ಚಾಮರಾಜನಗರ: ನಗರದ ಪೊಲೀಸ್ ಠಾಣೆಗೆ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಬಾಗಿಲು ಮುಚ್ಚಿದ್ದ ಇನ್ಸ್‌ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ.
Advertisement
ಚಾಮರಾಜನಗರ ಸಿಇಎನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಅಮಾನತುಗೊಂಡಿದ್ದಾರೆ. ಚಾಮರಾಜನಗರ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶ ಗಣಪತಿ ಗುರುಸಿದ್ದ ಬಾದಾಮಿಯವರು ಜ. 3 ರಂದು ಸಿಇಎನ್ (ಸೈಬರ್, ಎಕಾನಾಮಿಕ್ ಅಂಡ್ ನಾರ್ಕೋಟಿಕ್) ಠಾಣೆಗೆ ದಿಢೀರ್ ಭೇಟಿ ನೀಡಿದ್ದರು. ಇದನ್ನೂ ಓದಿ: ವೊಡಾಫೋನ್ ಐಡಿಯಾದಲ್ಲಿ ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ
Advertisement
Advertisement
ಈ ವೇಳೆ ಇನ್ಸ್‌ಪೆಕ್ಟರ್ ಪೊಲೀಸ್ ಠಾಣೆಯ ಬಾಗಿಲು ಹಾಕಿಕೊಂಡಿದ್ದಾರೆ. ಆಗ ನ್ಯಾಯಾಧೀಶರು ದೂರು ಕೊಡಲು ಬಂದವರು ಏನು ಮಾಡಬೇಕು ಎಂದು ಪ್ರಶ್ನಿಸಿ ಎಸ್ಪಿಗೆ ಪತ್ರ ಬರೆದಿದ್ದರು. ಇದನ್ನೂ ಓದಿ: ಪುಷ್ಪ ಸಿನಿಮಾ ಮಾದರಿಯಲ್ಲಿ ದರೋಡೆ – ಇಬ್ಬರು ಹೆಡ್ ಕಾನ್‍ಸ್ಟೇಬಲ್ ಸಸ್ಪೆಂಡ್
Advertisement
ನ್ಯಾಯಾಧೀಶರ ಪತ್ರಕ್ಕೆ ಕೂಡಲೇ ಕ್ರಮ ತೆಗೆದುಕೊಂಡ ಎಸ್ಪಿ ದಿವ್ಯಾ ಸಾರಾ ಥಾಮಸ್‍ರವರು ಐಜಿಯ ಅನುಮತಿ ಪಡೆದು ನಂಜಪ್ಪ ಅವರನ್ನು ಅಮಾನತುಗೊಳಿಸಿದ್ದಾರೆ.