ಶಿವಮೊಗ್ಗ: ಜೋಗ ಜಲಪಾತದ ಬುಡದಲ್ಲಿ ನಾಪತ್ತೆಯಾಗಿದ್ದ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಇಂದು ಪತ್ತೆಯಾಗಿದ್ದಾರೆ.
ಇಂದು 8 ಗಂಟೆಯಿಂದ ಜ್ಯೋತಿರಾಜ್ ಗಾಗಿ ಪತ್ತೆ ಕಾರ್ಯಾಚರಣೆ ಆರಂಭವಾಗಿತ್ತು. ಜಲಪಾತದ ಕೆಳಗೆ ಅಗ್ನಿಶಾಮಕ ದಳ ಮತ್ತು ಸಾಗರ, ಸಿದ್ದಾಪುರ ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದರು. ಕೋತಿರಾಜ್ ಪತ್ತೆಗೆ ಡ್ರೋನ್ ಕ್ಯಾಮೆರಾ ಕೂಡ ಬಳಸಿದ್ದರು.
Advertisement
Advertisement
ಜ್ಯೋತಿರಾಜ್ ಪೆಟ್ಟು ಬಿದ್ದು ಜಲಪಾತದ ನಡುವಿನ ಬಂಡೆಗಳ ನಡುವೆ ಸಿಲುಕಿಕೊಂಡಿದ್ದರು. ಕೈಗೆ ಗಾಯವಾಗಿ ಬಂಡೆ ಬಳಿಯ ಪೊಟರೆಯಲ್ಲಿ ಕುಳಿತಿದ್ದರು. ಡ್ರೋನ್ ಕ್ಯಾಮೆರಾ ಮೂಲಕ ಬಂಡೆಗಳಲ್ಲಿ ಸಿಲುಕಿಕೊಂಡಿದ್ದ ಜ್ಯೋತಿರಾಜ್ ಪತ್ತೆಯಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಬಂಡೆಗಳಲ್ಲಿ ಸಿಲುಕಿಕೊಂಡಿದ್ದ ಜ್ಯೋತಿರಾಜ್ ರನ್ನು ರಕ್ಷಣೆ ಮಾಡಿ ಕರೆತಂದಿದ್ದಾರೆ. ಅಗ್ನಿಶಾಮಕ ದಳ, ಸಾಗರ ಮತ್ತು ಸಿದ್ದಾಪುರ ಪೊಲೀಸರು, ಕೋತಿ ರಾಜ್ ತಂಡದವರು ಮತ್ತು ಸ್ಥಳೀಯರು ಸೇರಿ ಐವತ್ತಕ್ಕೂ ಹೆಚ್ಚು ಜನ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇದನ್ನು ಓದಿ: ನಾನು ಜೀವಂತವಾಗಿ ವಾಪಸ್ ಬರ್ತೀನೋ ಇಲ್ವೋ ಗೊತ್ತಿಲ್ಲ- ಜೋಗಕ್ಕೆ ತೆರಳುವ ಮುನ್ನ ಸೆಲ್ಫೀ ವಿಡಿಯೋ ಮಾಡಿದ್ದ ಕೋತಿರಾಜ್..
Advertisement
Advertisement
ಮೂರು ದಿನಗಳ ಹಿಂದೆ ಬೆಂಗಳೂರಿನ ರಾಮಗೊಂಡನಹಳ್ಳಿಯ ಯುವಕನೊಬ್ಬ ಜೋಗ ಜಲಪಾತದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿತ್ತು. ಆದರೆ ಯುವಕನ ಮೃತದೇಹ ಪತ್ತೆಯಾಗಿರಲಿಲ್ಲ. ಹೀಗಾಗಿ ಯುವಕನ ಶವ ಹುಡುಕಲು ಬಂದಿದ್ದ ಜ್ಯೋತಿರಾಜ್ ಮಂಗಳವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ಜಲಪಾತಕ್ಕೆ ಇಳಿದಿದ್ದರು. ಇದನ್ನು ಓದಿ: ಸ್ಪೈಡರ್ ಮ್ಯಾನ್ ಖ್ಯಾತಿಯ ಕೋತಿ ರಾಜ್ ಜೋಗದಲ್ಲಿ ನಾಪತ್ತೆ