ಶಿಮ್ಲಾ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾರತವನ್ನು ವಿಶ್ವಗುರುವನ್ನಾಗಿ ಮಾಡಲು ಬದ್ಧವಾಗಿದೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ತಿಳಿಸಿದರು.
ಕಾರ್ಯಕಮವೊಂದರಲ್ಲಿ ಮಾತನಾಡಿದ ಅವರು, ದಡಾರ ಮತ್ತು ಪೋಲಿಯೊಯಂತಹ ರೋಗಗಳಿಗೆ ಲಿಸಿಕೆಗಳನ್ನು ಅಭಿವೃದ್ಧಿ ಪಡಿಸಲು ವರ್ಷಗಳೇ ಬೇಕಾದವು. ಆದರೆ ಮೋದಿ ನೇತೃತ್ವದಲ್ಲಿ ದೇಶದಲ್ಲಿ ಮೊದಲ ಕೊರೊನಾ ಪ್ರಕರಣ ವರದಿಯಾದ ಒಂಬತ್ತು ತಿಂಗಳೊಳಗೆ ಲಸಿಕೆಯನ್ನು ಸಿದ್ಧಪಡಿಸಲಾಯಿತು ಎಂದರು.
Advertisement
Advertisement
ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನವನ್ನು ದೇಶದಲ್ಲಿ ಯಶಸ್ವಿಯಾಗಿ ಪ್ರಾರಂಭಿಸಲಾಗಿದೆ. ದೇಶದ ಜನರಿಗೆ 190 ಕೋಟಿಗೂ ಹೆಚ್ಚು ಲಸಿಕೆ ಡೋಸ್‍ಗಳನ್ನು ಉಚಿತವಾಗಿ ನೀಡಲಾಗಿದೆ ಎಂದರು. ಇದನ್ನೂ ಓದಿ: ಬಸ್‌ನಲ್ಲಿ ಬೆಂಕಿ ದುರಂತ – ವೈಷ್ಣೋದೇವಿ ಯಾತ್ರೆಗೆ ತೆರಳಿದ್ದ ನಾಲ್ವರು ಸಾವು
Advertisement
ಉಕ್ರೇನ್‍ನಲ್ಲಿ ಸಿಲುಕಿರುವ 23,000ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳನ್ನು ಮರಳಿ ಕರೆತರುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಅವರಲ್ಲಿ ಸುಮಾರು 430 ವಿದ್ಯಾರ್ಥಿಗಳು ಹಿಮಾಚಲ ಪ್ರದೇಶದವರು ಎಂದು ಹೇಳಿದರು.
Advertisement
ಪಾಕಿಸ್ತಾನದ ವಿದ್ಯಾರ್ಥಿಗಳು ಸಹ ತಮ್ಮ ವಾಹನಗಳ ಮೇಲೆ ಭಾರತದ ಧ್ವಜಗಳನ್ನು ಹಾರಿಸುವ ಮೂಲಕ ಉಕ್ರೇನ್‍ನಿಂದ ಹೊರಬರುವಲ್ಲಿ ಯಶಸ್ವಿಯಾದರು. ಇದು ಭಾರತವನ್ನು ಬದಲಾಯಿಸುವ ಚಿತ್ರವಾಗಿದೆ. ಈ ರೀತಿಯ ಸಾಧನೆಗೆ ಪ್ರಧಾನಿ ಮೋದಿಯವರ ಪ್ರಬಲ ನಾಯಕತ್ವದಿಂದ ಮಾತ್ರ ಸಾಧ್ಯವಾಯಿತು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಾಹ್ಯಾಕಾಶದಿಂದ ನೆಲಕ್ಕೆ ಅಪ್ಪಳಿಸಿದ ಲೋಹದ ಚೆಂಡುಗಳು – ಮೂರು ಗ್ರಾಮದಲ್ಲಿ ಕಂಪನ