ಅಧಿಕಾರ, ಸ್ಥಾನಮಾನ ನೀಡಿದ ಬಿಜೆಪಿಯನ್ನು ತೊರೆಯುವ ಪ್ರಶ್ನೆಯೇ ಇಲ್ಲ: ಕೆ.ಗೋಪಾಲಯ್ಯ

Public TV
2 Min Read
gopalaiah

ಬೆಂಗಳೂರು: ಅಧಿಕಾರ, ಸ್ಥಾನ-ಮಾನ ನೀಡಿದ ಬಿಜೆಪಿಯನ್ನು ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್‍ಗೆ ರಾಜೀನಾಮೆ ಕೊಟ್ಟು 17 ಜನ ಬಿಜೆಪಿಯಿಂದ ಗೆದ್ದು ಶಾಸಕರಾದ ಮೇಲೆ ಪಕ್ಷ ಅಧಿಕಾರಕ್ಕೆ ಬಂದಿದೆ. ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ನಡೆದು ಕೊಂಡಿದ್ದಾರೆ. ಯಾರೂ ಕೂಡ ನಾವು ಪಕ್ಷ ತೊರೆಯುವ ಪ್ರಶ್ನೆಯೇ ಬರುವುದಿಲ್ಲ. ಪದೇ ಪದೇ ಇಂತಹ ವಿಚಾರದ ಬಗ್ಗೆ ಗೊಂದಲ ಉಂಟು ಮಾಡುವವರೆ ಇದಕ್ಕೆ ಉತ್ತರ ನೀಡಬೇಕು ಎಂದರು.

gopalaiah 1

ಬರುವ ಚುನಾವಣೆಯಲ್ಲೂ ಬಿಜೆಪಿಯಿಂದಲೇ ಮತ್ತೆ ಕಣಕ್ಕಿಳಿಯುತ್ತೇವೆ. ಇಡೀ ವಿಶ್ವದಲ್ಲಿಯೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಬಿಜೆಪಿ ದೇಶದಲ್ಲೂ ಬಲಿಷ್ಟವಾಗಿ ಬೆಳೆದಿದೆ. ಇಂತಹ ಸದೃಢ ಪಕ್ಷ ನಮಗೆ ಅಧಿಕಾರ, ಸ್ಥಾನ ಮಾನ ಎಲ್ಲವನ್ನೂ ನೀಡಿದೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್‍ಗೆ ಕೊರೊನಾ ಬಂದಿದೆ – ಇಬ್ರಾಹಿಂ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಆಕ್ರೋಶ

ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಅವರು ಜನಪರವಾದ ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದಾರೆ. ಕೊರೊನಾ ಮಧ್ಯೆಯೂ ಅಭಿವೃದ್ಧಿ ಕಾಮಗಾರಿಗಳು ನಿರಂತರವಾಗಿ ನಡೆದಿವೆ. ನಾವೂ ಕೂಡ ನಮ್ಮ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ವಿನಾ:ಕಾರಣ ಪಕ್ಷಾಂತರದ ಬಗ್ಗೆ ಮಾತನಾಡುವುದಕ್ಕೆ ಎಲ್ಲರೂ ತೆರೆ ಎಳೆಯಬೇಕು ಎಂದರು. ಇದನ್ನೂ ಓದಿ: ನನ್ನ ಟ್ವಿಟ್ಟರ್ ರೀಚ್ ಇದ್ದಕ್ಕಿದ್ದಂತೆ ಕಡಿಮೆಯಾಗಿದೆ – ದಾಖಲೆ ಮುಂದಿಟ್ಟು ಪರಾಗ್‍ಗೆ ರಾಹುಲ್ ಪತ್ರ

web bjp logo 1538503012658

ಬೇರೆ ಪಕ್ಷಕ್ಕೆ ಹೋಗುತ್ತೇವೆ ಎಂದು ಯಾರೂ ಕೂಡ ಅರ್ಜಿ ಹಾಕಿ ನಿಂತುಕೊಂಡಿಲ್ಲ. ಬರುವ ವಿಧಾನಸಭಾ ಚುನಾವಣೆಯಲ್ಲೂ ಮತ್ತೆ ಬಿಜೆಪಿಯಿಂದಲೇ ಕಣಕ್ಕೆ ಇಳಿಯುತ್ತೇವೆ. ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಂಜಾಬ್ ಚುನಾವಣೆ: ನವಜೋತ್ ಸಿಂಗ್ ಸಿಧು ವಿರುದ್ಧ ಬಿಕ್ರಮ್ ಸಿಂಗ್ ಕಣಕ್ಕೆ

ಬೇರೆ ಪಕ್ಷದ ಯಾವ ಶಾಸಕರೂ ಕೂಡ ನಮ್ಮೊಂದಿಗೆ ಸಂಪರ್ಕದಲ್ಲಿ ಇಲ್ಲ. ಅದರ ಅವಶ್ಯಕತೆ ಕೂಡ ನಮಗಿಲ್ಲ. ಬಿಜೆಪಿ ನನಗೆ ಎಲ್ಲವನ್ನೂ ನೀಡಿದೆ. ನಾನು ಬೇರೆ ಪಕ್ಷಕ್ಕೆ ಹೋಗಿ ಮಾಡುವುದು ಏನೂ ಇಲ್ಲ. ಬಿಜೆಪಿ ಸಚಿವ ಸ್ಥಾನವನ್ನು ನೀಡಿದೆ. ಎರಡು ಜಿಲ್ಲೆಗಳ ಉಸ್ತುವಾರಿ ನೀಡಿದೆ. ನಮಗೆ ಇದಕ್ಕಿಂತ ಇನ್ನೇನು ಬೇಕಿದೆ. ರಾಜ್ಯದಲ್ಲೂ ಮತ್ತು ಬಿಬಿಎಂಪಿಯಲ್ಲೂ ಕೂಡ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ನೀಡಿದರು.

bommai 7

ಪಕ್ಷ ತೊರೆದು ಬಂದ ಎಲ್ಲಾ ಶಾಸಕರು ಒಟ್ಟಿಗೆ ಇದ್ದೇವೆ. ಮುಖ್ಯಮಂತ್ರಿಗಳ ಬದಲಾವಣೆ ವಿಚಾರಗಳು ಶುದ್ಧಸುಳ್ಳು, ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆಗಿ 6 ತಿಂಗಳಾಗಿದೆ ಅಷ್ಟೇ. ಆದರೆ ಅವರ ಬದಲಾವಣೆ ಕುರಿತು ಸುಳ್ಳು ಸುದ್ದಿಗಳನ್ನು ಕೆಲವರು ಹಬ್ಬಿಸುತ್ತಿದ್ದಾರೆ. ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಸುಭದ್ರವಾಗಿದೆ. ಅವರ ಮುಂದಾಳತ್ವದಲ್ಲಿಯೇ ನಾವು ಚುನಾವಣೆಯನ್ನು ಎದುರಿಸುತ್ತೇವೆ ಎಂದು ಸ್ಪಷ್ಟನೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *