ಕೊಪ್ಪಳ: ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಪಕ್ಷದ ಕಾರ್ಯಕರ್ತರಿಗೆ ಹೋಳಿಗೆ ಊಟ ಹಾಕಿಸುವ ಮೂಲಕ ನುಡಿದಂತೆ ನಡೆದಿದ್ದಾರೆ.
ನಗರದ ಪಾನಘಂಟಿ ಕಲ್ಯಾಣ ಮಂಟಪದಲ್ಲಿ ನೂರಾರು ಕಾರ್ಯಕರ್ತರಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಸ್ವತಃ ಕೆ.ಎಸ್.ಈಶ್ವರಪ್ಪ ಅವರು ಕಾರ್ಯಕರ್ತರ ಜೊತೆಗೆ ಕುಳಿತು ಊಟ ಸವಿದರು. ಈಶ್ವರಪ್ಪ ಅವರಿಗೆ ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ ಹಾಗೂ ಹಾಲಪ್ಪ ಆಚಾರ್ ಸಾಥ್ ನೀಡಿದರು.
ಈಶ್ವರಪ್ಪ ನುಡಿದಿದ್ದು ಏನು?:
ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ್ದ ಕೆ.ಎಸ್.ಈಶ್ವರಪ್ಪ ಅವರು, ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಒಂದು ಮತ ಹೆಚ್ಚಿಗೆ ಬಂದರೆ ಕಾರ್ಯಕರ್ತರಿಗೆ ಹೋಳಿಗೆ ಊಟ ಹಾಕಿಸುತ್ತೇನೆ ಎಂದು ಹೇಳಿದ್ದರು. ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ಕರಡಿ ಸಂಗಣ್ಣ ಅವರು 11 ಸಾವಿರ ಲೀಡ್ ತೆಗೆದುಕೊಂಡಿದ್ದರು. ಹೀಗಾಗಿ ಕೊಟ್ಟ ಮಾತಿನಂತೆ ಕಾರ್ಯಕರ್ತರಿಗೆ ಹೋಳಿಗೆ ಊಟ ಹಾಕಿಸಿದ್ದಾರೆ.