Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ಬೂತ್ ಮಟ್ಟದ ಕಾರ್ಯಕರ್ತರಿಗೆ ಜೆ.ಪಿ ನಡ್ಡಾ ಬೂಸ್ಟ್; ಬಿಜೆಪಿ ಗೆಲುವಿಗೆ ಪಣ ತೊಡುವಂತೆ ಕರೆ

Public TV
Last updated: February 21, 2023 8:17 am
Public TV
Share
5 Min Read
JP Nadda 5
SHARE

ಚಿಕ್ಕಮಗಳೂರು/ಉಡುಪಿ: ಬಿಜೆಪಿ (BJP) ರಾಜ್ಯ ಸರ್ಕಾರವು ಸಬ್ ಕಾ ಸಾಥ್.. ಸಬ್ ಕಾ ವಿಕಾಸ್ ದೃಷ್ಟಿಕೋನದಿಂದ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ತಿಳಿಸಿದರು.

ಉಡುಪಿಯಲ್ಲಿ (Udupi) ಜಿಲ್ಲಾ ಬೂತ್ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನ ತಳಮಟ್ಟದಲ್ಲಿ ಬಲಪಡಿಸಿ. ಬಿಜೆಪಿ ಸರ್ಕಾರಗಳ ವಿಶೇಷ ಸಾಧನೆಗಳನ್ನು ಜನರಿಗೆ ತಿಳಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಶ್ರಮಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ರೂಪಾ, ರೋಹಿಣಿ ಘನತೆ ಕಾಪಾಡುವಂತೆ ಮೋದಿ ಸಲಹೆ ನೀಡಬೇಕು- ಜಗ್ಗೇಶ್

JP Nadda 2

ಮೋದಿಜಿ ಅವರ 9 ವರ್ಷದ ಆಡಳಿತ ಮತ್ತು ರಾಜ್ಯದಲ್ಲಿ ಯಡಿಯೂರಪ್ಪ (BS Yediyurappa) ಹಾಗೂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸರ್ಕಾರದ ಮೂಲಕ ರಾಜ್ಯದ ಎಲ್ಲ ವರ್ಗದ ಜನತೆಯ ಸಶಕ್ತೀಕರಣ ಕಾರ್ಯ ನಡೆದಿದೆ. ಹಾಗಾಗಿ ಡಬಲ್ ಎಂಜಿನ್ ಸರ್ಕಾರದ ಸಾಧನೆಯನ್ನು ಜನರಿಗೆ ತಿಳಿಸಬೇಕು ಎಂದರು.

ಕೋವಿಡ್ ಸಂದರ್ಭದಲ್ಲಿ ಮೋದಿಜಿ (Narendra Modi) ಅವರ ನೇತೃತ್ವದಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಿಂದ 80 ಕೋಟಿ ಜನರು ಪ್ರಯೋಜನ ಪಡೆದರು. ಜನರು ಹಸಿವಿನಿಂದ ಸಾಯುವುದು ತಪ್ಪಿತು. ಆದರೆ ಪ್ಲೇಗ್‌ನಿಂದ ಬಹಳಷ್ಟು ಜನರು ಸತ್ತಿದ್ದರು ಎಂದು ನೆನಪಿಸಿದರು. ಇದನ್ನೂ ಓದಿ: ಯತೀಂದ್ರ ಸಿದ್ದರಾಮಯ್ಯಗೆ ವರುಣಾ ಟಿಕೆಟ್‌ – ಡಿಕೆಶಿ ಘೋಷಣೆ

JP Nadda 4

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3.50 ಕೋಟಿ ಮನೆ ನಿರ್ಮಿಸಲಾಗಿದೆ. ಹಿಂದೆ ನಾನು ಶಾಸಕನಾಗಿದ್ದಾಗ 2 ಪಂಚಾಯಿತಿಗೆ ಒಂದು ಇಂದಿರಾ ಆವಾಸ್ ಮನೆ ನೀಡುತ್ತಿದ್ದರು. ಆದ್ರೆ ಬಿಜೆಪಿ ಸರ್ಕಾರದಿಂದ ಕರ್ನಾಟಕದಲ್ಲಿ 9 ಲಕ್ಷ ಮನೆಗಳನ್ನ ನಿರ್ಮಿಸಲಾಗುತ್ತಿದೆ. ಜೊತೆಗೆ ಕೊಳೆಗೇರಿಗಳ ಸಂಖ್ಯೆ ಕಡಿಮೆ ಆಗಿದೆ. ಉಜ್ವಲ, ಉಜಾಲಾ, ಸ್ವಚ್ಛತಾ ಅಭಿಯಾನ, ಶೌಚಾಲಯ ನಿರ್ಮಾಣ ಕಾರ್ಯವೂ ಜನರ ಸಶಕ್ತೀಕರಣಕ್ಕೆ ಕಾರಣವಾಗಿದೆ ಎಂದು ವಿವರಿಸಿದರು.

ಕರ್ನಾಟಕದಲ್ಲಿ ಗರಿಷ್ಠ ವಿದೇಶಿ ನೇರ ಹೂಡಿಕೆ ಬರುತ್ತಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಕರ್ನಾಟಕದ ಕೊಡುಗೆ ಶೇ.25 ರಷ್ಟಿದೆ. ರಕ್ಷಣಾ ಕ್ಷೇತ್ರದಲ್ಲಿ ಶೇ.75 ರಷ್ಟು ಕೊಡುಗೆ ಈ ರಾಜ್ಯದ್ದು. ರಾಜ್ಯದ ಬಿಜೆಪಿ ಸರ್ಕಾರವು ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಿಸಿದೆ. ರೈತ ವಿದ್ಯಾನಿಧಿ ಮೂಲಕ ಲಕ್ಷಾಂತರ ಮಕ್ಕಳಿಗೆ ಪ್ರಯೋಜನವಾಗಿದೆ ಎಂದು ವಿವರಿಸಿದರು.

JP Nadda

ವಂದೇ ಭಾರತ್ ಎಕ್ಸ್ಪ್ರೆಸ್ ಮೂಲಕ ಸಂಪರ್ಕ ಕ್ರಾಂತಿ ಆಗುತ್ತಿದೆ. ಕೆಂಪೇಗೌಡ ವಿಮಾನ ನಿಲ್ದಾಣ ಆಧುನೀಕರಣ ಕಾರ್ಯ ನಡೆದಿದೆ. ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲಾಗಿದೆ. ಕರ್ನಾಟಕದ ಅಭಿವೃದ್ಧಿಗೆ ಹೆಚ್ಚುವರಿ ಹಣವನ್ನು ಕೇಂದ್ರ ಸರ್ಕಾರ ನೀಡಿದೆ. ಈ ಮೂಲಕ ಕರ್ನಾಟಕವು ದೇಶದ 2ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲಿದೆ ಎಂದು ಶ್ಲಾಘಿಸಿದರು.

ಬ್ರಿಟನ್ ದೇಶವು 2 ಶತಮಾನಗಳ ಕಾಲ ನಮ್ಮನ್ನು ಆಳಿತ್ತು. ಆ ದೇಶವನ್ನು ಭಾರತವು ಹಿಂದಿಕ್ಕಿ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಫ್ರಾನ್ಸ್, ಅಮೆರಿಕಗಳು ನಮ್ಮಿಂದ ವಿಮಾನಗಳನ್ನು ಆಮದು ಮಾಡಿಕೊಳ್ಳುವ ಹಂತಕ್ಕೆ ನಾವು ತಲುಪಿದ್ದೇವೆ. ಎಲೆಕ್ಟ್ರಾನಿಕ್ ವಸ್ತುಗಳ ಉತ್ಪಾದನೆ ಮತ್ತು ರಫ್ತಿನಲ್ಲಿ, ಮೊಬೈಲ್ ಉತ್ಪಾದನೆಯಲ್ಲಿ ನಾವು ಗಮನಾರ್ಹ ಸಾಧನೆ ಮಾಡಿದ್ದೇವೆ. 2014 ಮತ್ತು ಅದಕ್ಕಿಂತ ಹಿಂದೆ ಶೇ.92ರಷ್ಟು ಮೊಬೈಲ್‌ಗಳನ್ನು ವಿದೇಶದಿಂದ ತರಲಾಗುತ್ತಿತ್ತು. ಈಗ ಶೇ.97 ರಷ್ಟು ಮೊಬೈಲ್‌ಗಳನ್ನ ಆಂತರಿಕವಾಗಿ ಉತ್ಪಾದಿಸಲಾಗುತ್ತಿದೆ. ಔಷಧಿ, ಉಕ್ಕು ಉತ್ಪಾದನೆಯಲ್ಲೂ ನಾವು ಮಹತ್ವದ ಸಾಧನೆ ಮಾಡಿದ್ದೇವೆ. ಕಾರು ಉತ್ಪಾದನೆಯಲ್ಲೂ ನಾವು ಹಿಂದೆ ಇದ್ದೆವು. ನಾವು ಆಟೋ ಮೊಬೈಲ್ ಕ್ಷೇತ್ರದಲ್ಲಿ ಈಗ ಜಪಾನನ್ನು ಹಿಂದಿಕ್ಕಿ 3ನೇ ಅತಿ ದೊಡ್ಡ ಉತ್ಪಾದನಾ ರಾಷ್ಟ್ರವಾಗಿದ್ದೇವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

JP Nadda 6

ಉಕ್ರೇನ್- ರಷ್ಯಾ ಯುದ್ಧದ ಸಂದರ್ಭದಲ್ಲಿ ಉಕ್ರೇನ್‌ನಿಂದ ಸಾವಿರಾರು ವಿದ್ಯಾರ್ಥಿಗಳನ್ನು ಕರೆತರಲು ಭಾರತವು ಸಮರ್ಥ ಹೆಜ್ಜೆ ಇಟ್ಟಿತು. ಎರಡೂ ದೇಶಗಳ ಮುಖ್ಯಸ್ಥರ ಜೊತೆ ಮೋದಿಜಿ ಮಾತನಾಡಿದರಲ್ಲದೆ ಯುದ್ಧ ಸ್ಥಗಿತದ ಮೂಲಕ ಸುರಕ್ಷಿತವಾಗಿ ಮಕ್ಕಳನ್ನು ಕರೆತರಲು ಕಾರಣರಾದರು. ನಮ್ಮ ಪಕ್ಷ ಜನಪರ, ಜವಾಬ್ದಾರಿಯುತ ಎಂದು ಹೆಮ್ಮೆಯಿಂದ ಹೇಳಬಹುದು. ಕೋವಿಡ್ ವೇಳೆ ಅಮೆರಿಕದಲ್ಲಿ ಶೇ 76, ಯೂರೋಪ್‌ನಲ್ಲಿ ಶೇ.67 ರಷ್ಟು ಜನರಿಗೆ ಲಸಿಕೆ ಹಾಕಲಾಗಿದೆ. ಚೀನಾದಲ್ಲಿ ಎಷ್ಟು ಶೇಕಡಾ ಲಸಿಕೆ ಕೊಡಲಾಗಿದೆ ಎಂದು ಗೊತ್ತಿಲ್ಲ. ನಾವು ಮೋದಿಜಿ ಅವರ ನೇತೃತ್ವದಲ್ಲಿ ಎಲ್ಲ ಜನರಿಗೆ ಶೇ.100ರಷ್ಟು ಡಬಲ್ ಡೋಸ್, ಬೂಸ್ಟರ್ ಉಚಿತ ಲಸಿಕೆ ಕೊಟ್ಟಿದ್ದೇವೆ. ಇದು ಜನಪರ ನಿಲುವು ಎಂದು ವಿವರಿಸಿದರು.

ಎಲ್ಲ ಪಕ್ಷಗಳು ಇಂದು ಕೌಟುಂಬಿಕ ಪಕ್ಷವಾಗಿವೆ. ಕಾಂಗ್ರೆಸ್ ಪಕ್ಷವೂ ಕುಟುಂಬದಿಂದ ಹೊರತಾಗಿಲ್ಲ. ಸಮಾಜವಾದಿ ಪಕ್ಷ, ರಾಷ್ಟ್ರೀಯ ಜನತಾದಳ, ಶಿವಸೇನಾ, ಟಿಆರ್‌ಎಸ್, ಡಿಎಂಕೆ- ಹೀಗೆ ಎಲ್ಲವೂ ಪರಿವಾರವಾದದ ಪಕ್ಷಗಳಾಗಿವೆ. ಆದರೆ, ಬಿಜೆಪಿ ಸಮರ್ಥ ವಿಚಾರಧಾರೆ ಹೊಂದಿದೆ ಮತ್ತು ಕೌಟುಂಬಿಕ ಪಕ್ಷವಾಗಿಲ್ಲ ಎಂದು ವಿವರಿಸಿದರು. ಬಿಜೆಪಿ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವೇ ಒಂದು ಕುಟುಂಬದಂತಿದೆ ಎಂದು ಹೇಳಿದರು.

JP Nadda 3

ಬಿಜೆಪಿ ಕಾರ್ಯಕರ್ತರಾಗುವ ಸೌಭಾಗ್ಯ ಸಿಕ್ಕಿದೆ ಎಂಬ ಆಶಾಭಾವ ನಮ್ಮ ಕಾರ್ಯಕರ್ತರಲ್ಲಿದೆ. ವೈಚಾರಿಕ ದೃಷ್ಟಿಕೋನ, ಕೇಡರ್ ಇರುವ ಪಕ್ಷ ಬಿಜೆಪಿ. ಶ್ಯಾಮಪ್ರಸಾದ ಮುಖರ್ಜಿ ಅವರ ಚಿಂತನೆಯನ್ನು ಮೋದಿಜಿ ಅವರು 370ನೇ ವಿಧಿ ರದ್ದು ಮಾಡುವ ಮೂಲಕ ಸಾಕಾರಗೊಳಿಸಿದ್ದಾರೆ. ಮಾಧ್ವರು ಸ್ಥಾಪಿಸಿದ ಪವಿತ್ರ ಸ್ಥಾನ ಶ್ರೀಕೃಷ್ಣನ ಮಠಕ್ಕೆ ಇಂದು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದೇನೆ. ಸ್ವಾಮೀಜಿಗಳಿಂದ ಆಶೀರ್ವಾದ ಲಭಿಸಿದೆ. ಉಡುಪಿ ಕೃಷ್ಣಮಠದ ಆಶೀರ್ವಾದವು ಪಕ್ಷಕ್ಕೆ ಹೆಚ್ಚಿನ ಬಲ ನೀಡಲಿದೆ ಎಂದು ಆಶಿಸಿದರು.

ಬಿಜೆಪಿಯ ಚರಿತ್ರೆಯಲ್ಲಿ ಉಡುಪಿಗೆ ವಿಶೇಷ ಸ್ಥಾನ ಇದೆ. ಕರ್ನಾಟಕ, ಕೇಂದ್ರದಲ್ಲಿ ಹಲವು ಬಾರಿ ನಾವು ಆಡಳಿತ ಮಾಡಿದ್ದೇವೆ. ಉಡುಪಿ ಸ್ಥಳೀಯ ಸಂಸ್ಥೆಯಲ್ಲಿ ಹಲವು ದಶಕಗಳ ಹಿಂದೆಯೇ ಪಕ್ಷವು ಆಡಳಿತದಲ್ಲಿತ್ತು. ಅದು ದಕ್ಷಿಣ ಭಾರತದ ಬಿಜೆಪಿ ಆಡಳಿತದ ಹೆಬ್ಬಾಗಿಲು ಎಂದು ನೆನಪಿಸಿದರು.

ಉಡುಪಿಯ ಡಾ.ವಿ.ಎಸ್ ಆಚಾರ್ಯ ಮತ್ತು ನನ್ನ ನಡುವೆ 25 ರಿಂದ 30 ವರ್ಷಗಳ ಅಂತರವಿದೆ. ವಯಸ್ಸಿನ ಅಂತರವಿದ್ದರೂ ಅವರು ಮತ್ತು ನನ್ನ ನಡುವೆ ಉತ್ತಮ ಮಿತ್ರತ್ವ ಇತ್ತು. ನಾನು ಯುವ ಘಟಕದ ಅಧ್ಯಕ್ಷನಾಗಿ ಪ್ರಾಮಾಣಿಕ- ಸರಳ ವ್ಯಕ್ತಿತ್ವದ ಆಚಾರ್ಯರ ಮಾರ್ಗದರ್ಶನ ಪಡೆದಿದ್ದೆ ಎಂದು ಹೇಳಿದರು.

JP Nadda

ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಮಾತನಾಡಿ, ಬೂತ್ ಗೆಲುವಿನ ಮೂಲಕ ರಾಜ್ಯದ ಗೆಲುವಿಗೆ ಕಾರ್ಯಕರ್ತರು ಸಂಕಲ್ಪ ಮಾಡಬೇಕು. ಈ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆದ್ದೇ ಗೆಲ್ಲಲಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಡ್ರೆಸ್ ಹೊಲಿಸಿ ಕಾಯುತ್ತಿರುವ ವಿರೋಧ ಪಕ್ಷದವರು ಮತ್ತೊಮ್ಮೆ ನಿರುದ್ಯೋಗಿಗಳಾಗಲಿದ್ದಾರೆ. ಯಡಿಯೂರಪ್ಪ ಅವರ ಮಾರ್ಗದರ್ಶನ ಮತ್ತು ಬೊಮ್ಮಾಯಿಯವರ ನೇತೃತ್ವದಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬರಲಿದೆ. ಅದಕ್ಕಾಗಿ ಮತ್ತೆ ಅಹರ್ನಿಶಿ ದುಡಿಯೋಣ ಎಂದು ಕಾರ್ಯಕರ್ತರನ್ನು ಪ್ರೇರೇಪಿಸಿದರು.

ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಸಚಿವರಾದ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್, ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಶ್ರೀನಿವಾಸ ನಾಯಕ್, ಪಕ್ಷದ ಪ್ರಮುಖರು ವೇದಿಕೆಯಲ್ಲಿದ್ದರು.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpCT RaviJP NaddaNalin Kumar Kateeludupiಉಡುಪಿಜೆಪಿ ನಡ್ಡಾನಳಿನ್ ಕುಮಾರ್ ಕಟೀಲ್ಸಿ.ಟಿ ರವಿ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Belgavi DCC Bank elections Jarkiholi Brothers checkmate for Lingayat leaders meeting 2
Belgaum

DCC Bank Election| ಲಿಂಗಾಯತ ನಾಯಕರ ಸಭೆಗೆ ಜಾರಕಿಹೊಳಿ ಬ್ರದರ್ಸ್‌ ಚೆಕ್‌ಮೇಟ್!

Public TV
By Public TV
30 minutes ago
Rameshwaram Cafe
Bengaluru City

ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಜಿರಳೆ ಪತ್ತೆ ಕೇಸ್ – ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಆರೋಪದಡಿ ಗ್ರಾಹಕನ ವಿರುದ್ಧ ದೂರು

Public TV
By Public TV
41 minutes ago
Chikkamagaluru Pickup Falls Into Bhadra River
Chikkamagaluru

Kalasa | ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ – ಯುವಕ ಸಾವು

Public TV
By Public TV
55 minutes ago
Rahul Gandhi 4
Latest

ಕರ್ನಾಟಕದಲ್ಲಿ ವಂಚನೆ | ರಾಹುಲ್‌ ಆರೋಪಕ್ಕೆ ಹೈಕೋರ್ಟ್ ತೀರ್ಪಿಗಾಗಿ ಕಾಯಿರಿ ಎಂದ ಚುನಾವಣಾ ಆಯೋಗ

Public TV
By Public TV
1 hour ago
Mysuru Dasara Eshwar Khandre
Bengaluru City

ಆ.4ರಂದು ವೀರನಹೊಸಳ್ಳಿಯಲ್ಲಿ ದಸರಾ ಗಜಪಯಣ – ಈ ಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು

Public TV
By Public TV
1 hour ago
DK Shivakumar 9
Bengaluru City

ರಾಹುಲ್ ಗಾಂಧಿ ಆರೋಪ ನಿಜ, ಬೆಂ.ಗ್ರಾಮಾಂತರ ಕ್ಷೇತ್ರದ ಮತದಾನದಲ್ಲೂ ಗೋಲ್ಮಾಲ್ ನಡೆದಿದೆ – ಡಿಕೆಶಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?