ಬೆಂಗಳೂರು: ಕರ್ನಾಟಕ ಹೈಕೋರ್ಟ್ (Karnataka High Court) ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ (N V Anjaria) ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಿಜೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧನೆ ಮಾಡಿದರು. ಇದನ್ನೂ ಓದಿ: ನೀಲಗಿರಿ ತೋಪಿನಲ್ಲಿ ಬಿ.ಟೆಕ್ ವಿದ್ಯಾರ್ಥಿಯ ಬರ್ಬರ ಹತ್ಯೆ – ಸುಟ್ಟು ಹಾಕಿರುವ ಸ್ಥಿತಿಯಲ್ಲಿ ಶವ ಪತ್ತೆ
Advertisement
ಸಿಎಂ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Advertisement
Advertisement
ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರು ಫೆ. 24 ರಂದು ನಿವೃತ್ತಿಯಾಗಲಿರುವ ಹಿನ್ನೆಲೆಯಲ್ಲಿ ಈ ಹಿಂದೆ ಸುಪ್ರೀಂಕೋರ್ಟ್ ಕೊಲಿಜಿಯಂ, ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರ ಹೆಸರನ್ನು ಶಿಫಾರಸು ಮಾಡಿತ್ತು. ಈ ಶಿಫಾರಸಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕಳೆದ ವಾರ ಅಂಕಿತ ಹಾಕಿದ್ದರು. ಇದನ್ನೂ ಓದಿ: ಸಿದ್ರಾಮುಲ್ಲಾ ಖಾನ್ ಎಂದ ಹೆಗಡೆ ವಿರುದ್ಧ ಸುಮೊಟೋ ಕೇಸ್ ದಾಖಲು
Advertisement
ಅಂಜಾರಿಯಾ ಅವರು 2011ರಿಂದ ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಹೈಕೋರ್ಟ್ ನ್ಯಾಯಧೀಶರಾಗಿ ಬಡ್ತಿ ಪಡೆಯುವ ಮೊದಲು ಅವರು ಗುಜರಾತ್ ಹೈಕೋರ್ಟ್‌ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ವಕೀಲರಾಗಿದ್ದರು.