ಬೆಂಗಳೂರು: ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಅವರನ್ನು ಬೆಂಬಲಿಸಿದ 4 ಜನ ಕಾಂಗ್ರೆಸ್ ಕಾರ್ಪೊರೇಟರ್ಗಳನ್ನು ಕೆಪಿಸಿಸಿ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದೆ.
ಕೆ.ಆರ್.ಪುರಂ ಕ್ಷೇತ್ರ ವ್ಯಾಪ್ತಿಯ ಬಸವನಪುರ ವಾರ್ಡ್‍ನ ಜಯಪ್ರಕಾಶ್, ದೇವಸಂದ್ರ ವಾರ್ಡ್‍ನ ಶ್ರೀಕಾಂತ್, ಎ ನಾರಾಯಣಪುರದ ಸುರೇಶ್ ಹಾಗೂ ವಿಜ್ಞಾನನಗರ ವಾರ್ಡ್‍ನ ಹೆಚ್‍ಜಿ ನಾಗರಾಜ್ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡ ಕಾರ್ಪೊರೇಟರ್ ಗಳು. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ನಾಲ್ಕು ಜನ ಕಾಪೊರೇಟರ್ ಗಳನ್ನು ಉಚ್ಚಾಟನೆ ಮಾಡಿದ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಭೈರತಿಯಿಂದ ಗೌರಿ ಹಬ್ಬಕ್ಕೆ ಸೀರೆ ಗಿಫ್ಟ್
Advertisement
Advertisement
ಅನರ್ಹ ಶಾಸಕ ಭೈರತಿ ಬಸವರಾಜ್ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅವರು ಭೈರತಿ ಬಸವರಾಜ್ ಸೇರಿದಂತೆ 17 ಜನ ಶಾಸಕರನ್ನು ಅನರ್ಹಗೊಳಿಸಿದ್ದರು. ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸಿಕ್ಕಿದೆ. ಹೀಗಾಗಿ ಅನರ್ಹ ಶಾಸಕ ಭೈರತಿ ಬಸವರಾಜ್ ಸ್ವಕ್ಷೇತ್ರ ಕೆ.ಆರ್.ಪೇಟೆಯಿಂದ ಸ್ಪರ್ಧೆಗೆ ಇಳಿದಿದ್ದಾರೆ.
Advertisement
ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ತ್ರಿಕೋನ ಹಣಾಹಣಿ ಏರ್ಪಟ್ಟಿದ್ದು, ಬಿಜೆಪಿಯಿಂದ ಭೈರತಿ ಬಸವರಾಜ್, ಕಾಂಗ್ರೆಸ್‍ನಿಂದ ನಾರಾಯಣಸ್ವಾಮಿ ಹಾಗೂ ಜೆಡಿಎಸ್‍ನಿಂದ ಕೃಷ್ಣಮೂರ್ತಿ ಸ್ಪರ್ಧಿಸುತ್ತಿದ್ದಾರೆ. ಕೆ.ಆರ್.ಪುರಂಯಲ್ಲಿ ಗೆಲುವಿಗೆ ಭರ್ಜರಿ ಪ್ಲ್ಯಾನ್ ರೂಪಿಸಿರುವ ಬಿಜೆಪಿ ಕಂದಾಯ ಸಚಿವ ಆರ್.ಅಶೋಕ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಶಾಸಕ ಸತೀಶ್ ರೆಡ್ಡಿ ಅವರಿಗೆ ಉಸ್ತುವಾರಿ ನೀಡಿದೆ.