InternationalLatestLeading NewsMain PostNational

ನ್ಯಾಯಾಂಗ ಸಂವಿಧಾನಕ್ಕೆ ಮಾತ್ರ ಉತ್ತರದಾಯಿಯೇ ಹೊರತು ರಾಜಕೀಯ ಪಕ್ಷಗಳಿಗಲ್ಲ: ಎನ್.ವಿ.ರಮಣ

Advertisements

ವಾಷಿಂಗ್ಟನ್: ನ್ಯಾಯಾಂಗ ಸಂವಿಧಾನಕ್ಕೆ ಮಾತ್ರ ಉತ್ತರದಾಯಿಯೇ ಹೊರತು ರಾಜಕೀಯ ಪಕ್ಷಗಳಿಗೆ ಅಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹೇಳಿದ್ದಾರೆ.

ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾರತೀಯ ಅಮೆರಿಕನ್ನರ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ನ್ಯಾಯಾಂಗ ವ್ಯವಸ್ಥೆ ಕುರಿತಾಗಿ ರಾಜಕೀಯ ಪಕ್ಷಗಳು ನೀಡುತ್ತಿರುವ ಪರ-ವಿರೋಧದ ಹೇಳಿಕೆಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ಆಸ್ಟ್ರೇಲಿಯಾಕ್ಕೆ ಅಕ್ರಮ ವಲಸೆಗೆ ಯತ್ನ – 51 ಮಂದಿ ಬಂಧನ

ಅಧಿಕಾರದಲ್ಲಿರುವ ಸರ್ಕಾರದ ಪ್ರತಿ ಕ್ರಿಯೆಯೂ ನ್ಯಾಯಾಂಗದ ಅನುಮೋದನೆಗೆ ಅರ್ಹ ಎಂದು ಭಾವಿಸುತ್ತವೆ. ವಿರೋಧ ಪಕ್ಷಗಳೂ ತಮ್ಮ ರಾಜಕೀಯ ಸ್ಥಾನ ಮತ್ತು ಅನುಕೂಲತೆಗಳಿಗೆ ಪೂರಕವಾಗಿ ನ್ಯಾಯಾಂಗ ಇರಬೇಕೆಂದು ನಿರೀಕ್ಷಿಸುತ್ತವೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳ ಕಾರ್ಯ ನಿರ್ವಹಣೆಯ ಬಗ್ಗೆ ಜನರಲ್ಲಿ ಸೂಕ್ತ ತಿಳಿವಳಿಕೆ ಕೊರತೆಗಳು ಇಂತಹ ಎಲ್ಲ ದುರ್ಬಲ ಆಲೋಚನೆಗಳಿಗೆ ಕಾರಣವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪ್ಯಾರಿಸ್‌ಗೆ ಹೋಗ್ತಿದ್ದ ಪುಲಿಟ್ಜರ್ ವಿಜೇತೆಗೆ ದೆಹಲಿ ಏರ್‌ಪೋರ್ಟ್‌ನಲ್ಲಿ ತಡೆ

ಸಾಮಾನ್ಯ ಜನರ ನಡುವೆ ವ್ಯಾಪಕವಾಗಿ ತುಂಬಿರುವ ತಿಳಿವಳಿಕೆಯ ಕೊರತೆಯು ನ್ಯಾಯಾಂಗದ ಮೇಲೆ ಪ್ರಭಾವ ಬೀರುತ್ತಿವೆ. ಜೊತೆಗೆ ತಪ್ಪು ತಿಳಿವಳಿಕೆಯನ್ನೂ ಮೂಡಿಸುತ್ತಿವೆ. ನಾನು ಸ್ಪಷ್ಟವಾಗಿ ಹೇಳುತ್ತೇನೆ. ನಾವು ಸಂವಿಧಾನಕ್ಕೆ ಮಾತ್ರ ಉತ್ತರದಾಯಿಯೇ ಹೊರತು ರಾಜಕೀಯ ಪಕ್ಷಗಳಿಗೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜನರು ದೇಶವನ್ನು ಒಂದುಗೂಡಿಸುವ ವಿಚಾರಗಳ ಕಡೆ ಗಮನ ಹರಿಸಬೇಕೇ ವಿನಾ ವಿಭಜನೆಯ ಸಂಗತಿಗಳ ಮೇಲೆ ಅಲ್ಲ. ಏಕೆಂದರೆ ಸಾಮಾಜಿಕ ಒಳಗೊಳ್ಳುವಿಕೆಯು ಸಮಾಜದ ಒಗ್ಗಟ್ಟನ್ನು ಬಲಪಡಿಸುತ್ತದೆ. ಇದು ಶಾಂತಿ ಮತ್ತು ಪ್ರಗತಿಯ ಮುಖ್ಯ ಶಕ್ತಿ. ನಮ್ಮನ್ನು ಒಂದುಗೂಡಿಸುವ ವಿಷಯಗಳ ಮೇಲೆ ನಾವು ಗಮನ ಹರಿಸಬೇಕಿದೆಯೇ ಹೊರತು ನಮ್ಮನ್ನು ವಿಭಜನೆ ಮಾಡುವ ಸಂಗತಿಗಳ ಮೇಲಲ್ಲ ಎಂದು ಎಚ್ಚರಿಸಿದ್ದಾರೆ.

Live Tv

Leave a Reply

Your email address will not be published.

Back to top button