ಬೆಂಗಳೂರು: ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ (K.R. Nagar Women Kidnap Case) ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ (H.D.Revanna) ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ.
ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಇದನ್ನೂ ಓದಿ: ಮಾಜಿ ಸಚಿವ ಎಚ್.ಡಿ.ರೇವಣ್ಣ ಬೆನ್ನಲ್ಲೇ ಪತ್ನಿ ಭವಾನಿಗೂ ಸಂಕಷ್ಟ!
ಹೆಚ್.ಡಿ.ರೇವಣ್ಣ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದ್ದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿದ್ದಾರೆಂಬ ಕಾರಣ ನೀಡಿ ಮನವಿ ಮಾಡಿದ್ದರು. ಹೆಚ್.ಡಿ.ರೇವಣ್ಣ ಪರ ವಕೀಲರ ಮನವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.
ಹೆಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೋರ್ಟ್ ತೆರವು ಮಾಡಿದೆ. ಇದನ್ನೂ ಓದಿ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು – ಮೈಸೂರು, ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು

