ಬೆಂಗಳೂರು: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ
ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ನಾಯಕರಿಗೆ ಒಬ್ಬಬ್ಬರಿಗೆ ಕೊರೊನಾ ಪಾಸಿಟಿವ್ ಬರುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು, ಮಾಜಿ, ಹಾಲಿ ಶಾಸಕಕರಿಗೆ ಕೊರೊನಾ ಪಾಸಿಟಿವ್ ಕಂಡುಬರುತ್ತಿದೆ. ಪಾದಯಾತ್ರೆ ವೇಳೆ ಕರ್ತವ್ಯದಲ್ಲಿ ತೊಡಗಿಕೊಂಡಿದ್ದ 90 ಪೊಲೀಸರಿಗೂ ಸೋಂಕು ದೃಢಪಟ್ಟಿದೆ.
Advertisement
Advertisement
ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ಮೇಕೆದಾಟು ಪಾದಯಾತ್ರೆಯಲ್ಲಿ ಮೂರು ದಿನಗಳ ಕಾಲ ಸಕ್ರಿಯವಾಗಿ ಭಾಗವಹಿಸಿದ್ದ ರಮೇಶ್ ಕುಮಾರ್, ಪ್ರಿಯಾಂಕ್ ಖರ್ಗೆ ಅವರಿಗೆ ಸೋಂಕು ತಗುಲಿದ್ದು, ಅವರೊಟ್ಟಿಗೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಹಲವರಲ್ಲಿ ಆತಂಕ ಮನೆಮಾಡಿದೆ. ಸದ್ಯ ಸೋಂಕು ದೃಢಪಟ್ಟ ಹಿನ್ನೆಲೆ ಶಾಸಕ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ಹೋಂ ಐಸೋಲೇಷನ್‍ಲ್ಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಪ್ರಿಯಾಂಕ್ ಖರ್ಗೆಗೂ ಕೊರೊನಾ ಪಾಸಿಟಿವ್
Advertisement
Advertisement
ಈಗಾಗಲೇ ಅವರ ತಂದೆ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೂ ಸೋಂಕು ದೃಢಪಟ್ಟಿತ್ತು. ಇನ್ನೊಂದೆಡೆ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್, ಸೇಡಂ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್‍ಗೂ ಸಹ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಇದೀಗ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಕೊರೊನಾ ಸೋಂಕು ವಕ್ಕರಿಸಿದೆ. ಪಾಯಾತ್ರೆಯಲ್ಲಿ ಭಾಗವಹಸಿದ್ದ ಹಲವರಿಗೆ ಸೋಂಕು ತಗುಲಿರುವ ಶಂಖೆ ವ್ಯಕ್ತವಾಗಿದೆ. ಇದನ್ನೂ ಓದಿ: ಪಾದಯಾತ್ರೆಯಲ್ಲಿ ಒಬ್ಬರಾದರೂ ಪೊಲೀಸರು ಕೆಲಸ ಮಾಡಿದ್ದಾರಾ: ಡಿಕೆಶಿ ಪ್ರಶ್ನೆ