ಭೋಪಾಲ್: ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆಗಳು ನಡೆಯುತ್ತಿದ್ದು, ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕರ ಮುಂದಾಳತ್ವ ವಹಿಸಿರುವ ಜ್ಯೋತಿರಾದಿತ್ಯ ಸಿಂಧಿಯಾ ಹಂದಿಜ್ವರದಿಂದ ಬಳಲುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
Advertisement
ನಾವು ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಆದರೆ ಅವರು ಹಂದಿ ಜ್ವರದಿಂದ ಬಳಲುತ್ತಿದ್ದಾರಂತೆ. ಹೀಗಾಗಿ ನಾವು ಅವರೊಂದಿಗೆ ಮಾತನಾಡಲು ಸಾಧ್ಯವಾಗಿಲ್ಲ ಎಂದು ನಾಯಕರು ಫೋನ್ ಸ್ವಿಚ್ ಆಫ್ ಮಾಡಿಕೊಂಡಿರುವುದಕ್ಕೆ ಅಸಮಾಧಾನವನ್ನು ಹೊರ ಹಾಕಿದ್ದಾರೆ.
Advertisement
ಮಧ್ಯಪ್ರದೇಶದಲ್ಲಿ ಮತದಾರರ ಆದೇಶವನ್ನು ಅಗೌರವಗೊಳಿಸಲು ಪ್ರಯತ್ನಿಸಿದರೆ ಅವರಿಗೆ ರಾಜ್ಯದ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಜ್ಯೋತಿರಾದಿತ್ಯ ಸಿಂಧಿಯಾ ವಿರುದ್ಧ ದಿಗ್ವಿಜಯ್ ಸಿಂಗ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಕಮಲನಾಥ್ ಸಂಪುಟದ ಎಲ್ಲ ಸಚಿವರ ರಾಜೀನಾಮೆ
Advertisement
Digvijaya Singh, Congress: We tried to contact Scindia Ji (Jyotiraditya Scindia) but it is being told that he is suffering from swine flu, so haven't been able to speak to him. #MadhyaPradesh pic.twitter.com/y5Ab984gaq
— ANI (@ANI) March 9, 2020
Advertisement
ಮಧ್ಯಪ್ರದೇಶದ 6 ಸಚಿವರು, 12 ಕಾಂಗ್ರೆಸ್ ಶಾಸಕರು ಈಗಾಗಲೇ ಬೆಂಗಳೂರಿಗೆ ಬಂದಿದ್ದು, ಮಾರತಹಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೆಂಗಳೂರಿಗೆ ಬಂದ ಕೈ ನಾಯಕರು ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರಾಗಿದ್ದು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲ ನಾಯಕರ ಫೋನ್ ಸ್ವಿಚ್ ಆಫ್ ಆಗಿದೆ.
Digvijaya Singh, Congress: Jo sahi Congressi hain woh Congress mein rahega. #MadhyaPradesh https://t.co/KoZAEOdUv9
— ANI (@ANI) March 9, 2020
ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಬಳಿಕ ಮುಖ್ಯಮಂತ್ರಿ ಪಟ್ಟದ ವಿಚಾರದಲ್ಲಿ ಕಮಲನಾಥ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ನಡುವೆ ಸ್ಪರ್ಧೆ ಏರ್ಪಟಿತ್ತು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಕಮಲನಾಥ್ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಿತ್ತು. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕರ ಮಧ್ಯೆ 2 ಬಣಗಳಿದ್ದು 23 ಮಂದಿ ನಾಯಕರು ಸಿಎಂ ಹುದ್ದೆಗೆ ಜ್ಯೋತಿರಾದಿತ್ಯ ಸಿಂಧಿಯಾ ಪರ ಬ್ಯಾಟಿಂಗ್ ಮಾಡಿದ್ದರು. ಈ ಶಾಸಕರ ಪೈಕಿ ಹಲವು ಶಾಸಕರು ಈಗ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.