ನವದೆಹಲಿ: ಲೋಕಸಭಾ ಚುನಾವಣೆಯ (Lok Sabha Election) ಮತ ಎಣಿಕೆಯ ದಿನವಾದ ಜೂನ್ 4 ರಂದು ಆಡಳಿತರೂಢ ಎನ್‌ಡಿಎ (NDA) ಒಕ್ಕೂಟ ಮಧ್ಯಾಹ್ನ 12:30ರ ವೇಳೆಗೆ 400 ಸ್ಥಾನಗಳ ಗಡಿಯನ್ನು ದಾಟಿರುತ್ತದೆ ಎಂದು ಗೃಹ ಸಚಿವ ಅಮಿತ್ ಶಾ (Amit Shah)ವಿಶ್ವಾಸ ವ್ಯಕ್ತಪಡಿಡಿಸಿದ್ದಾರೆ.
ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ನಾಯಕತ್ವದಲ್ಲಿ ಬಿಜೆಪಿಯು 2019ರ ಲೋಕಸಭಾ ಚುನಾವಣೆಯಲ್ಲಿ ಯಾವ ರೀತಿ ಉತ್ತಮ ಸಾಧನೆ ಮಾಡಿದೆಯೋ ಅದೇ ರೀತಿಯ ಫಲಿತಾಂಶ ಮಹಾರಾಷ್ಟ್ರ, ದೆಹಲಿ, ಕರ್ನಾಟಕ, ಮಧ್ಯಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ಮತ್ತು ಗುಜರಾತ್‌ನಲ್ಲಿ ಪುನರಾವರ್ತನೆಯಾಗಲಿದೆ ಎಂದರು. ಇದನ್ನೂ ಓದಿ: ಬಿರುಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಫುಲ್ ಟ್ಯಾಂಕ್ ಮಾಡಿಸಿದ್ರೆ ಸಮಸ್ಯೆ ಆಗಲ್ಲ: ಇಂಡಿಯನ್ ಆಯಿಲ್ ಸ್ಪಷ್ಟನೆ
ಪಶ್ಚಿಮ ಬಂಗಾಳದಲ್ಲಿ (West Bengal) ಕನಿಷ್ಟ 30 ಸ್ಥಾನಗಳನ್ನು ಈ ಬಾರಿ ಬಿಜೆಪಿ (BJP) ಗೆಲ್ಲಲಿದೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡ್ತಿದ್ರು: ಪ್ರಜ್ವಲ್ ವಿರುದ್ಧ ಮತ್ತೊಬ್ಬ ಸಂತ್ರಸ್ತೆ ದೂರು
ದಕ್ಷಿಣದ ರಾಜ್ಯಗಳಾದ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಸ್ಪರ್ಧೆ ಇರುವುದನ್ನು ಅಮಿತ್ ಶಾ ಒಪ್ಪಿಕೊಂಡಿದ್ದಾರೆ. ಈ ಬಾರಿ ಕೇರಳ ಮತ್ತು ತಮಿಳುನಾಡಿನಲ್ಲಿ ನಾವು ಖಾತೆ ತೆರೆಯಲಿದ್ದೇವೆ. ದಕ್ಷಿಣದ ನಾಲ್ಕು ರಾಜ್ಯಗಳಲ್ಲಿ ನಾವು ಕಾಂಗ್ರೆಸ್‌ಗಿಂತ ಮುಂದಿದ್ದೇವೆ ಎಂದು ತಿಳಿಸಿದರು.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರ ಎಲೆಕ್ಟ್ರಾನಿಕ್ ಮತಯಂತ್ರ ಟ್ಯಾಂಪರಿಂಗ್ ಆರೋಪಕ್ಕೆ ಪ್ರತಿಕ್ರಿಯಿಸಿ ಟ್ಯಾಂಪರಿಂಗ್ ಆರೋಪಗಳು ನಿಜವಾಗಿದ್ದರೆ ತಮಿಳುನಾಡಿನಲ್ಲಿ, ತೆಲಂಗಾಣದಲ್ಲಿ ಬಿಜೆಪಿ ಗೆಲ್ಲಲಿಲ್ಲ ಯಾಕೆ ಎಂದು ಪ್ರಶ್ನಿಸಿದರು.