ನವದೆಹಲಿ: 2024ರ ಜೂನ್‌ವರೆಗೂ ಜೆ.ಪಿ.ನಡ್ಡಾ (J.P.Nadda) ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ (BJP National President) ಮುಂದುವರಿಯಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಘೋಷಿಸಿದ್ದಾರೆ. 2024ರಲ್ಲಿ ಲೋಕಸಭಾ ಚುನಾವಣೆ (Lok Sabha Election 2024) ನಡೆಯಲಿದ್ದು, ಅಲ್ಲಿವರೆಗೂ ನಡ್ಡಾ ಅವರನ್ನೇ ಮುಂದುವರಿಸಿರುವುದು ಕುತೂಹಲ ಮೂಡಿಸಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿಯಲು ಪಣತೊಟ್ಟಿದೆ. ಹೀಗಾಗಿ ಸಾರ್ವತ್ರಿಕ ಚುನಾವಣೆಯಲ್ಲಿ ನಡ್ಡಾ ಅವರ ಪ್ರಾಮುಖ್ಯತೆ ಅರಿತು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು, ಮುಂದಿನ ವರ್ಷದ ಜೂನ್ ವರೆಗೂ ನಡ್ಡಾ ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರ ಅವಧಿಯನ್ನು ವಿಸ್ತರಿಸಲು ಸರ್ವಾನುಮತದಿಂದ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ನಡ್ಡಾ ನೇತೃತ್ವದಲ್ಲಿ ಪಕ್ಷವು 2024 ರ ಲೋಕಸಭೆ ಚುನಾವಣೆಯಲ್ಲಿ 2019 ಕ್ಕಿಂತ ದೊಡ್ಡ ಜನಾದೇಶದೊಂದಿಗೆ ಗೆಲ್ಲುತ್ತದೆ ಎಂದು ನಮಗೆ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಾಸಕ ಯತ್ನಾಳ್ ನಡೆ ಬಗ್ಗೆ ಪಕ್ಷದ ಆಂತರಿಕ ಸಭೆಯಲ್ಲಿ ಚರ್ಚಿಸಿದೆ: ಸಿ.ಟಿ ರವಿ
Advertisement
Advertisement
2020 ರಲ್ಲಿ ಅಮಿತ್ ಶಾ ಅವರಿಂದ ಪಕ್ಷದ ಉನ್ನತ ಹುದ್ದೆಯನ್ನು ವಹಿಸಿಕೊಂಡ ನಡ್ಡಾ ಅವರ ಅವಧಿಯು ಈ ವರ್ಷದ ಜನವರಿಯಲ್ಲಿ ಕೊನೆಗೊಳ್ಳಲಿದೆ. ಆದರೆ ಈ ವರ್ಷ ಒಂಭತ್ತು ರಾಜ್ಯಗಳ ಚುನಾವಣೆ ಮತ್ತು 2024 ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ನಡ್ಡಾ ಅವರ ಅವಧಿಯನ್ನು ವಿಸ್ತರಿಸಲಾಗುವುದು ಎಂಬ ನಿರೀಕ್ಷೆ ಈ ಮೊದಲೇ ಇತ್ತು.
Advertisement
ನಡ್ಡಾ ಅವರು ಪ್ರಧಾನಿ ಮೋದಿಯವರ ವಿಶ್ವಾಸವನ್ನು ಹೊಂದಿದ್ದಾರೆ. ಅವರ ಉತ್ತಮ ಕಾರ್ಯನಿರ್ವಹಣೆಯು ಪಕ್ಷದ ವಿಸ್ತರಣೆಯನ್ನು ನಿರ್ಧರಿಸಲು ಅನುವು ಮಾಡಿಕೊಟ್ಟಿದೆ ಎಂದು ಬಿಜೆಪಿ ನಾಯಕರು ಬಣ್ಣಿಸಿದ್ದಾರೆ. ನಡ್ಡಾ ಅವರ ನಾಯಕತ್ವದಲ್ಲಿ ಬಿಜೆಪಿ ಅನೇಕ ರಾಜ್ಯ ಚುನಾವಣೆಗಳನ್ನು ಗೆದ್ದಿದೆ. 2024 ರಲ್ಲಿ 2019 ಕ್ಕಿಂತ ದೊಡ್ಡ ಜನಾದೇಶವನ್ನು ಸಾಧಿಸುತ್ತದೆ ಎಂದು ಅಮಿತ್ ಶಾ ಸಭೆಯಲ್ಲಿ ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಜೋಡೋ ಯಾತ್ರೆ ವೇಳೆ ಭದ್ರತಾ ಲೋಪ – ರಾಗಾ ಅಪ್ಪಿಕೊಳ್ಳಲು ಓಡಿದ ವ್ಯಕ್ತಿ
Advertisement
ಬಿಜೆಪಿ ಸಂವಿಧಾನದ ಪ್ರಕಾರ, ಒಬ್ಬ ಪಕ್ಷದ ಅಧ್ಯಕ್ಷರು ತಲಾ ಮೂರು ವರ್ಷಗಳಂತೆ ಸತತ ಎರಡು ಅವಧಿಯನ್ನು ಪಡೆಯಬಹುದು. ಕನಿಷ್ಠ ಶೇ.50ರಷ್ಟು ರಾಜ್ಯ ಘಟಕಗಳಲ್ಲಿ ಸಾಂಸ್ಥಿಕ ಚುನಾವಣೆ ನಡೆದ ಬಳಿಕ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭವಾಗಬಹುದು ಎಂಬ ನಿಬಂಧನೆಯೂ ಇದೆ.
ಈ ವರ್ಷ ನಡೆಯಲಿರುವ ಎಲ್ಲಾ ಒಂಭತ್ತು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ನಾಯಕರು ಗೆಲುವು ಸಾಧಿಸಬೇಕು ಎಂದು ಸೋಮವಾರ ನಡ್ಡಾ ಒತ್ತಿ ಹೇಳಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k