ನವದೆಹಲಿ: ಸುಪ್ರೀಂಕೋರ್ಟಿನ 47ನೇ ಮುಖ್ಯ ನ್ಯಾಯಾಧೀಶರಾಗಿ ಶರದ್ ಅರವಿಂದ್ ಬೋಬ್ಡೆ ಪ್ರಮಾಣ ವಚನ ಸ್ವೀಕರಿಸಿದರು. ನ್ಯಾ.ಬೋಬ್ಡೆ ಅವರಿಗೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಪ್ರಮಾಣ ವಚನ ಬೋಧಿಸಿದರು. 23 ಏಪ್ರಿಲ್ 2021ರವರೆಗೆ ಬೋಬ್ಡೆ ಅವರು ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಲಿದ್ದಾರೆ.
Justice SA Bobde swearing in ceremony starts in Rashtrapati Bhavan. Justice SA Bobde taking oath@rashtrapatibhvn #JusticeBobde #JusticeSABobde pic.twitter.com/2oO80TQx5n
— Bar & Bench (@barandbench) November 18, 2019
Advertisement
ಅಯೋಧ್ಯೆ ತೀರ್ಪು ನೀಡಿದ ಸಾಂವಿಧಾನಿಕ ಪೀಠದ ಐವರು ನ್ಯಾಯಾಧೀಶರಲ್ಲಿ ಬೋಬ್ಡೆ ಅವರು ಒಬ್ಬರಾಗಿದ್ದರು. ಮುಖ್ಯ ನ್ಯಾಯಮೂರ್ತಿಗಳಾಗಿದ್ದ ರಂಜನ್ ಗೋಗೋಯ್, ನ್ಯಾಯಮೂರ್ತಿ ಎಸ್‍ಎ ಬೋಬ್ಡೆ, ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್ ಪೀಠ ಅಯೋಧ್ಯೆ ತೀರ್ಪು ಪ್ರಕಟಿಸಿತ್ತು.
Advertisement
Justice Sharad Arvind Bobde sworn in as the Chief Justice of the Supreme Court of India at Rashtrapati Bhavan today. pic.twitter.com/O4q0bzDuEx
— President of India (@rashtrapatibhvn) November 18, 2019
Advertisement
ರಂಜನ್ ಗೋಗೊಯ್ ಅವರ ನಿವೃತ್ತಿ ಬಳಿಕ ನ್ಯಾ. ಶರದ್ ಅರವಿಂದ್ ಬೋಬ್ಡೆ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 2000ರಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಬೋಬ್ಡೆ ಅವರು ನೇಮಕಗೊಂಡರು. ಮಧ್ಯಪ್ರದೇಶದ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ಮಹಾರಾಷ್ಟ್ರ ಮೂಲದವರಾಗಿರುವ ಬೋಬ್ಡೆ ಅವರು ಏಪ್ರಿಲ್ 2013ರಲ್ಲಿ ಸುಪ್ರಿಂಕೋರ್ಟಿಗೆ ಬಡ್ತಿ ಪಡೆದರು. 63 ವರ್ಷದ ಬೋಬ್ಡೆ ಸಿಜೆಐ ಆಗಿ 18 ತಿಂಗಳು ಕಾರ್ಯ ನಿರ್ವಹಿಸಲಿದ್ದಾರೆ.