ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಇದರ ಬೆನ್ನಲ್ಲೇ ನಟಿ ರಮ್ಯಾ (Actress Ramya) ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಜೋಗಿ ನಿರ್ಮಾಪಕರಿಂದ ಮತ್ತೊಂದು ಹೊಸ ಸಾಹಸದ ಸಂಕಲ್ಪ
ನಟಿ ಹಾಗೂ ಮಾಜಿ ಸಂಸದೆ ರಮ್ಯಾ ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ, ಪ್ರಜ್ವಲ್ ಅತ್ಯಾಚಾರ ಪ್ರಕರಣದ ಸಂಬಂಧ ಕೋರ್ಟ್ ನೀಡಿದ ತೀರ್ಪನ್ನು ಹಂಚಿಕೊಂಡಿದ್ದಾರೆ. ಜೊತೆಗೆ “ಎಲ್ಲಾ ಹೆಣ್ಣುಮಕ್ಕಳಿಗೂ ನ್ಯಾಯ ಸಿಕ್ಕಿದೆ” ಎಂದು ಬರೆದುಕೊಂಡಿದ್ದಾರೆ.
ಸದ್ಯ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಶಿಕ್ಷೆಯ ಪ್ರಮಾಣವನ್ನು ನಾಳೆಗೆ ಕಾಯ್ದಿರಿಸಿದೆ. ಇನ್ನೂ ತೀರ್ಪು ಪ್ರಕಟವಾಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದಾರೆ.ಇದನ್ನೂ ಓದಿ: ನಟಿ ಭಾವನಾ ರಾಮಣ್ಣ ಸೀಮಂತ ಶಾಸ್ತ್ರ