CrimeLatestNational

ಮಹಿಳಾ ಪತ್ರಕರ್ತೆ ಮೇಲೆ ಮಧ್ಯರಾತ್ರಿ ಗುಂಡಿನ ದಾಳಿ

ನವದೆಹಲಿ: ಮುಖಕ್ಕೆ ಮಾಸ್ಕ್ ಹಾಕಿಕೊಂಡ ಅಪರಿಚಿತ ವ್ಯಕ್ತಿಗಳ ಗುಂಪೊಂದು ಮಧ್ಯರಾತ್ರಿ ಮಹಿಳಾ ಪತ್ರಕರ್ತೆಯ ಮೇಲೆ ಗುಂಡಿನ ದಾಳಿ ಮಾಡಿ ಹತ್ಯೆಗೆ ಯತ್ನಿಸಿರುವ ಘಟನೆ ದೆಹಲಿಯ ವಸುಂಧರಾ ಎನ್‍ಕ್ಲೇವ್‍ನಲ್ಲಿ ನಡೆದಿದೆ.

ಈ ಘಟನೆ ಶನಿವಾರ ಮಧ್ಯರಾತ್ರಿ ಸುಮಾರು 12:30ಕ್ಕೆ ನಡೆದಿದ್ದು, ನೋಯ್ಡಾ ನಿವಾಸಿ ಮಿತಾಲಿ ಚಂದೋಲಾ ಮೇಲೆ ಗುಂಡಿನ ದಾಳಿ ನಡೆದಿದೆ. ಮಿತಾಲಿ ಚಂದೋಲಾ ಅವರು ತಮ್ಮ ಹ್ಯುಂಡೈ ಐ 20 ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಆಗ ಮಾರುತಿ ಸ್ವಿಫ್ಟ್ ಕಾರೊಂದು ಇದ್ದಕ್ಕಿದ್ದಂತೆ ಪತ್ರಕರ್ತೆಯ ಕಾರನ್ನು ಓವರ್ ಟೇಕ್ ಮಾಡಿ ಅಡ್ಡಗಟ್ಟಿದೆ. ಬಳಿಕ ಮಾಸ್ಕ್ ಹಾಕಿಕೊಂಡಿದ್ದ ಕೆಲವು ಪುರುಷರು ಆಕೆಯ ಮೇಲೆ ಎರಡು ಬಾರಿ ಗುಂಡಿನ ದಾಳಿ ಮಾಡಿದ್ದಾರೆ.

ಒಂದು ಗುಂಡು ಕಾರಿನ ಮುಂಭಾಗದ ವಿಂಡ್ ಷೀಲ್ಡ್ ಗೆ ತಾಕಿದೆ. ಇನ್ನೊಂದು ಗುಂಡು ಆಕೆಯ ಕೈಗೆ ಬಿದ್ದಿದೆ ಎಂದು ಪೊಲೀಸರು ಹೇಳಿದರು. ಆದರೆ ಪತ್ರಕರ್ತೆ ಕಾರಿನ ಮೇಲೆ ಮೊಟ್ಟೆಗಳನ್ನು ಎಸೆದಿದ್ದಾರೆ ಎಂದು ಪೊಲೀಸರಿಗೆ ಹೇಳಿದ್ದಾರೆ.

ಸದ್ಯಕ್ಕೆ ಮಿತಾಲಿಯನ್ನು ದೆಹಲಿಯ ಧರ್ಮಶಾಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ವೇಳೆ ವಾಹನ ಸವಾರರಿಗೆ ಮೊಟ್ಟೆಗಳಿಂದ ಹೊಡೆದು ದರೋಡೆ ಮಾಡುವ ಗ್ಯಾಂಗ್ ಈ ದಾಳಿಯಲ್ಲಿ ಭಾಗಿಯಾಗಿದೆಯಾ ಎಂದು ತನಿಖೆ ನಡೆಸುತ್ತಿದ್ದೇನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ರಕರ್ತೆ ಮಿತಾಲಿ ಅವರ ಕುಟುಂಬದೊಂದಿಗೆ ಉತ್ತಮ ಸಂಬಂಧ ಹೊಂದಿಲ್ಲ ಎಂದು ತಿಳಿದು ಬಂದಿದೆ. ಅವರ ಕೈಗೆ ಬುಲೆಟ್ ಗಾಯಗಳಾಗಿವೆ. ಆದರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೊಂದು ಕುಟುಂಬ ವಿವಾದದ ಪ್ರಕರಣ ಎಂಬ  ಶಂಕೆ ವ್ಯಕ್ತವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಜಸ್ಮೀತ್ ಸಿಂಗ್ ತಿಳಿಸಿದ್ದಾರೆ.

ಸದ್ಯಕ್ಕೆ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದು, ದರೋಡೆ ಯತ್ನ ಸೇರಿದಂತೆ ಬೇರೆ ಆಯಾಮಗಳಲ್ಲು ತನಿಖೆಯನ್ನು ಮುಂದುವರಿಸಿದ್ದಾರೆ. ಈ ಹಿಂದೆ 2008 ರಲ್ಲಿ 26 ವರ್ಷದ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಅವರನ್ನು ದೆಹಲಿಯ ವಸಂತ್ ಕುಂಜ್‍ನಲ್ಲಿ ಗುಂಡಿಕ್ಕಿ ಹತ್ಯೆಮಾಡಲಾಗಿತ್ತು.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Leave a Reply

Your email address will not be published.

Back to top button