ತೆಲುಗಿನ ಸ್ಟಾರ್ ನಟ ಜ್ಯೂ.ಎನ್‌ಟಿಆರ್ (Jr.Ntr) ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ‘ದೇವರ’ (Devara) ಸಿನಿಮಾಗಾಗಿ ಎದುರು ನೋಡ್ತಿದವರಿಗೆ ಕ್ರೇಜಿ ಅಪ್‌ಡೇಟ್ ಸಿಕ್ಕಿದೆ. ಕಾಡಿನಲ್ಲಿ ಜಾನ್ವಿ ಕಪೂರ್ (Janhvi Kapoor) ಜೊತೆ ಜ್ಯೂ.ಎನ್‌ಟಿಆರ್ ರೊಮ್ಯಾಂಟಿಕ್ ಮೂಡ್‌ನಲ್ಲಿರುವ ಕಲರ್‌ಫುಲ್ ಪೋಸ್ಟರ್‌ವೊಂದನ್ನು ಹಂಚಿಕೊಂಡಿದ್ದಾರೆ.
‘ದೇವರ’ ಸಿನಿಮಾದ ಎರಡನೇ ಸಾಂಗ್ ರಿಲೀಸ್ ಮಾಡೋದಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ಆ.5ರಂದು ಜ್ಯೂ.ಎನ್‌ಟಿಆರ್ ಜೊತೆಗಿನ ಜಾನ್ವಿ ಕಪೂರ್ ರೊಮ್ಯಾಂಟಿಕ್ ಸಾಂಗ್ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಅನೌನ್ಸ್ ಮಾಡಿದೆ. ಇದನ್ನೂ ಓದಿ:ಸ್ತನ ಕ್ಯಾನ್ಸರ್ ಚಿಕಿತ್ಸೆ ನಡುವೆ ತಲೆಬೋಳಿಕೊಂಡ ಹಿನಾ ಖಾನ್- ಫ್ಯಾನ್ಸ್ ಶಾಕ್
View this post on Instagram
ಈ ಹಾಡನ್ನು ಥೈಲ್ಯಾಂಡ್ ಕಾಡಿನಲ್ಲಿ ಚಿತ್ರೀಕರಿಸಲಾಗಿದೆ. ಹಾಡು ಸೊಗಸಾಗಿ ಮೂಡಿ ಬಂದಿದೆಯಂತೆ. ಸದ್ಯ ರಿಲೀಸ್ ಆಗಿರುವ ಇಬ್ಬರ ಪೋಸ್ಟರ್ ನೋಡಿ, ಚಿತ್ರದ ಸಾಂಗ್ ನೋಡಲು ಫ್ಯಾನ್ಸ್ ಎದುರು ನೋಡ್ತಿದ್ದಾರೆ. ಇನ್ನೂ ಈ ಚಿತ್ರ ಬಹುಭಾಷೆಗಳಲ್ಲಿ ಸೆ.27ರಂದು ರಿಲೀಸ್ ಆಗಲಿದೆ. ಇದನ್ನೂ ಓದಿ:ವಯನಾಡು ಭೂಕುಸಿತ ದುರಂತ: ಆರ್ಥಿಕ ನೆರವು ನೀಡಿದ ರಶ್ಮಿಕಾ, ಸೂರ್ಯ, ಮಮ್ಮುಟ್ಟಿ
ಈ ಚಿತ್ರದಲ್ಲಿ ಜ್ಯೂ.ಎನ್‌ಟಿಆರ್ ಡಬಲ್ ರೋಲ್‌ನಲ್ಲಿ ನಟಿಸಿದ್ದಾರೆ. ಇವರ ಜೊತೆ ಜಾನ್ವಿ ಕಪೂರ್, ಸೈಫ್ ಅಲಿ ಖಾನ್, ಚೈತ್ರಾ ರೈ ಸೇರಿದಂತೆ ಅನೇಕರು ನಟಿಸಿದ್ದಾರೆ. ‘ಆರ್‌ಆರ್‌ಆರ್’ ಸಿನಿಮಾದ ಸಕ್ಸಸ್ ಬಳಿಕ ಬರುತ್ತಿರುವ ‘ದೇವರ’ (Devara Film) ಚಿತ್ರದ ಮೇಲೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.