ಬೆಂಗಳೂರು: ಇಂದಿನಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ಶಾಲೆಗಳ ವಿದ್ಯಾರ್ಥಿಗಳಿಗೆ, ಸ್ಥಳೀಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಸ್ಯಾನಿಟೈಸರ್, ಮಾಸ್ಕ್ ಮತ್ತು ಪೆನ್ನುಗಳನ್ನು ವಿತರಿಸಿ ಶುಭ ಹಾರೈಸಿದ್ದಾರೆ.
Advertisement
ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯಗಳು. ಯಾವುದೇ ಭಯ, ಹಿಂಜರಿಕೆ ಇಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ವಿನಾಕಾರಣ ಆತಂಕಕ್ಕೆ ಒಳಗಾಗದೆ ಧೈರ್ಯವಾಗಿ ಪರೀಕ್ಷೆ ಬರೆದು ಭವಿಷ್ಯ ರೂಪಿಸಿಕೊಳ್ಳಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು
Advertisement
Advertisement
ಮಹಾಲಕ್ಷ್ಮಿ ಲೇ ಔಟ್ ಕ್ಷೇತ್ರ ವ್ಯಾಪ್ತಿಯ ವಿದ್ಯಾವರ್ಧಕ ಶಾಲೆ ಮತ್ತು ಪಾಂಚಜನ್ಯ ಶಾಲೆಯಲ್ಲಿ ಆರಂಭಿಸಿರುವ ಕೇಂದ್ರಗಳಿಗೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿದರು. ಕ್ಷೇತ್ರ ವ್ಯಾಪ್ತಿಯಲ್ಲಿ 15 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, 3451 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಎಲ್ಲ ಮಕ್ಕಳಿಗೂ ಸಚಿವರು ಮಾಸ್ಕ್, ಸ್ಯಾನಿಟೈಸರ್ ಮತ್ತು ಪರೀಕ್ಷೆ ಬರೆಯಲು ಪೆನ್ನುಗಳನ್ನು ವಿತರಿಸಿದರು.
Advertisement
ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯಗಳು. ಯಾವುದೇ ಭಯ, ಹಿಂಜರಿಕೆ ಇಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ವಿನಾಕಾರಣ ಆತಂಕಕ್ಕೆ ಒಳಗಾಗದೆ ಧೈರ್ಯವಾಗಿ ಪರೀಕ್ಷೆ ಬರೆದು ಭವಿಷ್ಯ ರೂಪಿಸಿಕೊಳ್ಳಿ ಎಂದು ಹಾರೈಸುತ್ತೇನೆ.
All The Best.#SSLCExam@BSBommai @BCNagesh_bjp
— K Gopalaiah (@GopalaiahK) March 28, 2022
ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಎಸ್.ಹರೀಶ್, ವೆಂಕಟೇಶ್ ಮೂರ್ತಿ, ವೆಂಕಟೇಶ್ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.