– ಖಲಿಸ್ತಾನಿಗಳು ನನ್ನ ಹತ್ಯೆಗೂ ಯತ್ನಿಸಿದ್ದರು; ರೋಚಕ ಸತ್ಯ ಬಿಚ್ಚಿಟ್ಟ ವರ್ಮಾ
ನವದೆದಹಲಿ/ಒಟ್ಟಾವಾ: ಖಲಿಸ್ತಾನಿ ಪ್ರತ್ಯೇಕತಾವಾದಿ ಗುಂಪಿನ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಹತ್ಯೆ ವಿಚಾರದಲ್ಲಿ ಭಾರತ ಮತ್ತು ಕೆನಡಾ (India – Canada) ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಮುಂದುವರಿದಿದೆ. ಈ ನಡುವೆ ಕೆನಡಾದಲ್ಲಿರುವ ಭಾರತೀಯ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ ಶುಕ್ರವಾರ ಖಲಿಸ್ತಾನಿ ಕಾರ್ಯಕರ್ತರ ದಾಳಿಯ ಕುರಿತು ಮಾತನಾಡಿದ್ದಾರೆ.
ಪಾಡ್‌ಕಾಸ್ಟ್‌ವೊಂದರಲ್ಲಿ ಮಾತನಾಡಿರುವ ಸಂಜಯ್ ಕುಮಾರ್ ವರ್ಮಾ, ನಮ್ಮ ಮೇಲೆ ಹಲ್ಲೆ ನಡೆಸಲು ಹಲವು ಬಾರಿ ಪ್ರಯತ್ನ ನಡೆದಿತ್ತು. ಅವರು (ಖಾಲಿಸ್ತಾನಿ ಬೆಂಬಲಿಗರು) ಕತ್ತಿ ಹಿಡಿದಿರುತ್ತಿದ್ದರು. ಅದು ಕಿರ್ಪಾನ್ (ಸಿಖ್ ಧರ್ಮದಲ್ಲಿ ವಿಶೇಷ ಮಾನ್ಯತೆ ಹೊಂದಿರುವ ಅಸ್ತ್ರ) ಆಗಿರಲಿಲ್ಲ. ಅಲ್ಬರ್ಟಾದಲ್ಲಿ ಇದ್ದಾಗ ಅವರು ಬೀಸಿದ್ದ ಕತ್ತಿ ನನ್ನ ದೇಹದಿಂದ ಕೇವಲ 2- 2.5 ಇಂಚಿನಷ್ಟು ಹತ್ತಿರದವರೆಗೂ ಬಂದಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ಯಾನ್ ಇಂಡಿಯಾ ರೇಡ್ – 4 ರಾಜ್ಯಗಳಲ್ಲಿ ಬಿಷ್ಣೋಯ್ ಗ್ಯಾಂಗ್‌ನ 7 ಶೂಟರ್ಸ್ ಅರೆಸ್ಟ್
- Advertisement
- Advertisement
ಖಲಿಸ್ತಾನಿಗಳು ಕೆನಡಾದಲ್ಲಿ ಉದ್ಯಮಗಳನ್ನು ನಡೆಸುತ್ತಿದ್ದಾರೆ. ಖಲಿಸ್ತಾನ ಹೆಸರಿನಲ್ಲಿ ಮಾನವ ಕಳ್ಳಸಾಗಣೆ, ಮಾದಕವಸ್ತು ಶಸ್ತ್ರಾಸ್ತ್ರ ಸಾಗಣೆ ಹಾಗೂ ಇತರ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಆ ಕೃತ್ಯಗಳಿಂದ ಹಾಗೂ ಗುರುದ್ವಾರಗಳಿಂದ ಸಾಕಷ್ಟು ಹಣ ಗಳಿಸುತ್ತಿದ್ದಾರೆ. ಆ ಹಣವನ್ನು ದುಷ್ಕೃತ್ಯಗಳಿಗೆ ಬಳಸುತ್ತಿದ್ದಾರೆ. ಖಾಲಿಸ್ತಾನಿಗಳು ಬೆರಳೆಣಿಕೆಯಷ್ಟಿದ್ದರೂ, ಗಮನ ಸೆಳೆಯುವುದಕ್ಕಾಗಿ ಮತ್ತು ಕೆನಡಾ ರಾಜಕೀಯ ಬೆಂಬಲಕ್ಕಾಗಿ ಹೆಚ್ಚು ಕೂಗಾಡುತ್ತಾರೆ ಎಂದು ಬಾಂಬ್ ಸಿಡಿಸಿದ್ದಾರೆ.
ಖಲಿಸ್ತಾನಿಗಳಿಗೆ ಟ್ರೂಡೋ ಸರ್ಕಾರದ್ದೇ ಬೆಂಬಲ:
ಕೆನಡಾ ಪ್ರಧಾನಿ ಜಸ್ಟಿನ್ ಟೂಡೊ ವಿರುದ್ಧ ನೇರ ವಾಗ್ದಾಳಿ ನಡೆಸಿ, ಖಾಲಿಸ್ತಾನಿ ಪ್ರತ್ಯೇಕತಾವಾದಿ ಕ್ರಿಮಿನಲ್‌ಗಳ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ಅವರನ್ನು ಪ್ರೋತ್ಸಾಹಿಸುವುದಕ್ಕೆ ಸಮ. ಟ್ಯೂಡೊ ಅವರು ರಾಜಕೀಯ ಲಾಭಕ್ಕಾಗಿ ಖಾಲಿಸ್ತಾನಿಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ವಿದೇಶಿ ಪ್ರವಾಸದ ಮಾಹಿತಿ ಕೊಟ್ಟವರಿಗೆ 10 ಲಕ್ಷ ಬಹುಮಾನ: ಉಗ್ರ ಪನ್ನುನ್ ಘೋಷಣೆ
ಭಾರತೀಯರಿಗೆ ಎಚ್ಚರಿಕೆ:
ಕೆನಡಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಪ್ರಸ್ತುತ, ಖಲಿಸ್ತಾನಿ ಭಯೋತ್ಪಾದಕರು ಮತ್ತು ಉಗ್ರಗಾಮಿಗಳು ಕೆನಡಾದಲ್ಲಿ ವಾಸಿಸುವ ಸುಮಾರು 3,19,000 ವಿದ್ಯಾರ್ಥಿಗಳು ಸೇರಿದಂತೆ ವಿಶಾಲ ಭಾರತೀಯ ಸಮುದಾಯಕ್ಕೆ ಅಪಾಯವನ್ನುಂಟುಮಾಡುವ ಸಂಚು ರೂಪಿಸಿದ್ದಾರೆ. ಹಾಗಾಗಿ ಅಲ್ಲಿನ ಭಾರತೀಯ ವಿದ್ಯಾರ್ಥಿಗಳು ಜಾಗೃತಿ ವಹಿಸುವಂತೆ ಸಲಹೆ ನೀಡಿದ್ದಾರೆ.
ಭಾರತ ಖಲಿಸ್ತಾನಿ ಭಯೋತ್ಪಾದಕ ಎಂದು ಘೋಷಿಸಿರುವ ಕೆನಡಾ ಪ್ರಜೆ ಹರ್ದೀಪ್ ಸಿಂಗ್ ನಿಜ್ಜರ್ 2023ರ ಜೂನ್‌ನಲ್ಲಿ ಹತ್ಯೆಯಾಗಿದ್ದ. ಭಾರತದ ಹೈಕಮಿಷನರ್ ಮತ್ತು ಇತರ ರಾಜತಾಂತ್ರಿಕ ಅಧಿಕಾರಿಗಳನ್ನು ಆ ಪ್ರಕರಣದ ವಿಚಾರಣೆಗೆ ಒಳಪಡಿಸುವುದಾಗಿ ಕೆನಡಾ ಸರ್ಕಾರ ಇತ್ತೀಚೆಗೆ ಹೇಳಿಕೆ ನೀಡಿತ್ತು. ಅದರ ಬೆನ್ನಲ್ಲೇ ಭಾರತವು ತನ್ನ ಹೈಕಮಿಷನರ್ ವರ್ಮಾ ಹಾಗೂ ಇತರ ಐವರು ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿದೆ.