ಬೆಂಗಳೂರು: ಇಂದು ಅರ್ಜುನ್ ಸರ್ಜಾಗೆ ನಿರ್ಣಾಯಕ ದಿನ. ತನ್ನ ಮೇಲೆ ಶೃತಿ ಹರಿಹರನ್ ದಾಖಲಿಸಿರೋ ಎಫ್‍ಐಆರ್ ರದ್ದು ಕೋರಿ ಸಲ್ಲಿಸಿರೋ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಮುಂದೆ ಬರಲಿದೆ.
ಅರ್ಜಿ ವಿಚಾರಣೆ ಮುಗಿಯುವವರೆಗೂ ಎಫ್‍ಐಆರ್ ಮೇಲಿನ ತನಿಖೆಗೆ ತಾತ್ಕಾಲಿಕ ತಡೆ ಕೋರಲು ಅರ್ಜುನ್ ಸರ್ಜಾ ಪರ ವಕೀಲರು ಸಜ್ಜಾಗಿದ್ದಾರೆ. ಇನ್ನೊಂದು ಕಡೆ ಶೃತಿ ಹರಿಹರನ್ ಅರ್ಜುನ್ ಸರ್ಜಾ ವಿರುದ್ದ ಮಾತನಾಡದಂತೆ ತಡೆ ಕೋರಿ ಸಲ್ಲಿಸಿರೋ ಅರ್ಜಿಯ ವಿಚಾರಣೆಯು ಸಹ ಇಂದೇ ಬರಲಿದ್ದು ತಕ್ಕ ಉತ್ತರ ನೀಡಲು ಶೃತಿ ಪರ ವಕೀಲರು ಸಹ ಸಜ್ಜಾಗಿದ್ದಾರೆ. ಇಂದು ಅರ್ಜುನ್ ಸರ್ಜಾ ಸಲ್ಲಿಸಿರೋ ಎರಡು ಅರ್ಜಿಗಳು ಸರ್ಜಾ ಪಾಲಿಗೆ ತುಂಬಾನೆ ಮಹತ್ವವಾಗಿದೆ.
Advertisement
Advertisement
ಆರೋಪ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಈಅಗಾಲೇ ಇಬ್ಬರು ಸಾಕ್ಷಿಗಳ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಶೃತಿ ಹರಿಹರನ್ ಆಪ್ತ ಸಹಾಯಕ ಕಿರಣ್ ಮತ್ತು ವಿಸ್ಮಯ ಚಿತ್ರದ ಸಹ ನಿರ್ದೇಶಕಿ ಮೋನಿಕಾ ಹೇಳಿಕೆಯನ್ನು ರಹಸ್ಯ ಸ್ಥಳದಲ್ಲಿ ಪೊಲೀಸರು ವಿಡಿಯೋ ಮಾಡಿಕೊಂಡಿದ್ದರು. ಇನ್ಸ್ ಪೆಕ್ಟರ್ ಐಯ್ಯಣ್ಣ ರೆಡ್ಡಿ ಹಾಗೂ ಪಿಎಸ್‍ಐ ರೇಣುಕಾ ಸಮ್ಮುಖದಲ್ಲಿ ಸಾಕ್ಷಿಗಳ ಈ ಹೇಳಿಕೆ ದಾಖಲು ಮಾಡಿದ್ದರು.
Advertisement
ಕಿರಣ್ ಹೇಳಿದ್ದು ಏನು?
ಶೃತಿ ಹರಿಹರನ್ ಗೆ ಅರ್ಜುನ್ ಸರ್ಜಾ ಅವರಿಂದ ಕಿರುಕುಳ ಆಗಿದ್ದು ನಿಜ. ರಿಹರ್ಸಲ್ ವೇಳೆಯೂ ಶೃತಿ ಮನಸ್ಸಿಗೆ ಬೇಜಾರು ಮಾಡಿಕೊಂಡಿದ್ದರು. ನಾವು ದೇವನಹಳ್ಳಿಯಿಂದ ಹೊರಟಾಗ ಸಿಗ್ನಲ್ ಬಳಿ ಅರ್ಜುನ್ ಸರ್ಜಾ ಮತ್ತೊಂದು ಕಾರಿನಲ್ಲಿ ಎದುರಾದರು. ಆಗ ನಾನು ಶೃತಿ ಹರಿಹರನ್ ಪಕ್ಕದಲ್ಲಿಯೇ ಕುಳಿತ್ತಿದ್ದೆ. ಶೃತಿ ಹರಿಹರನ್ ಅವರನ್ನು ಅರ್ಜುನ್ ಸರ್ಜಾರ ಊಟಕ್ಕೆ ಕರೆದರು. ಅಷ್ಟೇ ಅಲ್ಲದೇ ರೆಸಾರ್ಟ್ ಗೆ ಹೋಗೋಣ ಬಾ ಎಂದಿದ್ದರು. ಈ ಸಂದರ್ಭದಲ್ಲಿ ಸರ್ಜಾ ಜೊತೆ ಊಟಕ್ಕೆ ಹೋಗಲು ಶೃತಿ ಹರಿಹರನ್ ನಿರಾಕರಿಸಿ ಕಣ್ಣಿರು ಹಾಕಿದರು. ಇದಕ್ಕೆ ನಾನೇ ಸಾಕ್ಷಿ, ನಾನು ಆಗ ಅವರ ಪಕ್ಕದಲ್ಲೇ ಕುಳಿತಿದ್ದೆ. ನಂತರ ಅರ್ಜುನ್ ಸರ್ಜಾ ಹೊರಟರು ಅಂತ ಹೇಳಿದ್ದರು.
Advertisement
ಮೋನಿಕಾ ಹೇಳಿದ್ದು ಏನು?
ನನಗೇನು ಗೊತ್ತಿಲ್ಲ, ನನಗೆ ಏನೂ ನೆನಪಾಗುತ್ತಿಲ್ಲ. ವಿಸ್ಮಯ ಚಿತ್ರದ ಶೂಟಿಂಗ್ ಸೆಟ್ ನಲ್ಲಿ ಏನಾಯ್ತು ಅನ್ನೋದು ನನಗೆ ಸರಿಯಾಗಿ ಗೊತ್ತಿಲ್ಲ. ಲೈಂಗಿಕ ಕಿರುಕುಳ ಬಗ್ಗೆ ನನಗೇನೂ ಗೊತ್ತಿಲ್ಲ, ಶೃತಿಯೂ ಈ ಬಗ್ಗೆ ನನ್ನಲ್ಲಿ ಹೇಳಿಕೊಂಡಿಲ್ಲ ಎಂದು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ವಿಸ್ಮಯ ಚಿತ್ರದ ಸಹ ನಿರ್ದೇಶಕಿ ಮೋನಿಕಾ ಹೇಳಿಕೆ ನೀಡಿದ್ದರು.
ಅರ್ಜುನ್ ಸರ್ಜಾ ಹೂಡಿದ್ದ ಮಾನನಷ್ಟ ಕೇಸ್ ವಿಚಾರಣೆಯನ್ನು ಶುಕ್ರವಾರ ಮೇಯೋ ಹಾಲ್ ಕೋರ್ಟ್ ಮುಂದೂಡಿದೆ. ಕಳೆದ ಸೋಮವಾರವಷ್ಟೇ ಶೃತಿಹರನ್ ಆಕ್ಷೇಪಣೆ ಸಲ್ಲಿಸಿದ್ದರು. ಇದಕ್ಕೆ ಉತ್ತರಿಸಲು ಸಮಯ ಬೇಕು ಎಂದು ಸರ್ಜಾ ಪರ ವಕೀಲರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ನ್ಯಾಯಧೀಶರು ವಿಚಾರಣೆಯನ್ನ ಇಂದಿಗೆ ಮುಂದೂಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://www.youtube.com/watch?v=ocJXRWTsd60
https://www.youtube.com/watch?v=qdCxHFsxpXU
https://www.youtube.com/watch?v=tfCyk-4a2rg