ರಾಜ್ಯದೆಲ್ಲೆಡೆ ವೀಕೆಂಡ್ ಕರ್ಫ್ಯೂ ಈಶ್ವರಪ್ಪ ಅಸಮಾಧಾನ

Public TV
2 Min Read
k s eashwarppa

ಶಿವಮೊಗ್ಗ: ಕೋವಿಡ್-19 ಹೆಚ್ಚಳ ಹಿನ್ನೆಲೆ ಸರ್ಕಾರ ರಾಜ್ಯದೆಲ್ಲೆಡೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿರುವುದಕ್ಕಾಗಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

night curfew 1

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ ಇರೋದು ಹೌದು, ನಾನು ಇಲ್ಲ ಅಂತಾ ಹೇಳಿಲ್ಲ. ರಾಜ್ಯದ ಎಲ್ಲಾ ಕಡೆಯೂ ಇದು ಇಲ್ಲ. ಕೆಲವೆಡೆ 2-3-4-5 ಈ ರೀತಿ ಇದೆ. ಜಾಸ್ತಿ ಅಂದರೆ 10 ರವರೆಗೆ ಈ ಪ್ರಕರಣಗಳಿವೆ. ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಆದರೆ ರಾಜಧಾನಿಯಲ್ಲಿ ತುಂಬಾ ಜಾಸ್ತಿ ಇದೆ ಅಂದುಕೊಂಡು ಇಡೀ ರಾಜ್ಯಕ್ಕೆ ರೂಲ್ಸ್ ತರುವುದು ಸರಿನಾ ಅಂತಾ ಅನೇಕರು ನನಗೆ ಪ್ರಶ್ನೆ ಮಾಡ್ತಿದ್ದಾರೆ ಎಂದರು. ಇದನ್ನೂ ಓದಿ: ಹುಟ್ಟೂರಿಗೆ ನೆರವಾದ ಸೋನು ಸೂದ್-1,000 ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ

CORONA 1

ಉದಾಹರಣೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಅಷ್ಟಿಲ್ಲ. ಅಷ್ಟು ಇಲ್ಲದಿರುವ ಸಂದರ್ಭದಲ್ಲಿ ನಮ್ಮ ಮೇಲೆ ಹೇರಿದರೆ ನಮ್ಮ ವ್ಯವಹಾರಕ್ಕೆ ತೊಂದರೆ ಆಗುತ್ತದೆ. ಸಾರ್ವಜನಿಕರು ಇದಕ್ಕೆ ಮುಂಜಾಗ್ರತೆ ತೆಗೆದುಕೊಳ್ಳುತ್ತಿದ್ದೇವೆ. ಖಂಡಿತಾ ಮಾಸ್ಕ್ ಧರಿಸುತ್ತೇವೆ. ಸ್ಯಾನಿಟೈಸರ್ ಬಳಸುತ್ತೇವೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತೇವೆ. ದಯವಿಟ್ಟು ನಮಗೆ ತೊಂದರೆ ಕೊಡಬೇಡಿ ಎನ್ನುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾಳೆ ಕ್ಯಾಬಿನೆಟ್‍ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಉಳಿದವರ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ನೂತನ ದಾಖಲೆ ಬರೆದ ಭಾರತ ಮೂಲದ ಹರ್‌ಪ್ರೀತ್ ಚಂಡಿ

Basavaraj bommai

ಬೆಂಗಳೂರಿನಲ್ಲಿ ಬಿಗಿ ಮಾಡಬೇಕು. ಗಡಿ ಜಿಲ್ಲೆಗಳಲ್ಲಿ ಸರ್ಕಾರ ಬಿಗಿ ಮಾಡಲೇ ಬೇಕು. ಇಂತಹ ಸಲಹೆಯನ್ನು ನಾಳೆ ಸಚಿವ ಸಂಪುಟದಲ್ಲಿ ಕೊಡುತ್ತೇನೆ. ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ ಎಲ್ಲಾ ಕಡೆಯಿಂದ ನನಗೆ ಅನೇಕರು ಕರೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಬಿಗಿ ಮಾಡಿ ನಾವು ಸಹಕಾರ ಕೊಡುತ್ತೇವೆ. ನಾವು ಯಾವುದೇ ಖರೀದಿಗೂ ಬೆಂಗಳೂರಿಗೆ ಹೋಗುವುದಿಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ ಶಾಲೆಗಳಿಗೆ ಹೋಗುವುದಕ್ಕೆ ಅವಕಾಶ ಮಾಡಿಕೊಡಿ ಎಂದು ಕೇಳುತ್ತಿದ್ದಾರೆ. ಸಾರ್ವಜನಿಕರ ಅಭಿಪ್ರಾಯವನ್ನು ನಾನು ನಾಳೆ ಕ್ಯಾಬಿನೆಟ್ ಮುಂದೆ ಇಡುತ್ತೇನೆ ಎಂದರು.

ಆಟೋ ರಿಕ್ಷಾ ಡ್ರೈವರ್, ಹಮಾಲರು ಅವರ ಜೀವನಕ್ಕೆ ಎಲ್ಲಿ ಹೋಗಬೇಕು. ಕೂಲಿ ಕಾರ್ಮಿಕರು, ಟೈಲರ್ ಎಲ್ಲರಿಗೂ ತೊಂದರೆ ಆಗುತ್ತದೆ. ಇಡೀ ರಾಜ್ಯದ ಜನರ ಅಭಿಪ್ರಾಯವನ್ನು ಸಚಿವ ಸಂಪುಟದ ಮುಂದೆ, ಮುಖ್ಯಮಂತ್ರಿ ಅವರ ಮುಂದೆ ಇಡುತ್ತೇನೆ ಎಂದು ನುಡಿದರು.

Share This Article