ಬೆಂಗಳೂರು: ರಾಜ್ಯ ಸರ್ಕಾರ ಮೂರು ದಿನ ಶೋಕಾಚರಣೆಯ ಆದೇಶ ಹೊರಡಿಸಿದರೂ ಖಾಸಗಿ ಹೋಟೆಲಿನಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಿದ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಪ್ರಿಯಾಂಕ್ ಖರ್ಗೆ ಕಾರ್ಯಕ್ರಮಕ್ಕೆ ಭಾರೀ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಈ ವಿಚಾರ ಹೈಕಮಾಂಡ್ ಅಂಗಳಕ್ಕೆ ತಲುಪಿತ್ತು. ಹೀಗಾಗಿ ಬೆಳ್ಳಂಬೆಳಗ್ಗೆ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಕೆ.ಸಿ.ವೇಣುಗೋಪಾಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಸರ್ಕಾರದಿಂದ ರಜೆ ಘೋಷಣೆ – ಸಮಾಜ ಕಲ್ಯಾಣ ಇಲಾಖೆಯಿಂದ ಫೈವ್‍ಸ್ಟಾರ್ ಹೋಟೆಲ್‍ನಲ್ಲಿ ಕಾರ್ಯಕ್ರಮ!
Advertisement
Advertisement
ಯಾವ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬ ಸಾಮಾನ್ಯ ಜ್ಞಾನ ನಿಮಗೆ ಇಲ್ಲದೇ ಹೋಯ್ತೇ? ಸಿದ್ದಗಂಗಾ ಶ್ರೀಗಳಂತ ಸಾಧಕರು ಅಗಲಿದಾಗ ಈ ಕಾರ್ಯಕ್ರಮ ನಡೆಸಿ ವಿವಾದ ಮಾಡಿಕೊಳ್ಳಬೇಕಾದ ಅವಶ್ಯಕತೆ ಏನಿತ್ತು? ಈ ವಿಚಾರಗಳು ಭಾವನಾತ್ಮಕವಾದ ವಿಷಯಗಳು ಎನ್ನುವುದು ನಿಮಗೆ ಗೊತ್ತಾಗುದಿಲ್ಲವೇ? ಇದರಿಂದ ಆಗುವ ಪರಿಣಾಮಗಳೇನು ಅಂತ ಯೋಚಿಸುವ ಶಕ್ತಿಯು ನಿಮಗಿಲ್ಲವೇ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲದೇ ಈ ವಿಚಾರವಾಗಿ ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಪ್ರಿಯಾಂಕ್ ಖರ್ಗೆಗೆ ಸೂಚನೆಯನ್ನು ಕೂಡ ವೇಣುಗೋಪಾಲ್ ನೀಡಿದ್ದಾರೆ.
Advertisement
Advertisement
ಸಮಾಜ ಕಲ್ಯಾಣ ಇಲಾಖೆ ಸಮಾನತೆ ಅನ್ವೇಷಣೆ ಸಂವಿಧಾನ ಸಂಭಾಷಣೆ ಕಾರ್ಯಕ್ರಮವನ್ನು ಬೆಂಗಳೂರಿನ ಅಶೋಕ ಹೋಟೆಲ್‍ನಲ್ಲಿ ಆಯೋಜಿಸಿದೆ. ಮಂಗಳವಾರ ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನ ಲಿಂಗೈಕ್ಯರಾದ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಕಾರ್ಯಕ್ರಮವನ್ನು ಮುಂದುವರಿಸಲಾಯಿತು. ಇಡೀ ರಾಜ್ಯವೇ ಶೋಕಾಚರಣೆ ಮಾಡುತ್ತಿರುವಾಗ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ತಪ್ಪು ಎಂದು ಬಿಜೆಪಿ ಆಕ್ಷೇಪಿಸಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ಪ್ರಿಯಾಂಕ್ ಖರ್ಗೆ ವಿರುದ್ಧ ಕಟು ಟೀಕೆ ವ್ಯಕ್ತವಾಗಿತ್ತು.
https://www.youtube.com/watch?v=kX1PUyGudYg
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv