ಹುಬ್ಬಳ್ಳಿ: ನಾಯಕತ್ವದ ಬದಲಾವಣೆ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅಭಯ ನೀಡಿದ್ದಾರೆ.
ಖಾಸಗಿ ಹೋಟೆಲ್‍ನಲ್ಲಿ ಸಂಪುಟ ವಿಸ್ತರಣೆ ಬಗ್ಗೆ ನಡ್ಡಾ ಸಿಎಂ ಮಧ್ಯೆ ಸುಮಾರು 35 ನಿಮಿಷಗಳ ಕಾಲ ಮಹತ್ವದ ಚರ್ಚೆ ನಡೆದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳಂಕರಹಿತ, ಜನಪರ ಆಡಳಿತ ಕೊಡಿ. ನಾಯಕತ್ವದ ಬದಲಾವಣೆ ಬಗ್ಗೆ ಚಿಂತಿಸದಿರಿ. ಮುಂದಿನ ಚುನಾವಣೆಯಲ್ಲಿ ಪಕ್ಷ ನಿಚ್ಚಳ ಬಹುಮತದೊಂದಿಗೆ ಗೆದ್ದು ಅಧಿಕಾರಕ್ಕೆ ಬರುವುದರ ಬಗ್ಗೆ ನಿಮ್ಮ ಲಕ್ಷ್ಯ ಆಗಿರಲಿ ಎಂದು ಸಲಹೆ ನೀಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
Advertisement
Advertisement
ದೆಹಲಿಗೆ ಹೋದ ಬಳಿಕ ಸಂಪುಟ ಪುನಾರಚನೆಗೆ ಮುಹೂರ್ತ ತಿಳಿಸುತ್ತೇನೆ. ಈ ಬಾರಿ ಎಲೆಕ್ಷನ್ ಕ್ಯಾಬಿನೆಟ್ ರಚನೆ ಆಗುತ್ತದೆ. ಸಂಪುಟ ಪುನಾರಚನೆ ಬಗ್ಗೆ ಈಗಾಗಲೇ ಹೈಕಮಾಂಡ್ ಒಲವು ತೋರಿದ್ದು, ಬಹುತೇಕ ಈ ತಿಂಗಳ ಅಂತ್ಯಕ್ಕೆ ಸಂಪುಟ ವಿಸ್ತರಣೆ ಮಾಡುವುದು ಎಂದು ಸುಳಿವು ನೀಡಿದ್ದಾರೆ. ಮಂಗಳೂರಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ – ಮೂವರು ಕಾರ್ಮಿಕರ ಸಾವು
Advertisement
Advertisement
ನಾಯಕತ್ವ ವಿರುದ್ಧ ಮಾತಾಡುವವರಿಗೆ ಎಚ್ಚರಿಕೆ ನೀಡಿದ ಅವರು, ನಾಯಕತ್ವದ ವಿರುದ್ಧ ಗುಸುಗುಸು ಮಾತನಾಡುವವರ ಬಗ್ಗೆ ಮಾ ಹಿತಿ ಕೊಡಿ. ಅಂತಹವರನ್ನು ಈಗಲೇ ಮಟ್ಟ ಹಾಕಬೇಕು. ಚುನಾವಣಾ ವರ್ಷದಲ್ಲಿ ಈ ಬೆಳವಣಿಗೆ ಸರಿಯಲ್ಲ ಸೂಚಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಹಿಂಸಾಚಾರ ಪೂರ್ವನಿಯೋಜಿತ ಸಂಚು: ಬಿರುಗಾಳಿ ಎಬ್ಬಿಸಿದ ವಾಟ್ಸಪ್ ಆಡಿಯೋ