ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Election) ಸಮೀಪ ಬರುತ್ತಿರುವಂತೆಯೇ ರಾಜ್ಯಕ್ಕೆ ಬಿಜೆಪಿ (BJP) ವರಿಷ್ಠರ ಆಗಮನವೂ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ಕೊಪ್ಪಳಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಜ.21 ಶನಿವಾರ ಮತ್ತೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.
Advertisement
ವಿಜಯನಗರದಲ್ಲಿ ಬಿಜೆಪಿಯ ಬೂತ್ ವಿಜಯ ಸಂಕಲ್ಪ ಅಭಿಯಾನಕ್ಕೆ (Vijaya Sankalpa Yatra) ಶನಿವಾರ ಜೆ.ಪಿ ನಡ್ಡಾ ಚಾಲನೆ ಕೊಡಲಿದ್ದಾರೆ. ಬೂತ್ ವಿಜಯ ಸಂಕಲ್ಪ ಅಭಿಯಾನದಲ್ಲಿ ಬೂತ್‍ಗಳ ಮಟ್ಟದಲ್ಲಿ ಡಬಲ್ ಇಂಜಿನ್ ಸರ್ಕಾರಗಳ ಸಾಧನೆಗಳ ರಿಪೋರ್ಟ್ ಕಾರ್ಡ್ ಅನ್ನು ಜನತೆ ಮುಂದಿಡಲಾಗುತ್ತದೆ. ಆ ಮೂಲಕ ಸರ್ಕಾರದ ಕಾರ್ಯಕ್ರಮಗಳ ಕುರಿತು ಜನತೆಗೆ ಮನವರಿಕೆ ಮಾಡಿಕೊಡುವ ಪ್ರಯತ್ನಕ್ಕೆ ಬಿಜೆಪಿ ಕೈಹಾಕಿದೆ. ಇದನ್ನೂ ಓದಿ: Praveen Nettaru murder case: 1,500 ಪುಟಗಳ ಸುದೀರ್ಘ ಚಾರ್ಜ್‌ಶೀಟ್ ಸಲ್ಲಿಸಿದ NIA
Advertisement
Advertisement
ಶನಿವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಕಲಬುರಗಿಗೆ ಆಗಮಿಸುವ ಜೆ.ಪಿ ನಡ್ಡಾ, ಬಳಿಕ ವಿಜಯಪುರದಲ್ಲಿ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಸಿದ್ಧೇಶ್ವರ ಮಹಾಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಿದ್ದಾರೆ. ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀಬಸವಲಿಂಗ ಮಹಾಸ್ವಾಮೀಜಿ ಈ ಸಂದರ್ಭದಲ್ಲಿ ಹಾಜರಿರಲಿದ್ದಾರೆ. ನಾಳೆ ಮಧ್ಯಾಹ್ನ ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಅಭಿಯಾನವನ್ನು ಜೆ.ಪಿ ನಡ್ಡಾ ಉದ್ಘಾಟಿಸಲಿದ್ದಾರೆ. ಆ ಬಳಿಕ ಮನೆ ಮನೆಗೆ ಭೇಟಿ, ಕರಪತ್ರ ವಿತರಣೆ, ಗೋಡೆ ಬರಹ, ಮಿಸ್ಡ್ ಕಾಲ್ ಸದಸ್ಯತ್ವ ಅಭಿಯಾನದಲ್ಲೂ ನಡ್ಡಾ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ರೈತರ ಬದುಕಿನ ಅನಿಶ್ಚಿತತೆ ಹೋಗಲಾಡಿಸಲು ವೈಜ್ಞಾನಿಕ ಔಟ್‌ಲುಕ್ ವರದಿ ಅಗತ್ಯ – ಸಿಎಂ
Advertisement
ಬಳಿಕ ಸಿಂಧಗಿಗೆ ತೆರಳುವ ಜೆ.ಪಿ ನಡ್ಡಾ, ಅಲ್ಲಿ ಆರ್.ಡಿ.ಕಾಲೇಜು ಮುಂಭಾಗದ ಚೌಧರಿ ಲೇಔಟ್‍ನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಅವರು ಕಲಬುರಗಿಯಿಂದ ದೆಹಲಿಗೆ ಹಿಂತಿರುಗಲಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k