ಬೆಂಗಳೂರು: ಸಿದ್ದರಾಮಯ್ಯನವರೇ ನೀವು ರಾಷ್ಟ್ರ ರಾಜಕಾರಣಕ್ಕೆ ಬನ್ನಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ (K.C.Venugopal) ಮತ್ತೆ ಆಹ್ವಾನ ನೀಡಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ (Siddaramaiah) ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕೆ.ಸಿ.ವೇಣುಗೋಪಾಲ್ ಆಹ್ವಾನಿಸಿದರು. ನಿಮ್ಮ ಸೇವೆ ರಾಷ್ಟ್ರಕ್ಕೂ ಬೇಕು. ರಾಷ್ಟ್ರ ಮಟ್ಟಕ್ಕೂ ನೀವು ಬೇಕು ಎಂದು ಸಿಎಲ್‌ಪಿ ಸಭೆಯಲ್ಲಿ ಶಾಸಕರ ಎದುರೇ ವೇಣುಗೋಪಾಲ್ ಪ್ರಸ್ತಾಪ ಇಟ್ಟರು. ಇದನ್ನೂ ಓದಿ: ವಿಧಾನಸೌಧದ ಮುಂದೆ ಡಿಕೆಶಿ ಬೆಂಬಲಿಗರಿಂದ ‘ಡಿಕೆ..ಡಿಕೆ’ ಜಯಘೋಷ – ತಣ್ಣಗಾದ ಸಿದ್ದು
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದ ಸಿದ್ದರಾಮಯ್ಯ ಅವರು ಸಭೆಯಲ್ಲಿ ಶಾಸಕರಿಗೆ ಧನ್ಯವಾದ ತಿಳಿಸಿದರು. ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ, ಮುಂದುವರಿಸುತ್ತೇವೆ ಎಂದು ಶಾಸಕರಿಗೆ ಹೇಳಿದರು.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ಆದರೂ ಉತ್ತಮ ಆಡಳಿತ ನೀಡಿದ್ದೇವೆ. ಗ್ಯಾರಂಟಿಗಳನ್ನ ಯಶಸ್ವಿಯಾಗಿ ಜನರಿಗೆ ತಲುಪಿಸಿದ್ದೇವೆ. ಉತ್ತಮ ಆಡಳಿತ ನೀಡಿದ ಪರಿಣಾಮ ನಾವು ಚುನಾವಣೆ ಗೆಲ್ಲುವಂತಾಯ್ತು. ಬೈಎಲೆಕ್ಷನ್ ಸೇರಿದಂತೆ ಹಲವು ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು. ಇದನ್ನೂ ಓದಿ: ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ – ಜೂ.3ಕ್ಕೆ ಸಿಎಂ ಆಗಿ ಪ್ರಮಾಣವಚನ
