ಹೈದರಾಬಾದ್: ಟಾಲಿವುಡ್ ನಟ ಜೂನಿಯರ್ ಎನ್‍ಟಿಆರ್ ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಆಡಳಿತಾರೂಢ ವೈಎಸ್‍ಆರ್ ಕಾಂಗ್ರೆಸ್ ನಡುವೆ ನಡೆಯುತ್ತಿರುವ ವಾಕ್ಸಮರ ಕುರಿತಾಗಿ ಸಮಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
Advertisement
ಆಂಧ್ರಪ್ರದೇಶದಲ್ಲಿ ಟಿಡಿಪಿ ನಾಯಕ, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಆಡಳಿತಾರೂಢ ವೈಎಸ್‍ಆರ್ ಕಾಂಗ್ರೆಸ್ ನಡುವಿನ ವಾಕ್ಸಮರ ವಿಕೋಪಕ್ಕೆ ಹೋಗಿದೆ. ಎರಡೂ ಬಣದವರು ವೈಯಕ್ತಿಕ ಮಟ್ಟಕ್ಕೆ ಇಳಿದು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಟ್ವಿಟರ್‌ನಲ್ಲಿ ವೀಡಿಯೋ ಹಂಚಿಕೊಂಡಿರುವ ನಟ ಜೂನಿಯರ್ ಎನ್‍ಟಿಆರ್, ರಾಜಕೀಯ ನಾಯಕರಿಗೆ ಕೈ ಮುಗಿದು ಬೇಡಿಕೊಂಡಿದ್ದಾರೆ.
Advertisement
Advertisement
ವೀಡಿಯೋದಲ್ಲಿ ಏನಿದೆ?: ದಯವಿಟ್ಟು ರಾಜಕೀಯ ಏನೇ ಇರಲಿ. ವೈಯಕ್ತಿಕ ಮಟ್ಟಕ್ಕೆ ಇಳಿದು ಯಾರೂ ಜಗಳವಾಡಬೇಡಿ. ಈ ದೇಶದ ಜನ ನಿಮ್ಮನ್ನು ನೋಡುತ್ತಿದ್ದಾರೆ. ದಯವಿಟ್ಟು ಮಾದರಿಯಾಗಿರಿ. ನಿಮ್ಮ ನಿಮ್ಮ ಜಗಳದಲ್ಲಿ ಕುಟುಂಬವನ್ನು ಎಳೆ ತರಬೇಡಿ. ನಾನೊಬ್ಬ ಪ್ರಜೆಯಾಗಿ ನಿಮ್ಮನ್ನು ಕೈ ಮುಗಿದು ಬೇಡಿಕೊಳ್ಳುತ್ತಿದ್ದೇನೆ ಎಂದು ಪರೋಕ್ಷವಾಗಿ ವೈಎಸ್‍ಆರ್ ಕಾಂಗ್ರೆಸ್ ಹಾಗೂ ಟಿಡಿಪಿ ನಾಯಕರಿಗೆ ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಅಕಾಲಿಕ ಮಳೆಗೆ ಜನಜೀವನ ಅಸ್ತವ್ಯಸ್ತ – ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಕಟ್ಟೆಚ್ಚರ
Advertisement
— Jr NTR (@tarak9999) November 20, 2021
ಕಳೆದ ಶುಕ್ರವಾರ ಆಂಧ್ರ ವಿಧಾನಸಭೆಯಲ್ಲಿ ವೈಎಸ್‍ಆರ್ ಕಾಂಗ್ರೆಸ್ ಶಾಸಕ ಅಂಬಟ್ಟಿ ರಾಂಬಾಬು ಅವರು, ಚಂದ್ರಬಾಬು ನಾಯ್ಡು ಅವರ ಪತ್ನಿ ನಾರಾ ಭುವನೇಶ್ವರಿ ಅವರ ಬಗ್ಗೆ ಕೀಳು ಮಟ್ಟದಿಂದ ಮಾತನಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಅಲ್ಲದೇ ಇದೇ ವಿಷಯವಾಗಿ ಹಾಗೂ ವೈಎಸ್‍ಆರ್ ಕಾಂಗ್ರೆಸ್ ನಾಯಕರು ಕಳೆದ ಎರಡು ವರ್ಷದಿಂದ ನನಗೆ ಹಾಗೂ ನನ್ನ ಕುಟುಂಬಕ್ಕೆ ತೀವ್ರ ಅಪಮಾನ ಮಾಡುತ್ತಿದ್ದಾರೆ ಎಂದು ಚಂದ್ರಬಾಬು ನಾಯ್ಡು ಕಣ್ಣೀರು ಹಾಕಿದ್ದರು. ತಾವು ಮುಂದಿನ ಚುನಾವಣೆಯಲ್ಲಿ ಗೆದ್ದು ಸಿಎಂ ಆಗಿಯೇ ವಿಧಾನಸಭೆ ಪ್ರವೇಶ ಮಾಡುತ್ತೇನೆ ಎಂದು ಶಪಥ ಮಾಡಿದ್ದಾರೆ. ವೈಎಸ್‍ಆರ್ ಕಾಂಗ್ರೆಸ್ ಶಾಸಕಿ ಹಾಗೂ ನಟಿ ರೋಜಾ ಕೂಡ ನಾಯ್ಡು ಅವರಿಗೆ ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡು ನಿಂದಿಸಿದ್ದಾರೆ. ಪ್ರವಾಹ ಸಂಕಷ್ಟದಲ್ಲಿರುವವರಿಗೆ ನೆರವು ನೀಡಿ : ರಾಹುಲ್ ಗಾಂಧಿ