ಮಂಡ್ಯ: ಜಿಲ್ಲೆಯ ಜನರ ಜೀವನಾಡಿ ಮೈಶುಗರ್ ಸಕ್ಕರೆ ಕಾರ್ಖಾನೆ(Mysugar) ಪುನಾರಂಭ ಕುರಿತು ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ(Gopalaiah) ಹೇಳಿದರು.
ಈಗಾಗಲೇ ಕಾರ್ಖಾನೆ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆಯಲಾಗಿದೆ. ಮೊದಲ ಬಾಯ್ಲರ್ ಈಗಾಗಲೇ ಆರಂಭಗೊಂಡಿದ್ದು, ಎರಡನೇ ಬಾಯ್ಲರ್ಗೆ ಇದೇ 19ರಂದು ಚಾಲನೆ ನೀಡಲಾಗುವುದು. ಇದೇ 30ರಿಂದ ರೈತರಿಂದ ಸಂಪೂರ್ಣ ಕಬ್ಬು ಖರೀದಿಸಿ ಅರೆಯುವ ಕೆಲಸ ಮಾಡಲಾಗುವುದು ಎಂದರು.
Advertisement
Advertisement
ಕಬ್ಬು ಖರೀದಿ ತಡವಾದ ಹಿನ್ನೆಲೆಯಲ್ಲಿ ಬೇರೆ ಕಾರ್ಖಾನೆಯವರು ಒಂದು ಈಗಾಗಲೇ ಲಕ್ಷ ಟನ್ ಕಬ್ಬು ಖರೀದಿ ಮಾಡಿದ್ದರೆ, ನಮ್ಮ ಕಾರ್ಖಾನೆಯಿಂದ ಶೇ. ನೂರರಷ್ಟು ಕಬ್ಬು ಖರೀದಿ ಮಾಡಲಾಗುವುದು. ಮಂಡ್ಯ(Mandya) ಜಿಲ್ಲೆಯ ಎಲ್ಲ ತಾಲೂಕಿನ ರೈತರ ಕಬ್ಬು ಖರೀದಿ ಮಾಡಲಾಗುವುದು ಎಂದು ಹೇಳಿದರು.
Advertisement
ಕಾರ್ಖಾನೆ ಆರಂಭ ಕುರಿತು ಮಾತುಕೊಟ್ಟಂತೆ ನಡೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಸೆ.30ರ ನಂತರ ಕಾರ್ಖಾನೆಯನ್ನು ವಿಧ್ಯುಕ್ತವಾಗಿ ಉದ್ಘಾಟಿಸಲಾಗುವುದು. ಶಾಶ್ವತವಾಗಿ ಈ ಕಾರ್ಖಾನೆ ನಡೆಯಬೇಕೆನ್ನುವುದು ಸರ್ಕಾರದ ಆಶಯವಾಗಿದೆ ಎಂದರು. ಇದನ್ನೂ ಓದಿ: ಶಕ್ತಿ, ಸ್ಫೂರ್ತಿ ಸದಾ ನಿಮ್ಮೊಂದಿಗಿರಲಿ: ಮೋದಿ ಹುಟ್ಟುಹಬ್ಬಕ್ಕೆ ರಮ್ಯಾ ವಿಶ್
Advertisement
ಈ ಸಂದರ್ಭದಲ್ಲಿ ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣ ಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್, ಜಿಲ್ಲಾಧಿಕಾರಿ ಎಸ್.ಅಶ್ವತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಸಾಗರ ರಕ್ಷಣೆ ನಮ್ಮೆಲ್ಲರ ಹೊಣೆ: ಗೆಹ್ಲೋಟ್