ಗಾಂಧಿನಗರ: ರಾಜ್ಯ ಜೂನಿಯರ್ ಕ್ಲರ್ಕ್‌ಗಳ (Junior Clerk) ನೇಮಕಾತಿಗಾಗಿ ನಡೆಯಬೇಕಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದು, ಇದರಿಂದಾಗಿ ಪರೀಕ್ಷೆ ರದ್ದುಗೊಂಡಿದೆ ಹಾಗೂ ಈ ಸಂಬಂಧ ಶಂಕಿತನೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗುಜರಾತ್‍ನಲ್ಲಿ (Gujarat) ಜೂನಿಯರ್ ಕ್ಲರ್ಕ್ ಪರೀಕ್ಷೆಯು ಇಂದು (ಜ. 29) ಬೆಳಗ್ಗೆ 11 ರಿಂದ ಮಧ್ಯಾಹ್ನ 12ರವರೆಗೆ ವಿವಿಧ ಜಿಲ್ಲೆಗಳಲ್ಲಿ ಒಟ್ಟು 2,995 ಕೇಂದ್ರಗಳಲ್ಲಿ ನಡೆಯಬೇಕಿತ್ತು. ಒಟ್ಟಾರೆ 1,181 ಹುದ್ದೆಗಳ ಪರೀಕ್ಷೆಗೆ (Exam) 9.5 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.
Advertisement
Advertisement
ಪ್ರಶ್ನೆ ಪತ್ರಿಕೆ ಲೀಕ್ ಆಗಿರುವುದರ ಕುರಿತು ಪೊಲೀಸರಿಗೆ ಸುಳಿವು ದೊರೆತಿದ್ದು, ಇದರ ಆಧಾರದ ಮೇಲೆ ಶಂಕಿನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಆತನ ಬಳಿ ಇದ್ದ ಭಾನುವಾರ ನಡೆಯಬೇಕಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಪ್ರತಿಯನ್ನು ವಶಕ್ಕೆ ಪಡೆದಿದ್ದಾರೆ.
Advertisement
ಘಟನೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ಗುಜರಾತ್ ಪಂಚಾಯತ್ ಸೇವಾ ಆಯ್ಕೆ ಮಂಡಳಿಯು ತಿಳಿಸಿದೆ. ಜೊತೆಗೆ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
Advertisement
ಅಭ್ಯರ್ಥಿಗಳಿಗೆ ಆಗಿರುವ ಅನಾನುಕೂಲತೆಗೆ ಮಂಡಳಿ ವಿಷಾದ ವ್ಯಕ್ತಪಡಿಸಿದ್ದು, ಪರೀಕ್ಷಾ ಕೇಂದ್ರಗಳಿಗೆ ಹೋಗದಂತೆ ಸೂಚನೆ ನೀಡಿದೆ. ಪರೀಕ್ಷೆಯನ್ನು ಶೀಘ್ರದಲ್ಲೇ ಬೇರೆ ಪ್ರಶ್ನೆ ಪತ್ರಿಕೆಯೊಂದಿಗೆ ನಡೆಸಲಾಗುವುದು ಎಂದು ಹೇಳಿದೆ. ಇದನ್ನೂ ಓದಿ: Praveen Nettaru Case: ಹತ್ಯೆಯ ಪ್ರಮುಖ ಆರೋಪಿಗಳು ಸೌದಿಯಲ್ಲಿ ಭೂಗತ – ತನಿಖೆಯಲ್ಲಿ ಮಹತ್ವದ ಪ್ರಗತಿ
ಈ ಬಗ್ಗೆ ಗುಜರಾತ್ ಕಾಂಗ್ರೆಸ್ ವಕ್ತಾರ ಮನೀಶ್ ದೋಷಿ ಮಾತನಾಡಿ, ಇದು 15ನೇ ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಯಾಗಿದ್ದು, ಕಳೆದ 12 ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ರದ್ದುಗೊಳಿಸಲಾಗಿದೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಹೇಳುತ್ತಿದೆಯಾದರೂ ಪ್ರಮುಖ ಆರೋಪಿಗಳನ್ನು ಬಂಧಿಸಿಲ್ಲ. ರಾಜ್ಯದ ಯುವಜನರ ಭವಿಷ್ಯದ ಜತೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತೀರ್ಮಾನ ಮಾಡಿದ್ದೇನೆ: ಬಿಎಸ್‌ವೈ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k