ಬೆಂಗಳೂರು: ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.
ನ್ಯಾಯಮೂರ್ತಿ ಕುಮಾರ್ ಅವರು ಈಗ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದ ಪ್ರಸನ್ನ ಬಿ. ವರಾಳೆ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ ಹಿನ್ನೆಲೆಯಲ್ಲಿ ಹಂಗಾಮಿ ಸಿಜೆಯಾಗಿ ನೇಮಕಗೊಂಡಿದ್ದರು. ಇದನ್ನೂ ಓದಿ: ಹಿಂದೂಗಳಿಗೆ ದೊಡ್ಡ ಗೆಲುವು – ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ
Advertisement
Advertisement
ನ್ಯಾ.ಪಿ.ಎಸ್. ದಿನೇಶ್ ಕುಮಾರ್ ಫೆಬ್ರವರಿ 24ರಂದು ಕರ್ತವ್ಯದಿಂದ ನಿವೃತ್ತರಾಗಲಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅವರ ಅಧಿಕಾರ ಅವಧಿ ಒಂದು ತಿಂಗಳಿಗೂ ಮೊದಲೇ ಕೊನೆಯಾಗಲಿದೆ.
Advertisement
ನ್ಯಾಯಮೂರ್ತಿ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಜನವರಿ 19ರಂದು ಶಿಫಾರಸು ಮಾಡಿತ್ತು. ಇದನ್ನೂ ಓದಿ: ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವನೆ – ಇದು ಪಿಕ್ನಿಕ್ ಸ್ಪಾಟ್ ಅಲ್ಲ ಎಂದು ಕೋರ್ಟ್ ಗರಂ
Advertisement