– ಯಾರಿಂದಲೂ ಶಿಸ್ತಿನ ಪಾಠ ಬೇಕಿಲ್ಲ
– ಜಿ.ಸಿ.ಚಂದ್ರಶೇಖರ್ ಪಕ್ಷಕ್ಕೆ ಹೊರೆ
ಬೆಂಗಳೂರು: ಸಿಎಂ ಹೆಸರು ದುರ್ಬಳಕೆ ಮಾಡಿಕೊಳ್ಳೋದು ಬೇಡ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಹೇಳಿಕೆಗೆ ಸಚಿವ ಕೆ.ಎನ್ ರಾಜಣ್ಣ (K.N Rajanna) ತಿರುಗೇಟು ನೀಡಿದ್ದಾರೆ. ಸಿಎಂ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಅನ್ನೋದು ಹೇಳಿಕೆ ಅಷ್ಟೇ, ಎಚ್ಚರಿಕೆ ಅಲ್ಲ. ಎಚ್ಚರಿಕೆ ಗಿಚ್ಚರಿಕೆ ಎಲ್ಲಾ ನಡೆಯಲ್ಲ, ಎಚ್ಚರಿಕೆನಾ ಯಾರು ಕೇಳ್ತಾರೆ ಎಂದು ಗುಡುಗಿದ್ದಾರೆ.
Advertisement
ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ನಾವು ಯಾರ ಹೆಸರನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಅವರು ಎಐಸಿಸಿ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುವುದು ಬೇಡ. ಎಲ್ಲದಕ್ಕೂ ಎಐಸಿಸಿ ಹೇಳಿದೆ ಎಂದು ಎಐಸಿಸಿ ಹೆಸರನ್ನ ಅವರು ದುರ್ಬಳಕೆ ಮಾಡಿಕೊಳ್ಳಬಾರದು. ಇದು ಆರೋಪ ಅಲ್ಲ ವಾಸ್ತವ. ನಾನು ಯಾರಿಂದಲೂ ಶಿಸ್ತಿನ ಪಾಠ ಮಾಡಿಸಿಕೊಳ್ಳಬೇಕಿಲ್ಲ. 50 ವರ್ಷ ಪಕ್ಷಕ್ಕೆ ಕೆಲಸ ಮಾಡಿದ್ದೇನೆ. ನಾನು ಮಾತನಾಡಿದರೆ ಸತ್ಪರಿಣಾಮ ಬೀರುವ ಮಾತನಾಡುತ್ತೇನೆಯೇ ಹೊರತು ದುಷ್ಪರಿಣಾಮ ಬೀರುವ ಮಾತನಾಡಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಉಡುಪಿ| ಹಳಿಯ ಕಬ್ಬಿಣ ಕದ್ದ ಬಾಲಕರಿಗೆ ಥಳಿಸಿದ್ದಕ್ಕೆ ರೈಲ್ವೇ ಸಿಬ್ಬಂದಿ ಮೇಲೆ ಕೇಸ್
Advertisement
Advertisement
ಪೂರ್ಣಾವಧಿ ಸಿಎಂ ವಿಚಾರದಲ್ಲಿ ನಾನೇನು ಹಟಕ್ಕೆ ಬಿದ್ದಿಲ್ಲ. ಅಂತಿಮ ನಿರ್ಧಾರ ಹೈಕಮಾಂಡ್ ಮಾಡಲಿದೆ. ಹೈಕಮಾಂಡ್ ಹೇಳಿದಂತೆ ಲೋಕಸಭೆ ಚುನಾವಣೆಯವರೆಗೆ ಅಧ್ಯಕ್ಷ ಅನ್ನೋ ಕಾರಣಕ್ಕೆ ಕೇಳಿದ್ದೇವೆ. ಉಪ ಮುಖ್ಯಮಂತ್ರಿ ಸ್ಥಾನ ಹೆಚ್ಚುವರಿ ಕೊಟ್ಟಿದ್ದರೆ, ಲೋಕಸಭೆ ಚುನಾವಣೆಯಲ್ಲಿ ಸಹಾಯ ಆಗುತ್ತಿತ್ತು ಈಗ ಕೇಳಲ್ಲ. ಡಿಸಿಎಂ ಸ್ಥಾನ ಅಂದರೆ ಏನು ತಲೆ ಮೇಲೆ ಹೆಚ್ಚುವರಿ ಕಿರೀಟ ಇರಲ್ಲ ಎಂದು ಕಿಡಿಕಾರಿದ್ದಾರೆ.
Advertisement
ಪೂರ್ಣಾವಧಿ ಅಲ್ಪಾವಧಿ ಏನೇ ಇದ್ದರೂ ಎಲ್ಲಾ ಹೈಕಮಾಂಡ್ ತೀರ್ಮಾನ ಮಾಡಲಿದೆ. ಸಿಎಲ್‍ಪಿ ಸಭೆಯಲ್ಲೇ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರೇ ಹೇಳಿದ ಮೇಲೆ ನಮ್ಮದೇನು ಎಂದಿದ್ದಾರೆ.
ನನಗೂ ಡಿ.ಕೆ.ಶಿವಕುಮಾರ್ ಅವರಿಗೂ ವೈಯುಕ್ತಿಕವಾಗಿ ಏನೂ ಇಲ್ಲ. ವಿಚಾರ ಭಿನ್ನ ಇರಬಹುದು ಅಷ್ಟೇ, ವಿಧಾನಸೌಧಕ್ಕೆ ನಾನು ಒಂದು ರಸ್ತೆಯಲ್ಲಿ ಹೋಗೋಣ ಅಂದರೆ ಅವರು ಒಂದು ರಸ್ತೆಯಲ್ಲಿ ಹೋಗೋಣ ಎನ್ನಬಹುದು. ನಾನು ಅವರು ಸಾಕಷ್ಟು ವರ್ಷದ ಸ್ನೇಹಿತರು. ಒಟ್ಟಿಗೆ ವಿದೇಶ ಪ್ರವಾಸ ಮಾಡಿದ್ದೇವೆ. ಅವರನ್ನು ಮನೆಗೆ ಒಂದು ದಿನ ಊಟಕ್ಕೆ ಕರೆಯುತ್ತೇನೆ ಎಂದಿದ್ದಾರೆ.
ಪಕ್ಷದ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಎಚ್ಚರಿಕೆ ವಿಚಾರವಾಗಿ, ನಮಗೆ ಎಚ್ಚರಿಕೆ ನೀಡಲು ಜಿ.ಸಿ.ಚಂದ್ರಶೇಖರ್ ಯಾರು? ಕೆಪಿಸಿಸಿ ಕಾರ್ಯಾಧ್ಯಕ್ಷರಾದರೆ ಅವರಿಗೇನು ಎರಡು ಕೊಂಬು ಇದೆಯಾ? ಶಿಶುಪಾಲ ಕೃಷ್ಣ ಪುರಾಣ ಇದೆಲ್ಲಾ ನಾನು ನಂಬಲ್ಲ. ಪುರಾಣ ಎಲ್ಲಾ ಕಟ್ಟು ಕಥೆ ಅವರೇ ಶಿಶುಪಾಲ. ಇಂತವರು ಪಕ್ಷಕ್ಕೆ ಹೊರೆ, ಅವರ ಹಿನ್ನಲೆ ಏನು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅಪಾರ್ಟ್‌ಮೆಂಟ್‌ನಲ್ಲಿ ನಾಲ್ವರ ಶವ ಪತ್ತೆ – I Am Sorry ಎಂದು ಬರೆದು ಪ್ರಾಣಬಿಟ್ಟ ಕುಟುಂಬ!