ಇನ್ನೂ ನಾಲ್ವರಾದ ಬಾಚರಣಿಯಂಡ ಪಿ.ಅಪ್ಪಣ್ಣ, ಅಡ್ಡಂಡ ಕಾರ್ಯಪ್ಪ, ಸುಧಾಕರ್ ಹೊಸಳ್ಳಿ, ರಾಬರ್ಟ್ ರೊಜಾರಿಯೋ ಬಂಧನ ಭೀತಿ ಎದುರಾಗಿದೆ.

ಈ ನಡುವೆ ದುಬೈಯಲ್ಲಿ ಕೊಡಗಿನ ನಿವಾಸಿ ಆಸೀಫ್ ಸಾಮಾಜಿಕ ಜಾಲತಾಣ ಮೂಲಕ ಪ್ರವಾದಿ ಭೋದನೆ ಭಯತ್ಪಾದನೆ ಕುಮ್ಮಕ್ಕು ನೀಡವಂತೆಯಿದೆ ಎಂಬುದನ್ನು ಸಾಬೀತುಪಡಿಸಿ ಎಂದು ಸವಾಲು ಹಾಕಿದ್ದಾನೆ. ನಿಮ್ಮ ರಾಜಕೀಯಕ್ಕೆ ಪ್ರವಾದಿ ಅವರ ಹೆಸರನ್ನು ಬಳಸಬೇಡಿ. ಇದೇ ಮುಂದುವರಿದರೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾನೆ.

ಕೊಡಗಿನ ಪೊನ್ನಂಪೇಟೆ ಕೋರ್ಟ್ ನಲ್ಲಿ ನ್ಯಾಯಾಧೀಶರು ಸಂತೋಷ್ ಅವರನ್ನು ಅರ್ಧ ಗಂಟೆಗೂ ಅಧಿಕ ಸಮಯ ವಿಚಾರಣೆ ನಡೆಸಿದ್ದಾರೆ. ಅಲ್ಲದೇ ಮತ್ತೆ 5 ಗಂಟೆಗೆ ವಿಚಾರಣೆಯನ್ನು ಮುಂದೂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Click to comment

Leave a Reply

Your email address will not be published. Required fields are marked *

www.publictv.in