ಮನೆಮನೆಗೆ ಗ್ಯಾರಂಟಿ ಕಾರ್ಡ್ ಎಸೆದ ಹಾಗೆ, ಎಲ್ಲರಿಗೂ ಗ್ಯಾರಂಟಿ ಕೊಡಲು ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Public TV
2 Min Read
SATISH JARKIHOLI 2

ಬೆಳಗಾವಿ: ಚುನಾವಣೆಯಲ್ಲಿ ಮನೆಮನೆಗೆ ಗ್ಯಾರಂಟಿ ಕಾರ್ಡ್ (Guarantee Card) ಎಸೆದ ಹಾಗೆ ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಸಾಧ್ಯವಿಲ್ಲ. ನಿರ್ಗತಿಕರು, ಬಡವರು ಯಾರಿದ್ದಾರೆ ಅವರನ್ನು ಗುರುತಿಸಿ ಗ್ಯಾರಂಟಿ ಯೋಜನೆ ತಲುಪಿಸುತ್ತೇವೆ ಎಂದು ನೂತನ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ.

ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು ತಾಲೂಕಿನ ಬೈಲೂರು ಗ್ರಾಮದಲ್ಲಿ ಮಾತನಾಡಿದ ಅವರು, ರಾಜ್ಯದ ಜನರು ಬಹಳಷ್ಟು ನಿರೀಕ್ಷೆಗಳನ್ನು ನಮ್ಮ ಸರ್ಕಾರದ ಮೇಲೆ ಇಟ್ಟುಕೊಂಡಿದ್ದಾರೆ. ಚುನಾವಣೆಯಲ್ಲಿ ನಾವು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ. ನಾವು ಗ್ಯಾರಂಟಿ ಈಡೇರಿಸಲು ಸಿದ್ಧರಿದ್ದೇವೆ. ಆದರೆ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ. ಗ್ಯಾರಂಟಿ ನೀಡಿದ್ದು ನಾವು, ಅವರಲ್ಲ. ಗ್ಯಾರಂಟಿ ಯೋಜನೆ ಈಡೇರಿಸಲು ಸಮಯ ಬೇಕು. ಯೋಜನೆ ಜಾರಿಗಾಗಿ ಈಗಾಗಲೇ ಸಿದ್ಧತೆ ನಡೆದಿವೆ. ನಾವು ಜಾರಿಗೊಳಿಸುತ್ತೇವೆ ಎಂದರು. ಇದನ್ನೂ ಓದಿ: ನೂತನ ಸಂಸತ್ ಭವನ ಪ್ರವೇಶದ ಅನುಭವ ಹಂಚಿಕೊಂಡ ಸಂಸದೆ, ನಟಿ ಸುಮಲತಾ

satish jarkiholi

ಸ್ವಾಮೀಜಿಗಳ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆಯಲು ಬೈಲೂರು ಮಠಕ್ಕೆ ಬಂದಿರುವೆ. ನಿಜಗುಣಾನಂದ ಸ್ವಾಮೀಜಿ ಹಾಗೂ ನಮ್ಮ ಹೋರಾಟ ಒಂದೇ ಇದೆ. ಸ್ವಾಮೀಜಿಗಳ ಜೊತೆಗೂಡಿ ಮೌಢ್ಯದ ವಿರುದ್ಧ ಹೋರಾಟ ಮಾಡಿದ್ದೇವೆ. ಸ್ವಾಮೀಜಿಗೆ ಮತ್ತಷ್ಟು ಶಕ್ತಿ ತುಂಬಲು ನಾನು ಇಲ್ಲಿಗೆ ಬಂದಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಸಿಎಂ ಆಗಿಯೇ ಆಗ್ತಾರೆ: ಲಕ್ಷ್ಮಿ ಹೆಬ್ಬಾಳ್ಕರ್

ಜಗಜ್ಯೋತಿ ಬಸವೇಶ್ವರ, ಬುದ್ಧ, ಅಂಬೇಡ್ಕರ್ ವಿಚಾರ ಎಲ್ಲೆಡೆ ತಲುಪಿಸಬೇಕು. ಐದು ವರ್ಷಗಳ ಕಾಲ ನಮ್ಮ ಸರ್ಕಾರ ಬಂದಿದೆ. ಈ ವಿಚಾರವನ್ನು ತಲುಪಿಸುವ ಕಾರ್ಯ ಮಾಡುತ್ತೇವೆ. ಹಿಂದಿನಿಂದಲೂ ನಾನು ಮಾನವ ಬಂಧುತ್ವ ವೇದಿಕೆ ಮೂಲಕ ಈ ಕಾರ್ಯ ಮಾಡಿದ್ದೇನೆ. ನಿಜಗುಣಾನಂದ ಸ್ವಾಮೀಜಿ ಕೂಡ ಹೋರಾಟ ಮಾಡಿದ್ದಾರೆ, ನಾವೂ ಕೈ ಜೋಡಿಸಿದ್ದೇವೆ. ನಮ್ಮ ಸರ್ಕಾರ ಬಸವೇಶ್ವರರ ವಿಚಾರಧಾರೆಯಲ್ಲಿ ನಡೆಯುತ್ತದೆ. ಹಿಂದಿನ ಸಿದ್ದರಾಮಯ್ಯ (Siddaramaiah) ಸರ್ಕಾರ ಎಲ್ಲಾ ಕಚೇರಿಗಳಲ್ಲಿ ಬಸವಣ್ಣನ ಫೋಟೊ ಹಾಕಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ನೂತನ ಸಂಸತ್ ಭವನದಲ್ಲಿ ಸೆಂಗೋಲ್ ಪ್ರತಿಷ್ಠಾಪನೆ ಶುಭ ಸಂಕೇತ: ಕಾಶೀ ಜಗದ್ಗುರು

ಬಸವಣ್ಣನನ್ನು (Basavanna) ವಿಶ್ವಗುರು ಎನ್ನುತ್ತಾರೆ. ಆದರೆ ಅವರನ್ನು ವಿಶ್ವಕ್ಕೆ ಪರಿಚಯಿಸುವ ಕೆಲಸವಾಗಿಲ್ಲ. ಬಸವಣ್ಣನನ್ನು ಅರಿತರೆ ಯಾವುದಕ್ಕೂ ಹೆದರುವ ಅವಶ್ಯಕತೆ ಇಲ್ಲ. ನಿಜಗುಣಾನಂದ ಸ್ವಾಮೀಜಿಗಳ ವೈಚಾರಿಕ ಹೋರಾಟ ಇನ್ನೂ ಹೆಚ್ಚಾಗಲಿ, ನಮ್ಮ ಸಹಕಾರವೂ ಅವರಿಗೆ ಇರಲಿದೆ ಎಂದರು. ಇದನ್ನೂ ಓದಿ: ಸೆಂಟ್ರಲ್ ವಿಸ್ತಾ ಉದ್ಘಾಟನೆಯ ಸವಿನೆನಪಿಗೆ ವಿಶೇಷ ಅಂಚೆ ಚೀಟಿ, 75 ರೂ. ನಾಣ್ಯ ಬಿಡುಗಡೆ

Share This Article