ಹಿಂದುಳಿದ ವರ್ಗದ ಜನರ ಕಲ್ಯಾಣ ಅರಸು ಅವರ ಕನಸಾಗಿತ್ತು: ಕೆ.ಗೋಪಾಲಯ್ಯ

Public TV
2 Min Read
K Gopalaiah

ಮಂಡ್ಯ: ಹಿಂದುಳಿದ ವರ್ಗದ ಜನರು ಸರ್ವಾಂಗೀಣ ಅಭಿವೃದ್ಧಿಯಾದಾಗ ಮಾತ್ರ ದೇವರಾಜ ಅರಸು ಅವರು ಕಂಡ ಕನಸು ಈಡೇರಿ ದಂತಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ‌ ಕೆ.ಗೋಪಾಲಯ್ಯ ಹೇಳಿದರು.

ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಮಹಾಲಕ್ಷ್ಮಿ ಬಡಾವಣೆಯಲ್ಲಿ ದೇವರಾಜು ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ದೇವರಾಜ ಅರಸು ಅವರ ಕನಸು ಈಡೇರಬೇಕೆಂದರೆ ಹಿಂದುಳಿದ ವರ್ಗವನ್ನು ಮೇಲೆತ್ತುವುದಾಗಿದೆ. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದೆ. ಇದಕ್ಕಾಗಿ ಉತ್ತಮ ವಾದ ಹಾಸ್ಟೆಲ್ ಗಳು ಹಾಗೂ ಶಾಲೆಗಳನ್ನು ನಿರ್ಮಿಸಿದೆ ಎಂದರು.

ವಿದ್ಯಾರ್ಥಿಗಳಿಗೆ ಸಕಲ ಸವಲತ್ತುಗಳನ್ನು ನೀಡಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯವಾಗಿದ್ದು.‌ ಈ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ನಾರಾಯಣಗೌಡ ಅವರೊಂದಿಗೆ ಶಾಸಕರಾದ ಸುರೇಶ್ ಗೌಡರು ಮತ್ತು ನಾನೂ ಜೊತೆಯಾಗಿ ಮೂವರು ಶ್ರಮಿಸುವುದಾಗಿ ಹೇಳಿದರು. ಇದನ್ನೂ ಓದಿ: ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ

ಅರಸೀಕೆರೆಯಲ್ಲಿ 16 ಕೋಟಿ ರೂ ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಿಸಿದ್ದು ಅತ್ಯುತ್ತಮವಾಗಿದೆ. ನಾಗಮಂಗಲದಲ್ಲಿಯೂ ಅದೇ ರೀತಿ ನಿರ್ಮಿಸುವ ಕೆಲಸ ಮಾಡಲಾಗುವುದು. ಉಕ್ರೇನ್‌ನಲ್ಲಿರುವ ರಾಜ್ಯದ ವಿದ್ಯಾರ್ಥಿಗಳ ರಕ್ಷಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡುತ್ತಿದೆ. ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕಿದೆ. ಪ್ರಧಾನಿಗಳು ಅವರ ರಕ್ಷಣೆಗೆ ಟೊಂಕಕಟ್ಟಿ ಕೆಲಸ‌ಮಾಡುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿಜಿಲ್ಲಾಧಿಕಾರಿ ಎಸ್.ಅಶ್ವತಿ,ಜಿಪಂ ಸಿಇಒ ಶ್ರೀಮತಿ ದಿವ್ಯಪ್ರಭು,ನಾಗಮಂಗಲ ತಹಶೀಲ್ದಾರ್‌ ಕುಂಞ ಅಹಮದ್,ತಾಪಂ ಇಒ ವೈ.ಎನ್.ಚಂದ್ರ ಮೌಳಿ ಇತರರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಸಚಿವರು ಮಂಡ್ಯದ ಟಿ.ಬಿ.ಬಡಾವಣೆಯಲ್ಲಿ ನಿರ್ಮಾಣ ಮಾಡಿರುವ ಜಿಲ್ಲಾ ಪೊಲೀಸ್ ವಸತಿ ಗೃಹಗಳನ್ನು ಉದ್ಘಾಟಿಸಿದರು.

Share This Article
Leave a Comment

Leave a Reply

Your email address will not be published. Required fields are marked *