Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುರುದತ್ ವಿಭಿನ್ನ ಪ್ರಯತ್ನ – ಜುಗಾರಿ ಕ್ರಾಸ್‌ಗೆ ರಾಜ್ ಬಿ ಶೆಟ್ಟಿ ಹೀರೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗುರುದತ್ ವಿಭಿನ್ನ ಪ್ರಯತ್ನ – ಜುಗಾರಿ ಕ್ರಾಸ್‌ಗೆ ರಾಜ್ ಬಿ ಶೆಟ್ಟಿ ಹೀರೋ

Latest

ಗುರುದತ್ ವಿಭಿನ್ನ ಪ್ರಯತ್ನ – ಜುಗಾರಿ ಕ್ರಾಸ್‌ಗೆ ರಾಜ್ ಬಿ ಶೆಟ್ಟಿ ಹೀರೋ

Public TV
Last updated: October 17, 2025 5:01 pm
Public TV
Share
2 Min Read
Raj B Shetty
SHARE

ಇತ್ತೀಚಿಗೆ ಕಾದಂಬರಿ ಆಧಾರಿತ ಸಿನಿಮಾಗಳ ಸಂಖ್ಯೆ ತುಂಬಾ ಕಡಿಮೆಯಾಗಿವೆ. ಜನಪ್ರಿಯ ಕಾದಂಬರಿಗಳನ್ನು ತೆರೆಮೇಲೆ ತರುವ ಸಾಹಸಕ್ಕೆ ಯಾರು ಕೈ ಹಾಕುತ್ತಿಲ್ಲ. ಆದರೀಗ ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ (Poornachandra Tejaswi) ಅವರ ಸುಪ್ರಸಿದ್ಧ ಜುಗಾರಿ ಕ್ರಾಸ್ (Jugari Cross) ತೆರೆಮೇಲೆ ಬರುತ್ತಿದೆ. ಜುಗಾರಿ ಕ್ರಾಸ್ ಕಾದಂಬರಿಗೆ ಸಿನಿಮಾ ರೂಪ ಕೊಡುವ ಸಾಹಸಕ್ಕೆ ಕೈ ಹಾಕಿದ್ದಾರೆ ನಿರ್ದೇಶಕ ಗುರುದತ್ ಗಾಣಿಗ. ಈಗಾಗಲೇ ಕರಾವಳಿ ಸಿನಿಮಾ ಮೂಲಕ ಭಾರೀ ಸದ್ದು ಮಾಡುತ್ತಿರುವ ನಿರ್ದೇಶಕ ಗುರುದತ್ (Gurudatha Ganiga) ಇದೀಗ ಜುಗಾರಿ ಕ್ರಾಸ್‌ನ್ನು ದೊಡ್ಡ ಪರದೆ ಮೇಲೆ ತರುವ ಸಾಹಸಕ್ಕೆ ಮುಂದಾಗಿದ್ದಾರೆ.

ಈಗಾಗಲೇ ಜುಗಾರಿ ಕ್ರಾಸ್ ಸಿನಿಮಾ ಮಾಡುವುದಾಗಿ ಅನೌನ್ಸ್ ಮಾಡಿದ್ದರು. ಇದೀಗ ಟೀಸರ್ ರಿಲೀಸ್ ಆಗಿದೆ. ಜುಗಾರಿ ಕ್ರಾಸ್ ಸಿನಿಮಾ ಅನೌನ್ಸ್ ಮಾಡಿದಾಗಿನಿಂದ ಈ ಜನಪ್ರಿಯ ಕಾದಂಬರಿಗೆ ಹೀರೋ ಯಾರು ಎನ್ನುವ ಕುತೂಹಲ ಎಲ್ಲರಲ್ಲಿತ್ತು. ಆದರೀಗ ಟೀಸರ್ ಜೊತೆಗೆ ಹೀರೋ ಯಾರು ಎನ್ನುವ ಕುತೂಹಲಕ್ಕೂ ತೆರೆಬಿದ್ದಿದೆ. ಜುಗಾರಿ ಕ್ರಾಸ್‌ಗೆ ನಾಯಕನಾಗಿ ರಾಜ್ ಬಿ ಶೆಟ್ಟಿ (Raj B Shetty )ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ರಿಲೀಸ್ ಆಗಿರುವ ಟೀಸರ್‌ನಲ್ಲಿ ತಲೆಬುರಡೆ, ಹರಿಯುತ್ತಿರುವ ರಕ್ತ, ಕೆಂಪು ರತ್ನ ಜೊತೆಗೆ ಕುತೂಹಲ ಮತ್ತಷ್ಟು ದುಪ್ಪಟ್ಟು ಮಾಡುವಂತೆ ಇರುವ ಬ್ಯಾಗ್ರೌಂಡ್ ಮ್ಯೂಸಿಕ್, ಪವರ್ ಪ್ಯಾಕ್ಡ್ ಟೀಸರ್ ನೋಡುತ್ತಿದ್ರೆ ಸಿನಿಮಾ ಮೇಲಿನ ನಿರೀಕ್ಷೆ ಮತ್ತು ಕುತೂಹಲ ಮತ್ತಷ್ಟು ಹೆಚ್ಚಾಗುತ್ತಿದೆ. ಇದನ್ನೂ ಓದಿ: ಕಾಂತಾರ ಚಾಪ್ಟರ್‌ 1 ಬ್ಲಾಕ್‌ಬಸ್ಟರ್‌ ಹಿಟ್; 2 ವಾರದಲ್ಲಿ 717 ಕೋಟಿ ಕಲೆಕ್ಷನ್‌

ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿರುವ ಕರಾವಳಿ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದ ನಿರ್ದೇಶಕ ಗುರುದತ್ ಮತ್ತು ರಾಜ್ ಬಿ ಶೆಟ್ಟಿ ಇದೀಗ ಜುಗಾರಿ ಕ್ರಾಸ್ ಮೂಲಕ ಮತ್ತೆ ಕೈಜೋಡಿಸಿರುವುದು ಕುತೂಹಲ ಹೆಚ್ಚಿಸಿದೆ. ಕರಾವಳಿ ಸಿನಿಮಾ ರಿಲೀಸ್‌ಗೂ ಮೊದಲೇ ರಾಜ್ ಬಿ ಶೆಟ್ಟಿ ಮತ್ತು ನಿರ್ದೇಶಕ ಗುರುದತ್ ಜುಗಾರಿ ಕ್ರಾಸ್‌ನಲ್ಲಿ ಬ್ಯುಸಿಯಾಗಿದ್ದಾರೆ. ಪಾತ್ರಗಳ ಆಯ್ಕೆಯಲ್ಲಿ ರಾಜ್ ಬಿ ಶೆಟ್ಟಿ ಯಾವಾಗಲೂ ಚ್ಯೂಸಿ. ವಿಭಿನ್ನ ವಿನೂತನ ಪಾತ್ರಗಳನ್ನು ಹುಡುಕುತ್ತಿರುತ್ತಾರೆ. ʻಸು ಫ್ರಂ ಸೋʼನಲ್ಲಿ ಗುರೂಜಿಯಾಗಿ ರಂಜಿಸಿದ್ದ ಶೆಟ್ರು, ʻಕರಾವಳಿʼ ಸಿನಿಮಾದಲ್ಲಿ ಕೋಣಗಳ ಜೊತೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಇದೀಗ ಜುಗಾರಿ ಕ್ರಾಸ್ ಅಂತ ಪವರ್ ಫುಲ್ ಕಾದಂಬರಿಗೆ ನಾಯಕನಾಗುತ್ತಿರುವುದು ವಿಶೇಷ.

ಕರಾವಳಿ ಸಿನಿಮಾದ ಕಾಂಬಿನೇಷನ್ ಮತ್ತೆ ಜುಗಾರಿ ಕ್ರಾಸ್‌ನಲ್ಲೂ ಮುಂದುವರೆದಿದೆ ಅಂದರೆ ಗುರುದತ್ ಗಾಣಿಗ ಅವರ ಕೆಲಸ ಮತ್ತು ಅವರ ಟೀಂ ಮೇಲೆ ರಾಜ್ ಬಿ ಶೆಟ್ಟಿ ಇವರಿಗೆ ಇರುವ ನಂಬಿಕೆ ಮತ್ತು ಶ್ರದ್ಧೆ ಗೊತ್ತಾಗುತ್ತಿದೆ. ಸದ್ಯ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಕರಾವಳಿ ಸಿನಿಮಾದ ಶೂಟಿಂಗ್ ಸಂಪೂರ್ಣವಾಗಿ ಮುಗಿಸಿರುವ ಗುರುದತ್ ಆ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳ ಜೊತೆಗೆ ಜುಗಾರಿ ಕ್ರಾಸ್ ನಲ್ಲೂ ತೊಡಗಿಕೊಳ್ಳಲಿದ್ದಾರೆ. ಸಿನಿಮಾ ನಿರ್ದೇಶನದ ಜೊತೆಗೆ ಗುರುದತ್ತ ಗಾಣಿಗ ಫಿಲ್ಮಂಸ್ ಅಡಿಯಲ್ಲಿ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ ಡೈರೆಕ್ಟರ್ ಗುರುದತ್ತ ಗಾಣಿಗ. ಕರಾವಳಿ ಸಿನಿಮಾದ ಸಿನಿಮಾಟೋಗ್ರಾಫರ್ ಅಭಿಮನ್ಯು ಸದಾನಂದನ್ ಈ ಸಿನಿಮಾಗೂ ಕೆಲಸ ಮಾಡುತ್ತಿದ್ದಾರೆ. ಇನ್ನೂ ಚಿತ್ರಕ್ಕೆ ಸಚಿನ್ ಬಸ್ರೂರ್ ಸಂಗೀತ ನೀಡುತ್ತಿದ್ದಾರೆ. ಉಳಿದಂತೆ ಯಾರೆಲ್ಲ ಇರಲಿದ್ದಾರೆ ಎನ್ನುವ ಮಾಹಿತಿ ಸದ್ಯದಲ್ಲೇ ರಿವೀಲ್ ಆಗಲಿದೆ. ಇದನ್ನೂ ಓದಿ: ವಧುವಾದ ಗಾಯಕಿ ಸುಹಾನಾ ಸಯ್ಯದ್ – ʻಭಲೇ ಜೋಡಿʼ ಎಂದ ಫ್ಯಾನ್ಸ್‌

TAGGED:gurudatha ganigaJugari CrossPoornachandra TejaswiRaj B Shettysandalwood
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
12 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
23 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
42 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
50 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
1 hour ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?