Connect with us

ಹಿರಿಯ ರಾಜಕಾರಣಿ ಕೆ.ಬಿ.ಶಾಣಪ್ಪ ಕೊರೊನಾಗೆ ಬಲಿ

ಹಿರಿಯ ರಾಜಕಾರಣಿ ಕೆ.ಬಿ.ಶಾಣಪ್ಪ ಕೊರೊನಾಗೆ ಬಲಿ

ಕಲಬುರಗಿ: ಮಾಜಿ ಸಚಿವ ಕೆ. ಬಿ.ಶಾಣಪ್ಪ ಕೊರೊನಾ ಸೋಂಕಿನಿಂದ ಇಂದು ಮೃತಪಟ್ಟಿದ್ದಾರೆ. ಸಚಿವರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಅವರು ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದರು.

ಕೆ. ಬಿ.ಶಾಣಪ್ಪ(79) ಅವರಿಗೆ ಕೆಲವುದಿನಗಳ ಹಿಂದೆ ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜೀಸಿದ್ದಾರೆ. ಮೂಲತಃ ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ಶಾಣಪ್ಪ ಅವರು ಕಲಬುರ್ಗಿ ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದರು. ಪತ್ನಿ ಹಾಗೂ ಇಬ್ಬರು ಪುತ್ರು ಮತ್ತು ಮೂವರು ಪತ್ರಿಯರನ್ನು ಅಗಲಿದ್ದಾರೆ.

ಕಾರ್ಮಿಕ ನಾಯಕರಾಗಿ, ಸಚಿವರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಅವರು ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದರು, ಸದನದಲ್ಲಿ ಸದಾ ನೊಂದ ಜನರ ದನಿಯಾಗಿದ್ದರು. ಅವರ ನಿಧನದಿಂದ ಒಬ್ಬ ನೇರ ನಿಷ್ಠುರ ಸ್ವಭಾವದ ನಾಯಕರನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ ಶೋಕ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವರು, ಮಾಜಿ ರಾಜ್ಯಸಭಾ ಸದಸ್ಯರು ಆಗಿದ್ದ ಹಿರಿಯ ಮುತ್ಸದ್ಧಿ ರಾಜಕಾರಣಿ ಕೆ. ಬಿ. ಶಾಣಪ್ಪನವರು ಕೊರೊನಾ ಸೋಂಕಿನಿಂದ ನಿಧನರಾದ ಸುದ್ದಿ ಮನಸ್ಸಿಗೆ ಅತೀವ ದುಃಖವನ್ನುಂಟು ಮಾಡಿದೆ .ಅಭಿಮಾನಿಗಳು ಮತ್ತು ಕುಟುಂಬವರ್ಗಕ್ಕೆ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Advertisement
Advertisement