ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ

Public TV
1 Min Read
Chaithra Kundapura 1

ಬೆಂಗಳೂರು: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಕುಂದಾಪುರ (Chaithra Kundapura) ಸೇರಿದಂತೆ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ 3ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಚೈತ್ರಾ ಮತ್ತು ಗ್ಯಾಂಗ್‌ ಅನ್ನು ಸಿಸಿಬಿ ಇಂದು (ಶನಿವಾರ) ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಈ ವೇಳೆ ವಕೀಲರ ಬದಲಾವಣೆಗೆ ಚೈತ್ರಾ ಮನವಿ ಮಾಡಿಕೊಂಡರು. ಅಲ್ಲದೇ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದರು. ಇದನ್ನೂ ಓದಿ: ಚೈತ್ರಾ& ಗ್ಯಾಂಗ್‍ನ ಸಿಸಿಬಿ ಕಸ್ಟಡಿ ಅಂತ್ಯ- ಮತ್ತೆ ಕಸ್ಟಡಿಗಾ?, ಪರಪ್ಪನ ಅಗ್ರಹಾರಕ್ಕಾ?

govinda babu poojari 3

ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌, ಚೈತ್ರಾ ಸೇರಿದಂತೆ ಗಗನ್ ಕಡೂರ್, ಪ್ರಜ್ವಲ್, ರಮೇಶ್, ಚೆನ್ನನಾಯ್ಕ್, ಧನರಾಜ್, ಶ್ರೀಕಾಂತ್ ಆರೋಪಿಗಳನ್ನು ಅ.6 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

ಆರೋಪಿಗಳಾದ ರಮೇಶ್, ಚನ್ನನಾಯ್ಕ್‌ ಮತ್ತು ಧನರಾಜ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಸೆ.26ಕ್ಕೆ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಟರ್‌ಗೆ ಕೋರ್ಟ್‌ ಸೂಚನೆ ನೀಡಿದೆ. ವಿಚಾರಣೆಯನ್ನು ಸೆ.26 ಕ್ಕೆ ಮುಂದೂಡಿದೆ. ಇದನ್ನೂ ಓದಿ: ರಾಜ್ಯದ ಮೊದಲ ಹೆಲ್ತ್ ಎಟಿಎಂ ಕಲಬುರಗಿಯಲ್ಲಿ ಆರಂಭ – ಕ್ಷಣಾರ್ಧದಲ್ಲಿ ಸಿಗುತ್ತೆ ಬಿಪಿ, ಶುಗರ್, ಮಲೇರಿಯಾ ರಿಪೋರ್ಟ್

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article