ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (K Chandrashekar Rao) ನೇತೃತ್ವದ ಭಾರತ್ ರಾಷ್ಟ್ರ ಸಮಿತಿ ಪಕ್ಷದ (BRS) ವತಿಯಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಹೈದರಾಬಾದ್‌ನಿಂದ 200 ಕಿ.ಮೀ ದೂರದಲ್ಲಿರುವ ಖಮ್ಮಂನಲ್ಲಿ ಪಕ್ಷದ ಶಕ್ತಿ ಪ್ರದರ್ಶನ ನಡೆಯುತ್ತಿದೆ.
ತೆಲಂಗಾಣ ರಾಷ್ಟ್ರ ಸಮಿತಿಯಿಂದ ಭಾರತ್ ರಾಷ್ಟ್ರ ಸಮಿತಿಯಾಗಿ ಹೆಸರು ಬದಲಿಸಿಕೊಂಡ ಬಳಿಕ ನಡೆಯುತ್ತಿರುವ ಈ ಬೃಹತ್ ಸಮಾವೇಶದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal), ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi Vijayan), ಪಂಜಾಬ್ ಸಿಎಂ ಭಗವಂತ್ ಮಾನ್ (Bhagwant Mann), ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಮತ್ತು ಸಿಪಿಐ ಜನರಲ್ ಸೆಸಿ ಡಿ ರಾಜಾ ಭಾಗಿಯಾಗಿದ್ದು, ಈ ಮೂಲಕ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನವೂ ನಡೆಯುತ್ತಿದೆ.
Advertisement
Advertisement
ಸಮಾವೇಶಕ್ಕೆ ತೆರಳುವ ಮುನ್ನ ಸರ್ಕಾರದಿಂದ ಬೃಹತ್ ಪ್ರಮಾಣದಲ್ಲಿ ನವೀಕರಿಸಲ್ಪಟ್ಟ ಹೈದರಾಬಾದ್ ಬಳಿಯ ಯಾದಾದ್ರಿಯಲ್ಲಿರುವ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಕೆಸಿಆರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಕೆಂಪು ಕೋಟೆಯ ಮೇಲೆ ಒಂದು ದಿನ ಗುಲಾಬಿ ಧ್ವಜ ಹಾರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕುಡಿತದ ಚಟವಿರುವವರು ಕೆಟ್ಟವರಲ್ಲ, ಅವರ ಕುಡಿತ ಕೆಟ್ಟದ್ದು: ವೀರೇಂದ್ರ ಹೆಗ್ಗಡೆ
Advertisement
Advertisement
ಅಬ್ ಕಿ ಬಾರ್ ಕಿಸಾನ್ ಸರ್ಕಾರ್ (ಈ ಬಾರಿ ರೈತರ ಸರ್ಕಾರ) ಘೋಷಣೆ ಕೂಗಿದ ಅವರು, ಹೊಸ ಆರ್ಥಿಕ, ಪರಿಸರ, ನೀರು, ವಿದ್ಯುತ್ ಮತ್ತು ಮಹಿಳಾ ಸಬಲೀಕರಣ ನೀತಿಗಳು ದೇಶದಲ್ಲಿ ಅಗತ್ಯವಿದೆ ಎಂದು ಹೇಳಿದರು. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆನ್ನಲ್ಲೇ ನಡೆಯುತ್ತಿರುವ ಈ ಸಭೆ ರಾಜಕೀಯ ವಲಯದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಜನಪ್ರಿಯ ಬಜೆಟ್ ಬ್ಲೂಪ್ರಿಂಟ್‌ಗೆ ಸಿಎಂ ಸೂಚನೆ- ಎಲೆಕ್ಷನ್ ಬಜೆಟ್‌ನಲ್ಲಿ ಬಂಪರ್ ಗಿಫ್ಟ್ ಸುರಿಮಳೆ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k