ನವದೆಹಲಿ: ಕೇಂದ್ರ ಹಣಕಾಸು ಇಲಾಖೆ (Finance Ministry) ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಮಾಸಿಕ ಮಾಹಿತಿಯನ್ನು ನೀಡಿದ್ದು, ಏಪ್ರಿಲ್‌ನಲ್ಲಿ 1,48,995 ಕೋಟಿ ರೂ. ಸಂಗ್ರಹಿದೆ.
ಜಿಎಸ್‌ಟಿ ಜಾರಿಯಾದ ಬಳಿಕ ಎರಡನೇ ಅತಿ ಹೆಚ್ಚು ತೆರಿಗೆ ಸಂಗ್ರಹವಾಗಿದೆ. ಕಳೆದ ವರ್ಷದ ಜುಲೈ ತಿಂಗಳಿಗೆ ಹೋಲಿಸಿದರೆ ಶೇ.28 ರಷ್ಟು ಜಿಎಸ್‌ಟಿ ಸಂಗ್ರಹ ಹೆಚ್ಚಳವಾಗಿದೆ.
Advertisement
Advertisement
ಈ ತಿಂಗಳ ಜೂನ್ ತಿಂಗಳಿಗೆ ಹೋಲಿಸಿದರೆ ಶೇ.3 ರಷ್ಟು ಹೆಚ್ಚಳವಾಗಿದೆ. ಜೂನ್‌ನಲ್ಲಿ 1.44 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹವಾಗಿತ್ತು. ಈ ವರ್ಷದ ಏಪ್ರಿಲ್‌ನಲ್ಲಿ 1.68 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹವಾಗಿತ್ತು. ಏಪ್ರಿಲ್‌ನ ಜಿಎಸ್‌ಟಿ ಸಂಗ್ರಹ ಸಾರ್ವಕಾಲಿಕ ಗರಿಷ್ಠವಾಗಿದೆ. ಇದನ್ನೂ ಓದಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 36 ರೂ. ಇಳಿಕೆ
Advertisement
Advertisement
ಕಳೆದ ವರ್ಷದ ಜುಲೈನಲ್ಲಿ ಕರ್ನಾಟಕದಲ್ಲಿ 6,737 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾದರೆ ಈ ಬಾರಿ 9,795 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.45 ರಷ್ಟು ಹೆಚ್ಚಳವಾಗಿದೆ.
ಜಿಎಸ್‌ಟಿ ಸಂಗ್ರಹದ ಪೈಕಿ ಸೆಂಟ್ರಲ್ ಜಿಎಸ್‌ಟಿ 25,751 ಕೋಟಿ ರೂ., ಸ್ಟೇಟ್ ಜಿಎಸ್‌ಟಿ 32,807 ಕೋಟಿ ರೂ., ಇಂಟಿಗ್ರೇಟೆಡ್ ಜಿಎಸ್‌ಟಿ(ಭಾರತಕ್ಕೆ ಆಮದು ಮಾಡಿಕೊಳ್ಳುವ ಮತ್ತು ಭಾರತದಿಂದ ರಫ್ತು ಮಾಡುವ ಸಂದರ್ಭಗಳಲ್ಲಿ ಸರಕು ಮೇಲೆ ಹಾಕುವ ತೆರಿಗೆ) 79,518 ಕೋಟಿ ರೂ., ಸೆಸ್ ಮೂಲಕ 10,920 ಕೋಟಿ ರೂ. ಆದಾಯ ಸಂಗ್ರಹವಾಗಿದೆ.
ಕಳೆದ 5 ತಿಂಗಳಿನಿಂದ ಜಿಎಸ್‌ಟಿ ಆದಾಯ 1.4 ಲಕ್ಷ ಕೋಟಿ ದಾಟುತ್ತಿದೆ. ಪ್ರತಿ ತಿಂಗಳು ಸ್ಥಿರವಾದ ಹೆಚ್ಚಳವನ್ನು ತೋರಿಸುತ್ತದೆ ಎಂದು ಹಣಕಾಸು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.