ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ನಾಮನಿರ್ದೇಶನಕ್ಕೆ ಎರಡು ದಿನಗಳ ಮೊದಲು ತೆಲಂಗಾಣ ರಾಷ್ಟ್ರ ಸಮಿತಿಯು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಅಧ್ಯಕ್ಷ ಸ್ಥಾನಕ್ಕಾಗಿ ಬೆಂಬಲಿಸುವುದಾಗಿ ತಿಳಿಸಿದೆ.
ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ತೆಲಂಗಾಣ ಸಚಿವ ಕೆ.ಟಿ. ರಾಮರಾವ್ ಅವರು ಕೆ. ಚಂದ್ರಶೇಖರ್ ರಾವ್ ನೇತೃತ್ವದಲ್ಲಿ ಟಿಆರ್‌ಎಸ್ ಪಕ್ಷವು ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸಿದೆ ಎಂದು ತಿಳಿಸಿದರು. ನಮ್ಮ ಸಂಸತ್ ಸದಸ್ಯರೊಂದಿಗೆ ನಾನು ಇಂದು ನಾಮನಿರ್ದೇಶನದಲ್ಲಿ ಟಿಆರ್‌ಎಸ್ ಅನ್ನು ಪ್ರತಿನಿಧಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
Advertisement
President of @trspartyonline Sri KCR Garu has decided to extend support to the candidature of Sri @YashwantSinha Ji in the election for President of India
Along with our Members of Parliament, I will be representing the TRS at the nomination today
— KTR (@KTRTRS) June 27, 2022
ಇಂದು ಯಶವಂತ್ ಸಿನ್ಹಾ ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಕಳೆದ ವಾರ ವಿರೋಧ ಪಕ್ಷಗಳು ಅವರನ್ನು ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಿಸಿದ್ದವು. ಇದಕ್ಕೂ ಮೊದಲು ಎನ್‍ಸಿಪಿ ನಾಯಕ ಶರದ್ ಪವಾರ್, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಮತ್ತು ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಗೋಪಾಲಕೃಷ್ಣ ಗಾಂಧಿ ಅವರು ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಲು ನಿರಾಕರಿಸಿದ್ದರು. ಇದನ್ನೂ ಓದಿ: ನಿಯಮಗಳನ್ನು ಮೀರಿ ಕಲ್ಲು ಕ್ವಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಸ್ಫೋಟ
Advertisement
Advertisement
ನಾಮಪತ್ರ ಸಲ್ಲಿಸಲು ಜೂನ್ 29 ಕೊನೆಯ ದಿನವಾಗಿದ್ದು, ಜುಲೈ 18 ರಂದು ಚುನಾವಣೆ ನಡೆಯಲಿದೆ. ಇದನ್ನೂ ಓದಿ: ರಾಜಧಾನಿಯಲ್ಲಿ ಪ್ರಯಾಣಿಕರಿಗೆ ತಟ್ಟಲಿದೆ ಡೀಸೆಲ್ ಕೊರತೆ ಬಿಸಿ – ಬಸ್ ಸಂಚಾರದಲ್ಲಿ ವ್ಯತ್ಯಯ