– ವಿಮಾನದಲ್ಲಿ ತಾಂತ್ರಿಕ ದೋಷ, ಭಾರತದಲ್ಲೇ ಮತ್ತೊಂದು ದಿನ ಕಳೆಯಲಿರುವ ಕೆನಡಾ ಪ್ರಧಾನಿ
ನವದೆಹಲಿ: ಜಿ20 ಶೃಂಗಸಭೆಯ (G20 Summit) ಸಂದರ್ಭದಲ್ಲಿ ತಾವು ಮತ್ತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೊಂದಿಗೆ ಖಲಿಸ್ತಾನಿಗಳ ಹಿಂಸಾಚಾರ ಹಾಗೂ ವಿದೇಶಿ ಹಸ್ತಕ್ಷೇಪದ ಕುರಿತು ಮಾತನಾಡಿರುವುದಾಗಿ ಕೆನಡಾದ (Canada) ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಭಾನುವಾರ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರುಡೋ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾವು 2 ವಿಚಾರವಾಗಿ ಅನೇಕ ಚರ್ಚೆಗಳನ್ನು ನಡೆಸಿದ್ದೇವೆ ಎಂದು ಹೇಳಿದರು. ಖಲಿಸ್ತಾನಿ ಪ್ರತಿಭಟನೆಗಳ ಬಗ್ಗೆ ಮಾತನಾಡುತ್ತಾ, ಕೆನಡಾ ಯಾವಾಗಲೂ ಅಭಿವ್ಯಕ್ತಿ ಸ್ವಾತಂತ್ರ‍್ಯ, ಆತ್ಮಸಾಕ್ಷಿಯ ಸ್ವಾತಂತ್ರ‍್ಯ ಮತ್ತು ಶಾಂತಿಯುತ ಪ್ರತಿಭಟನೆಯ ಸ್ವಾತಂತ್ರ‍್ಯವನ್ನು ರಕ್ಷಿಸುತ್ತದೆ. ಮತ್ತು ಆ ದೇಶಕ್ಕೆ ಅವು ಅತ್ಯಂತ ಮಹತ್ವದ್ದಾಗಿವೆ. ಆದರೂ ಹಿಂಸೆಯನ್ನು ತಡೆಯಲು ಮತ್ತು ದ್ವೇಷದ ವಿರುದ್ಧ ಹಿಂದೆ ಸರಿಯಲು ನಾವು ಯಾವಾಗಲೂ ಸಿದ್ಧರಿರುತ್ತೇವೆ ಎಂದು ಹೇಳಿದರು.
Advertisement
Advertisement
ಸಮುದಾಯದ ವಿಷಯದ ಬಗ್ಗೆ ಹೇಳುವುದಾದರೆ, ಕೆಲವರ ಕ್ರಮಗಳು ಇಡೀ ಸಮುದಾಯ ಅಥವಾ ಕೆನಡಾವನ್ನು ಪ್ರತಿನಿಧಿಸುವುದಿಲ್ಲ ಎಂಬುದನ್ನು ನೆನಪಿಟ್ಟುಕೊಳ್ಳುವುದು ಬಹಳ ಮುಖ್ಯ. ಅದರ ಇನ್ನೊಂದು ಬದಿ ನಾವು ಕಾನೂನಿನ ನಿಯಮವನ್ನು ಗೌರವಿಸುವ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದ್ದೇವೆ. ಮಾತ್ರವಲ್ಲದೇ ವಿದೇಶಿ ಹಸ್ತಕ್ಷೇಪದ ಬಗ್ಗೆ ಮಾತನಾಡಿ ನಾವು ಅದನ್ನು ಮಾಡಿದ್ದೇವೆ ಎಂದು ತಿಳಿಸಿರು. ಇದನ್ನೂ ಓದಿ: 2 ದಿನಗಳ ಜಿ-20 ಶೃಂಗಸಭೆ ಯಶಸ್ವಿ- ಗಾಂಧೀಜಿ ಸ್ಮಾರಕಕ್ಕೆ ವಿಶ್ವನಾಯಕರ ನಮನ
Advertisement
ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ನಾನು ಮತ್ತು ಕೆನಡಾದ ಪ್ರಧಾನ ಮಂತ್ರಿ ವಿವಿಧ ವಲಯಗಳಲ್ಲಿ ಭಾರತ-ಕೆನಡಾ ಬಾಂಧವ್ಯಗಳ ಸಂಪೂರ್ಣ ಶ್ರೇಣಿಯನ್ನು ಚರ್ಚಿಸಿದ್ದೇವೆ ಎಂದು ಹೇಳಿದ್ದಾರೆ.
Advertisement
ವಿಮಾನದಲ್ಲಿ ತಂತ್ರಿಕ ದೋಷ:
ಜಿ20 ಶೃಂಗಸಭೆಯ ಬಳಿಕ ಕೆನಡಾಗೆ ಹೊರಟಿದ್ದ ಜಸ್ಟಿನ್ ಟ್ರುಡೋ ಅವರ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು, ಈ ಹಿನ್ನೆಲೆ ಅವರು ಮತ್ತೊಂದು ದಿನ ಭಾರತದಲ್ಲೇ ಉಳಿಯಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: G20 Summit: ‘ಆರ್‌ಆರ್‌ಆರ್’ ಚಿತ್ರವನ್ನು ಹೊಗಳಿದ ಬ್ರೆಜಿಲ್ ಅಧ್ಯಕ್ಷ
Web Stories