– ಪಾಕಿಸ್ತಾನದ ಪರ ಮರಿ ಖರ್ಗೆ ಇದ್ದಾರೆ
ವಿಜಯಪುರ: ಆಪರೇಷನ್ ಸಿಂಧೂರದ(OPeration Sindoor) ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡಿಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ(K S Eshwarappa) ಕಿಡಿಕಾರಿದರು.
ವಿಜಯಪುರದಲ್ಲಿ(Vijayapura) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ(Priyank Kharge), ಸಂತೋಷ್ ಲಾಡ್, ಕೊತ್ತೂರು ಮಂಜುನಾಥ್, ದಿನೇಶ್ ಗುಂಡೂರಾವ್‌ಗೆ ಗುಂಡು ಹೊಡೆಯಬೇಕು. ಇವರಿಗೆಲ್ಲಾ ಗುಂಡು ಹಾಕಿದರೆ ಮಾತ್ರ ಸರಿ ಹೋಗುತ್ತದೆ. ಇವರೆಲ್ಲಾ ದೇಶದ್ರೋಹಿಗಳು, ಇಂತಹ ದೇಶದ್ರೋಹಿಗಳಿಗೆ ಗುಂಡು ಹಾಕಬೇಕು. ಎಷ್ಟು ವಿಮಾನ ಪತನ ಆದವು ಎಂದು ಯುದ್ಧದ ಬಗ್ಗೆ ಸಾಕ್ಷಿ ಕೇಳ್ತಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಾಧನಾ ಸಮಾವೇಶಕ್ಕೆ ಮಳೆಯ ಭೀತಿ
ಜೂನಿಯರ್ ಕಾಂಗ್ರೆಸ್(Congress) ನಾಯಕರು ಮಾತ್ರ ಟೀಕೆ ಮಾಡುತ್ತಿದ್ದಾರೆ. ಸೀನಿಯರ್ ಖರ್ಗೆ ವಿಧಿ ಇಲ್ಲದೆ ಅಲ್ಲೊಂದು ಇಲ್ಲೊಂದು ಮಾತನಾಡುತ್ತಾರೆ. ಆದ್ರೆ ಪಾಕಿಸ್ತಾನ ಪರವಾಗಿ ಮರಿ ಖರ್ಗೆ ಇದ್ದಾರೆ. ಹರಿಪ್ರಸಾದ್, ಸಂತೋಷ್ ಲಾಡ್, ದಿನೇಶ್ ಗುಂಡೂರಾವ್ ಅವರಂತಹ ಕೆಲವರಿಗೆ ಮಾತ್ರ ಎಲ್ಲಿ ಇದ್ದೇವೆ. ಏನು ಮಾಡುತ್ತಿದ್ದೇವೆ. ಕಾಂಗ್ರೆಸ್ ನಾಯಕರು ಹೌದೋ, ಅಲ್ವೋ ಎಂದೇ ಗೊತ್ತಾಗುತ್ತಿಲ್ಲ. ಇವರ ಬಗ್ಗೆ ಕಾಂಗ್ರೆಸ್‌ನವರಿಂದಲೇ ಟೀಕೆ ಕೇಳಿಬರುತ್ತಿದೆ ಎಂದರು. ಇದನ್ನೂ ಓದಿ: ಹೊಸೂರು ರಸ್ತೆಯಲ್ಲಿ ‘ಸ್ವಿಮ್ಮಿಂಗ್ ಪೂಲ್’ – ವಾಹನ ಸಂಚಾರ ಬಂದ್
ಪ್ರೂಫ್ ಕೇಳೋಕೆ ಪ್ರಿಯಾಂಕ್ ಹಾಗೂ ಲಾಡ್ ಯಾರು? ಇವರಿಗೆ ಆಪರೇಷನ್ ಸಿಂಧೂರದ ಬಗ್ಗೆ ಏನು ಪ್ರೂಫ್ ಕೊಡಬೇಕು. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು, ಎಲ್ಲಾ ಪಕ್ಷದ ಸಭೆಗೆ ಹೋಗಿದ್ದಾರೆ. ಅವರನ್ನೇ ಕೇಳಲಿ ಇವರು. ಅವರು ಸಾಕ್ಷಿ ಕೊಟ್ಟೇ ಕೊಡ್ತಾರೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: Belagavi | 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಅಪ್ರಾಪ್ತ ಸೇರಿ ಇಬ್ಬರ ಬಂಧನ
ಕಾಂಗ್ರೆಸ್ ಸಾಧನಾ ಸಮಾವೇಶ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿಯ ರಸ್ತೆಯ ಒಂದು ಗುಂಡಿ ಕೂಡ ಮುಚ್ಚಿಲ್ಲ. ಒಂದು ಅಭಿವೃದ್ಧಿ ಕೆಲಸ ಮಾಡಿಲ್ಲ. ಇಂತಹದ್ರಲ್ಲಿ ಸಾಧನಾ ಸಮಾವೇಶ ಮಾಡೋದು ಸರಿಯಲ್ಲ ಎಂದು ಕಿಡಿಕಾರಿದರು.
ಬಜೆಟ್‌ನಲ್ಲಿ ಜಾತಿ ಜನಗಣತಿ ಮಾಡೇ ಬಿಡ್ತೇವೆ ಅಂತಾ ಹೇಳಿದ್ರು. ಇವರಿಗೆ ಸಿಎಂ ಸ್ಥಾನ ಉಳಿಸಿಕೊಳ್ಳಬೇಕು ಅಷ್ಟೇ. ಇವರಿಗೆ ಯಾವ ಜಾತಿ ಜನಗಣತಿ ಬೇಡ. ಸಿಎಂ ಸ್ಥಾನ ಉಳಿಸಿಕೊಳ್ಳಲು ಲಿಂಗಾಯತರನ್ನ ಉಳಿಸಿಕೊಳ್ಳಬೇಕು ಅಂತಾ ಮಾಡ್ತಿದ್ದಾರೆ. ಬೇರೆ ಏನು ಸಾಧನೆ ಇದೆ ಇವರದು ಎಂದು ವಾಗ್ದಾಳಿ ನಡೆಸಿದರು.