ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ, ರಾಷ್ಟ್ರಾಧ್ಯಕ್ಷ, ರಕ್ಷಣಾ ಸಚಿವ ಹಾಗೂ ಕರ್ನಾಟಕ ಮುಖ್ಯಮಂತ್ರಿಗುರು ಮಹಾಮಾರಿ ಕೊರೊನಾ ಸೋಂಕು ವಕ್ಕರಿಸಿಕೊಂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಹಾರ ಸಿಎಂ ನಿತಿಶ್ ಕುಮಾರ್ ಹಾಗೂ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್
Advertisement
ಈ ಸಂಬಂಧ ಟ್ವೀಟ್ ಮೂಲಕ ಎಲ್ಲರೂ ಮಾಹಿತಿ ನೀಡಿದ್ದಾರೆ. ಜೆಪಿ ನಡ್ಡಾ ಟ್ವೀಟ್ ಮಾಡಿ, ಆರಂಭಿಕ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದೇನೆ. ನನ್ನ ರಿಪೋಟ್ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ವೈದ್ಯರ ಸೂಚನೆಯಂತೆ ನಾನು ಸ್ವಯಂ ಐಸೋಲೇಟ್ ಆಗಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಯಾರೆಲ್ಲ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಕೊರೊನಾ
Advertisement
शुरुआती लक्षण दिखने पर मैंने अपना कोविड टेस्ट करवाया।मेरी रिपोर्ट पॉज़िटिव आई है।अभी मैं स्वस्थ महसूस कर रहा हूँ। डॉक्टर्स की सलाह पर मैंने खुद को आइसोलेट कर लिया है।
पिछले कुछ दिनों में जो लोग भी मेरे संपर्क में आए हैं, उनसे अनुरोध है कि अपनी जाँच करवा लें।
— Jagat Prakash Nadda (@JPNadda) January 10, 2022
Advertisement
ಬೆಳಗ್ಗೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಕೊರೊನಾ ಬಂದಿರುವುದಾಗಿ ತಿಳಿಸಿದ್ದರು. ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದರು. ಇದನ್ನೂ ಓದಿ: ಸಚಿವ ಆರ್. ಅಶೋಕ್‍ಗೆ ಕೊರೊನಾ ಪಾಸಿಟಿವ್
Advertisement
ಇತ್ತ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಮನೆಯಲ್ಲೇ ಐಸೊಲೇಟ್ ಆಗಿದ್ದಾರೆ. ನನಗೆ ಸೌಮ್ಯ ರೋಗಲಕ್ಷಣ ಇತ್ತು. ಪರೀಕ್ಷೆಗೆ ಒಳಗಾದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿದ್ದವರು ಐಸೊಲೇಟ್ ಆಗಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿ ತಿಳಿಸಿದ್ದಾರೆ.
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.#Covid_19
— Basavaraj S Bommai (@BSBommai) January 10, 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ಮೂಲಕ ಸಿಎಂ ಎರಡನೇ ಬಾರಿ ಮಹಾಮಾರಿಯನ್ನು ಎದುರಿಸುತ್ತಿದ್ದಾರೆ. ಕೊರೊನಾ ಬಂದಿರುವ ಕುರಿತು ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಅವರು, ಸೌಮ್ಯ ಲಕ್ಷಣಗಳು ಇದ್ದದ್ದರಿಂದ ಕೊರೊನಾ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಸ್ವಯಂ ಐಸೊಲೇಟ್ ಆಗಿ ಎಂದು ಮನವಿ ಮಾಡಿಕೊಂಡಿದ್ದಾರೆ.
ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ.
ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.
— Nalinkumar Kateel (@nalinkateel) January 10, 2022
ಗೌರವಾನ್ವಿತ ಸಿಎಂ ನಿತೀಶ್ ಕುಮಾರ್ ಅವರ ಕೊರೊನಾ ಪರೀಕ್ಷೆಯು ಪಾಸಿಟಿವ್ ಎಂದು ಪತ್ತೆಯಾಗಿದೆ. ವೈದ್ಯರ ಸಲಹೆಯ ಪ್ರಕಾರ, ಅವರು ಮನೆಯಲ್ಲಿ ಪ್ರತ್ಯೇಕವಾಗಿರುತ್ತಾರೆ. ವೈರಸ್ ವಿರುದ್ಧ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಅವರು ಎಲ್ಲರಿಗೂ ಮನವಿ ಮಾಡಿದ್ದಾರೆ ಎಂದು ಬಿಹಾರದ ಸಿಎಂಒ ಟ್ವೀಟ್ ಮಾಡಿದೆ.