ಬಿಜೆಪಿ‌ ಪ್ರಣಾಳಿಕೆ ಬಿಡುಗಡೆ ದಿನವೇ ತಮ್ಮ ಪ್ರಣಾಳಿಕೆ ಘೋಷಿಸಿದ ಈಶ್ವರಪ್ಪ

Public TV
1 Min Read
K.S Eshwarappa

– ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ

ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election 2024) ಬಿಜೆಪಿ ಪ್ರಣಾಳಿಕೆ (BJP Manifesto) ಬಿಡುಗಡೆ ದಿನವೇ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ (K.S.Eshwarappa) ತಮ್ಮ ಪ್ರಣಾಳಿಕೆಯನ್ನೂ ಪ್ರಕಟಿಸಿದ್ದಾರೆ.

ಪ್ರಣಾಳಿಕೆ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿರುವ ಈಶ್ವರಪ್ಪ, ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ ಎಂದು ಘೋಷಿಸುವ ಮೂಲಕ ಬಿ.ಎಸ್‌.ಯಡಿಯೂರಪ್ಪ ಕುಟುಂಬಕ್ಕೆ ಈಶ್ವರಪ್ಪ ಠಕ್ಕರ್‌ ಕೊಟ್ಟಿದ್ದಾರೆ. ಇದನ್ನೂ ಓದಿ: 70 ವರ್ಷ ಮೇಲ್ಪಟ್ಟ ಎಲ್ಲರೂ ಆಯುಷ್ಮಾನ್‌ ಭಾರತ್‌ ವ್ಯಾಪ್ತಿಗೆ ಸೇರ್ಪಡೆ – ಬಿಜೆಪಿ ಭರವಸೆಗಳೇನು?

ರಾಜ್ಯ ಬಿಜೆಪಿ ಮಾನ್ಯ ಅಧ್ಯಕ್ಷ ವಿಜಯೇಂದ್ರ ಅವರೆ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ. ಪ್ರಧಾನಿ ಮೋದಿ, ಅಮಿತ್‌ ಶಾ ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share This Article